ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ವಾಹನ ನಡುರಸ್ತೆಯಲ್ಲಿ ಪಲ್ಟಿಯಾದ ಘಟನೆ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
ದೊಮ್ಮಸಂದ್ರದಿಂದ ಗುಂಜೂರು ಕಡೆಗೆ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಬರುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಈ ದೃಶ್ಯ ಕಾರಿನ ಡ್ಯಾಶ್ ಬೋರ್ಡ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಯಾದಗಿರಿಯ ಮಲ್ಲಿನಾಥ್ ಗಾಯಗೊಂಡಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರತ್‌ಹಳ್ಳಿಯ ಮುನೇಕೊಳಾಲಿನಲ್ಲಿ ಗಾಯಾಳು ವಾಸವಾಗಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಟ್ಯಾಂಕರ್ ವಾಹನ ರಸ್ತೆಯಲ್ಲಿ ಮೂರು ಬಾರಿ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಚಾಲಕನ ಕತ್ತಿನ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಭೀಕರ ಅಪಘಾತ: ಇಬ್ಬರು ಪಾದಚಾರಿಗಳಿಗೆ ಗಂಭೀರ ಗಾಯ - CAR ACCIDENT