ಶಿವಮೊಗ್ಗ: ಪೆಹಲ್ಗಾಮ್ನಲ್ಲಿ ಉಗ್ರಗಾಮಿಗಳ ಗುಂಡಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ ರಾವ್ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಮಂಜುನಾಥ ರಾವ್ ಅವರ ತಾಯಿ ಸುಮತಿ ರಾವ್, ಪಲ್ಲವಿ ಹಾಗೂ ಅಭಿರಾಮ ಅವರಿಗೆ ಹಾಗೂ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.
ಕುಟುಂಬಸ್ಥರನ್ನು ಭೇಟಿ ಮಾಡಿದ ನಂತರ ಮಾತನಾಡಿದ ವಿಜಯೇಂದ್ರ , ಪೆಹಲ್ಗಾಮ್ ದುರ್ಘಟನೆಯಲ್ಲಿ ಶಿವಮೊಗ್ಗದ ಮಂಜುನಾಥ್ ಉಗ್ರಗಾಮಿಗಳ ಗುಂಡಿಗೆ ಬಲಿಯಾಗಿದ್ದರು. ಇಡಿ ದೇಶದ ಜನ ಈ ಘಟನೆಯನ್ನು ನೋಡಿದೆ. ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಮಂಜುನಾಥ ಅವರ ಕುಟುಂಬವನ್ನು ಭೇಟಿ ಮಾಡಬೇಕು ಅಂದು ಕೊಂಡಿದ್ದೆ. ಅದು ಸಾಧ್ಯವಾಗಿರಲಿಲ್ಲ. ಇಂದು ಶಿವಮೊಗ್ಗಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕುಟುಂಬವನ್ನು ಭೇಟಿ ಮಾಡಿ, ಅವರಿಗೊಂದು ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ. ಆ ಹೆಣ್ಣು ಮಗಳು ಬೇರೆಯವರಿಗೆ ಪ್ರೇರಣೆ ಬರುವಂತೆ ನಡೆದುಕೊಂಡಿದ್ದಾರೆ. ಆ ಸಂದರ್ಭದಲ್ಲಿ ತಾಯಿ ಮಗ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಿದ್ದನ್ನು ನೋಡಿ ಆಶ್ಚರ್ಯ ತಂದಿತ್ತು. ಇಂದು ಆ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ ಎಂದರು.
ಈ ವೇಳೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಪರಿಷತ್ ಸದಸ್ಯರಾದ ಡಾ.ಧನಂಜಯ್ ಸರ್ಜಿ, ರುದ್ರೇಗೌಡ ಸೇರಿದಂತೆ ಇತರರಿದ್ದರು.
ಇದನ್ನು ಓದಿ: ಆಂಧ್ರ, ಕೇರಳಕ್ಕೂ ಹರಡಿದ ದೊಡ್ಡಬಳ್ಳಾಪುರದ ಹಲಸಿನ ಘಮಲು