ETV Bharat / state

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಚುರುಕಿನ ಮತದಾನ: ವೋಟ್​ ಮಾಡಿದ ಕಾಂಗ್ರೆಸ್​, ಬಿಜೆಪಿ, ಪಕ್ಷೇತರ ಅಭ್ಯರ್ಥಿಗಳು

ಆಡಳಿತ, ಪ್ರತಿಪಕ್ಷಗಳ ನಡುವೆ ತೀವ್ರ ಪೈಪೋಟಿಗೆ ಕಾರಣವಾದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಚುರುಕಿನಿಂದ ನಡೆಯುತ್ತಿದೆ. ಕಾಂಗ್ರೆಸ್​, ಬಿಜೆಪಿ, ಪಕ್ಷೇತರ ಅಭ್ಯರ್ಥಿಗಳು ಮತ ಚಲಾಯಿಸಿದರು. ಜೊತೆಗೆ ನಾಗರಿಕರು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

KARNATAKA BY ELECTION  CHANNAPATNA BY ELECTION  SHIGGON BY ELECTION  SANDUR BY ELECTION
ವೋಟ್​ ಮಾಡಿದ ಕಾಂಗ್ರೆಸ್​, ಬಿಜೆಪಿ ಅಭ್ಯರ್ಥಿಗಳು (ETV Bharat)
author img

By ETV Bharat Karnataka Team

Published : Nov 13, 2024, 1:45 PM IST

Karnataka by election: ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಪೈಪೋಟಿಗೆ ಕಾರಣವಾದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನವು ಚುರುಕು ಪಡೆದಿದೆ. ಇಂದು (ಬುಧವಾರ) ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದೆ. ಕಾಂಗ್ರೆಸ್​, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಗಳು ಮತ ಚಲಾಯಿಸಿದರು. ಜೊತೆಗೆ ಬೆಳಗ್ಗೆಯಿಂದಲೇ ಯುವ ಮತದಾರರು ಮತ್ತು ವಯೋವೃದ್ಧರು ಮತಗಟ್ಟೆಗೆ ಬಂದು ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಶಿಗ್ಗಾಂವಿ-ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮತದಾನ ಮಾಡಿದರು. ವೋಟಿಂಗ್​ಗೆ ತೆರಳುವ ಮುನ್ನ ಹುಬ್ಬಳ್ಳಿಯ ಅಶೋಕ ನಗರದ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಶಿಗ್ಗಾಂವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಇಂದು (ಬುಧವಾರ) ಶಿಗ್ಗಾವಿ ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂಬರ್​ 1ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭರತ್ ಬೊಮ್ಮಾಯಿ ಬಹಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿ.ಪಿ. ಯೋಗೇಶ್ವರ್ ಮತದಾನ: ಬೊಂಬೆನಗರಿ ಚನ್ನಪಟ್ಟಣದ ತಾಲೂಕಿನ ಚಕ್ಕೆರೆ ಮತಗಟ್ಟೆ 167ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರು ಕುಟುಂಬ ಸಮೇತರಾಗಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಬಳಿಕ ಮಾತನಾಡಿದ ಸಿಪಿ ಯೋಗೇಶ್ವರ್ ಅವರು, ''ಈ ಚುನಾವಣೆಯಲ್ಲಿ ಕ್ಷೇತ್ರದ ಜನರು ನನ್ನನ್ನ ಕೈಹಿಡಿಯುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು.

ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ​: ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತದಾನಕ್ಕೂ ಮುನ್ನ ಕ್ಷೇತ್ರದ ಶ್ರೀಕೆಂಗಲ್ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ವೋಟ್‌ ಮಾಡಿದ ಸಂಡೂರು ಕಾಂಗ್ರೆಸ್‌ ಅಭ್ಯರ್ಥಿ: ಬಳ್ಳಾರಿಯ ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಕುಟುಂಬ ಸಮೇತರಾಗಿ ಸಂಡೂರು ಪಟ್ಟಣದ 67ನೇ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ನಂತರ ಮಾತನಾಡಿದ ಅವರು, "ನಾನು‌ ಮೊದಲ ಬಾರಿ ಅಭ್ಯರ್ಥಿಯಾಗಿ ಮತದಾನ ಮಾಡಿದ್ದು ಖುಷಿ ನೀಡಿತು. ಎಲ್ಲೆಡೆ ಮತದಾನ ಚೆನ್ನಾಗಿ ನಡೆಯುತ್ತಿದೆ. ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದೇನೆ. ಇದೊಂದು ಹೊಸ ಅನುಭವ. ಮುಕ್ತ, ಶಾಂತಿಯುತ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು. ಹಾಗೆಯೇ ಎಲ್ಲರೂ ತಮ್ಮ ಮತ ಹಕ್ಕು ಚಲಾಯಿಸಬೇಕು. ಸಂವಿಧಾನದ ಆಶಯದಂತೆ ಮತದಾನ ಮಾಡಿ" ಎಂದು ಮನವಿ ಮಾಡಿದರು.

ಸಂಸದ ತುಕಾರಾಂ ಮಾತನಾಡಿ, "ನಾವು ಕುಟುಂಬ ಸಮೇತರಾಗಿ ಮತದಾನ ಮಾಡಿದ್ದು ತುಂಬಾ ಖುಷಿಯಾಗಿದೆ. ಸಂವಿಧಾನದ ಆಶಯದಂತೆ ಎಲ್ಲರೂ ‌ಮತದಾನ ಮಾಡಬೇಕು. ಇದು ನನ್ನ 6ನೇ ಚುನಾವಣೆಯಾಗಿದೆ. ಸಂವಿಧಾನ ‌ವ್ಯವಸ್ಥೆಯಲ್ಲಿ‌ ಯಾರೂ ಮತದಾನದಿಂದ ಹೊರಗುಳಿಯಬಾರದು" ಎಂದು ಹೇಳಿದರು.

ಇದನ್ನೂ ಓದಿ: ಶಿಗ್ಗಾಂವಿ ಮತೋತ್ಸಾಹ: ಫಸ್ಟ್‌ ಟೈಂ ವೋಟ್​ ಮಾಡಿದ ಯುವತಿ, ಎಲ್ಲರಿಗಿಂತ ಮೊದಲು ಬಂದು ಓಟ್‌ ಮಾಡಿದ ವೃದ್ಧ ವ್ಯಕ್ತಿ ಹೇಳಿದ್ದಿಷ್ಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.