ETV Bharat / state

ಬೆಂಗಳೂರು: ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಠಾಣೆಗೆ ಪತ್ರ - Bomb Threat Letter

author img

By ETV Bharat Karnataka Team

Published : Apr 22, 2024, 3:43 PM IST

ಹೋಟೆಲ್​ವೊಂದರಲ್ಲಿ ಬಾಂಬ್ ಇಟ್ಟಿರುವುದಾಗಿ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದೆ.

unknown-sent-a-bomb-threat-letter-to-jalahalli-police-station
ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಜಾಲಹಳ್ಳಿ ಪೊಲೀಸ್ ಠಾಣೆಗೆ ಪತ್ರ: ಬಾಂಬ್ ಸ್ಕ್ವಾಡ್, ಶ್ವಾನ ದಳಗಳಿಂದ ಪರಿಶೀಲನೆ

ಬೆಂಗಳೂರು: ಹೋಟೆಲ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಸಿ ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದೆ. 'ನಗರದ ಹೆಚ್ಎಂಟಿ ಮೈದಾನದ ಸಮೀಪದ ಕದಂಬ ಗಾರ್ಡೇನಿಯಾ ಹೋಟೆಲ್‌ನಲ್ಲಿ ಬಾಂಬ್ ಇರಿಸಿದ್ದು, ಸ್ಫೋಟಿಸಲಿದ್ದೇನೆ' ಎಂದು ಪತ್ರದಲ್ಲಿ ಬರೆಯಲಾಗಿದೆ.

ಬೆಳಿಗ್ಗೆ 11:50ಕ್ಕೆ ಠಾಣೆ ತಲುಪಿರುವ ಪತ್ರದಲ್ಲಿ ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಲಾಗಿದೆ. 'ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆಸಿರುವುದು ನಾನೇ. ಅದೇ ರೀತಿಯಲ್ಲಿ ಈ ಹೋಟೆಲ್‌ನಲ್ಲೂ ಬಾಂಬ್ ಸ್ಪೋಟಿಸುತ್ತಿದ್ದೇನೆ" ಎಂದು ಬೆದರಿಕೆ ಹಾಕಲಾಗಿದೆ.

ಕೂಡಲೇ ಎಚ್ಚೆತ್ತ ಪೊಲೀಸರು ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೋಟೆಲ್ ಅಕ್ಕಪಕ್ಕದ ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ.

ಇದನ್ನೂ ಓದಿ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಹಂತಕರು ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ - KILLERS WAS CAUGHT ON CCTV

ETV Bharat Logo

Copyright © 2024 Ushodaya Enterprises Pvt. Ltd., All Rights Reserved.