ETV Bharat / state

'ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಓಡಾಟ'

author img

By ETV Bharat Karnataka Team

Published : Feb 7, 2024, 10:21 PM IST

Updated : Feb 7, 2024, 10:36 PM IST

Minister Ashwini Vaishnav
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ಈರಣ್ಣ ಕಡಾಡಿ ಭೇಟಿ ಮಾಡಿರುವದು.

ಪುಣೆ-ಬೆಳಗಾವಿ ನಡುವೆ ವಿದ್ಯುದ್ದೀಕರಣ ಕಾಮಗಾರಿ ಮುಗಿದ ತಕ್ಷಣ ವಂದೇ ಭಾರತ್ ರೈಲು ಸಂಚಾರ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಬೆಳಗಾವಿ: ಪುಣೆ-ಬೆಳಗಾವಿ ನಡುವೆ ವಿದ್ಯುದ್ದೀಕರಣ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿ ಜನರ ಬಹುನಿರೀಕ್ಷೆಯಂತೆ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದರು.

ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಮಂಗಳವಾರ ಭೇಟಿ ಮಾಡಿದ ಅವರು, ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲಿನ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿದ್ದಾರೆ. ಬಳಿಕ ಸಚಿವರು ವಿದ್ಯುದ್ದೀಕರಣ ಕಾಮಗಾರಿ ಮುಕ್ತಾಯದ ನಂತರ ರೈಲು ಸಂಚಾರ ಪ್ರಾರಂಭಿಸುವ ಬಗ್ಗೆ ಲಿಖಿತ ಮಾಹಿತಿ ನೀಡಿದ್ದಾರೆ.

vande-bharat-train-to-travel-between-belagavi-pune-soon
ರೈಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಈ ಸಂದರ್ಭದಲ್ಲಿ ಬೆಳಗಾವಿ ಕೋರ್ ಡೆವಲಪ್‌ಮೆಂಟ್ ಗ್ರೂಪ್ ಸದಸ್ಯರಾದ ಶೈಲೇಶ್ ಯಲಮಳ್ಳಿ, ಅಶ್ವಿನ್ ಪಾಟೀಲ, ಸಂದೀಪ ಪಾಟೀಲ ಉಪಸ್ಥಿತರಿದ್ದರು.

ಇದನ್ನೂಓದಿ: ಜನರನ್ನು ವಿಜ್ಞಾನದೆಡೆ ಸೆಳೆಯುತ್ತಿದೆ ಏಷ್ಯಾದ ಅತಿ ದೊಡ್ಡ ಬೆಂಗಳೂರಿನ ಸೈನ್ಸ್ ಗ್ಯಾಲರಿ

Last Updated :Feb 7, 2024, 10:36 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.