ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗಾಗಿ ಮಂಡನೆಯಾಗಿರುವ ಜಾತಿ ಗಣತಿ ಸಮೀಕ್ಷೆ ವರದಿಯಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ ಜನಸಂಖ್ಯೆ ಹೊಂದಿರುವ ವೀರಶೈವ ಲಿಂಗಾಯತ ಸಮುದಾಯದವರನ್ನು ಕಡಿಮೆ ಸಂಖ್ಯೆಯಲ್ಲಿ ತೋರಿಸಿರುವುದಕ್ಕೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕಾಂತರಾಜು ಮತ್ತು ಜಯಪ್ರಕಾಶ ಹೆಗಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ನೀಡಿರುವ ಜಾತಿ ಗಣತಿ ಸಮೀಕ್ಷೆ ವರದಿ ವೈಜ್ಞಾನಿಕವಾಗಿಲ್ಲ. ಹಲವಾರು ಲೋಪದೋಷಗಳಿಂದ ಕೂಡಿದ್ದು, ಈ ವರದಿಯನ್ನು ತಿರಸ್ಕರಿಸಿ ಹೊಸದಾಗಿ ಜಾತಿ ಗಣತಿ ಸಮೀಕ್ಷೆ ನಡೆಸಬೇಕೆಂದು ವೀರಶೈವ ಲಿಂಗಾಯತ ಮಹಾಸಭೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿರುವ ಜಾತಿ ಗಣತಿ ವರದಿಯ ಶಿಫಾರಸುಗಳ ಬಗ್ಗೆ ಅಧ್ಯಯನ ನಡೆಸಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಐದು ಜನ ತಜ್ಞರ ಸಮಿತಿಯನ್ನು ರಚನೆ ಮಾಡಿದೆ. ಈ ಸಮಿತಿಯು ಜಾತಿ ಗಣತಿ ವರದಿ ಶಿಫಾರಸ್ಸುಗಳ ಬಗ್ಗೆ ಅಧ್ಯಯನ ನಡೆಸಿ ವೀರಶೈವ ಲಿಂಗಾಯತ ಸಮುದಾಯದ ಸಚಿವರು ಮತ್ತು ಶಾಸಕರುಗಳಿಗೆ ಸಮುದಾಯದ ಜನಪ್ರತಿನಿಧಿಗಳ ನಿಲುವು ಏನಿರಬೇಕೆನ್ನುವ ಬಗ್ಗೆ ಮಾರ್ಗದರ್ಶನ ಮಾಡಲಿದೆ.
ಜಾತಿ ಗಣತಿ ವರದಿ ಬಗ್ಗೆ ಇದೇ 17 ರಂದು ಸಚಿವ ಸಂಪುಟ ಸಭೆಯಲ್ಲಿ ನಡೆಯುವ ಸುದೀರ್ಘ ಚರ್ಚೆ ಸಂದರ್ಭದಲ್ಲಿಯೂ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಹಿರಿಯ ಸಚಿವರಾದ ಅರಣ್ಯ ಸಚಿವರಾಗಿರುವ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಈಶ್ವರ್ ಖಂಡ್ರೆ, ಕೈಗಾರಿಕೆ ಸಚಿವ ಎಂ ಬಿ ಪಾಟೀಲ್, ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಜಾತಿ ಗಣತಿ ಸಮೀಕ್ಷೆ ಹೇಗೆ ಅವೈಜ್ಞಾನಿಕವಾಗಿದೆ ಎನ್ನುವುದನ್ನು ಸಾಕ್ಷ್ಯಾಧಾರಗಳ ಸಮೇತ ಪ್ರತಿಪಾದಿಸುವ ಬಗ್ಗೆ ತಜ್ಞರ ಸಮಿತಿಯು ಸಮುದಾಯದ ಸಚಿವರುಗಳಿಗೆ ಮಾರ್ಗದರ್ಶನ ಮಾಡುವ ಉದ್ದೇಶ ಹೊಂದಿದೆ ಎಂದು ಹೇಳಲಾಗುತ್ತಿದೆ.
ಜಾತಿ ಗಣತಿ ಸಮೀಕ್ಷೆಯ ಲೋಪದೋಷಗಳ ಬಗ್ಗೆ ಹಾಗು ವೀರಶೈವ ಲಿಂಗಾಯತ ಸಮುದಾಯದವರು ಕೇವಲ 66 ಲಕ್ಷ ದಷ್ಟು ಜನಸಂಖ್ಯೆ ಇದ್ದಾರೆ ಎಂದು ತಪ್ಪು ವರದಿ ನೀಡಿದ್ದರ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ರೇಣುಕ ಪ್ರಸನ್ನ ಅವರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ. ಜಾತಿ ಗಣತಿ ಸಮೀಕ್ಷಾ ವರದಿ ಕುರಿತು ಈ ಸಮಿತಿಯು ಸಂಪೂರ್ಣ ಅಧ್ಯಯನ ನಡೆಸಿ ವೀರಶೈವ ಲಿಂಗಾಯತ ಮಹಾಸಭಾಕ್ಕೆ ತನ್ನ ಅಭಿಪ್ರಾಯ ಮತ್ತು ಸಲಹೆಗಳನ್ನು ನೀಡಲಿದೆ. ತಜ್ನರ ಸಲಹೆಗಳನ್ನಾಧರಿಸಿ ಮಹಾಸಭಾ ತನ್ನ ಮುಂದಿನ ಹೋರಾಟದ ರೂಪರೇಷೆ ನಿರ್ಧರಿಸಲಿದೆ.
ಸುಪ್ರೀಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಶಿವರಾಜ ಪಾಟೀಲ್ ಅವರ ನೇತೃತ್ವದಲ್ಲಿ ತಜ್ನರಸಮಿತಿಯನ್ನ ಅಖಿಲ ಭಾರತ ವೀರಶೈವ ಲಿಂಗಾಯತಮಹಾಸಭಾ ರವನೆ ಮಾಡುವ ಸಾಧ್ಯತೆಗಳಿವೆ.
ಈ ತಜ್ಞರ ಸಮಿತಿಯು ಜಾತಿ ಗಣತಿ ವರದಿ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಿ ಮಹಾಸಭಾಕ್ಕೆ ತನ್ನ ಸಲಹೆಗಳನ್ನು ನೀಡಲಿದೆ. ಹತ್ತು ವರ್ಷಗಳಷ್ಟು ಹಳೆಯದಾದ ಜಾತಿ ಗಣತಿ ಸಮೀಕ್ಷಾ ವರದಿಯ ಈಗಿನ ಪ್ರಸ್ತುತತೆ, ವರದಿಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ವೀರಶೈವ ಲಿಂಗಾಯತ ಸಮುದಾಯದ ಜನ ಸಂಖ್ಯೆಯನ್ನು ಕಡಿಮೆ ಪ್ರಮಾಣದಲ್ಲಿ ತೋರಿಸಿರುವುದು. ಹಲವಾರು ಒಳ ಪಂಗಡಗಳನ್ನು ಗಣತಿ ಸಂದರ್ಭದಲ್ಲಿ ಪರಿಗಣಿಸದಿರುವುದು, ದೊಡ್ಡ ಒಳಪಂಗಡವನ್ನು ವಿಭಜಿಸಿರುವುದು, ಸಮೀಕ್ಷೆಯಲ್ಲಿನ ಅವೈಜ್ಞಾನಿಕತೆ ಸೇರಿದಂತೆ ಹಲವಾರು ಮಹತ್ವದ ಅಂಶಗಳ ಬಗ್ಗೆ ತಜ್ಞರ ಸಮಿತಿಯು ಅಧ್ಯಯನ ನಡೆಸಲಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ರೇಣುಕ ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ :