ETV Bharat / state

ರಾಜ್ಯದಲ್ಲಿ ಕಡಿಮೆಯಾದ ಮಳೆ ಅಬ್ಬರ: ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - KARNATAKA RAIN FORECAST

ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ತಗ್ಗುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ವರ್ಷಧಾರೆ ಸುರಿಯಲಿದ್ದು, ಹಲವೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

yellow-alert-for-three-districts-as-monsoon-reduced-in-karnataka
ರಾಜ್ಯದಲ್ಲಿ ತಗ್ಗಿದ ಮಳೆ ಅಬ್ಬರ (ETV Bharat)
author img

By ETV Bharat Karnataka Team

Published : June 20, 2025 at 10:04 AM IST

1 Min Read

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆರ್ಭಟಿಸಿದ್ದ ಮುಂಗಾರು ಮಳೆ ಇದೀಗ ಕರಾವಳಿ ಹೊರತುಪಡಿಸಿ ಉಳಿದೆಡೆ ಕಡಿಮೆಯಾಗಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಇಲ್ಲಿ ಜೂನ್ 26ರವರೆಗೂ ಮಳೆಯಾಗಲಿದೆ.
  • ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
  • ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?: ಉಪ್ಪಿನಂಗಡಿ, ಗೇರುಸೊಪ್ಪ, ಮಂಕಿ, ಯಲ್ಲಾಪುರ, ಆಗುಂಬೆ, ಕೊಟ್ಟಿಗೆಹಾರ, ಕಮ್ಮರಡಿ, ಭಾಗಮಂಡಲ, ಹುಂಚದಕಟ್ಟೆ, ಶಿರಾಲಿ, ಕದ್ರಾ, ಸುಳ್ಯ, ಕುಮಟಾ, ಧರ್ಮಸ್ಥಳ, ಬನವಾಸಿ, ಜೋಯ್ಡಾ, ಬೆಳ್ತಂಗಡಿ, ಹೊನ್ನಾವರ, ತ್ಯಾಗರ್ತಿ, ಖಾನಾಪುರ್, ಗುತ್ತಲ್, ಆನವಟ್ಟಿ, ಕಳಸ, ವಿರಾಜಪೇಟೆ, ಅಂಕೋಲಾ, ಪುತ್ತೂರ್, ಮೂಡುಬಿದಿರೆ, ಬಂಟವಾಳ, ಸಿದ್ದಾಪುರ, ಮಾಣಿ, ಕಾರವಾರ ಹಾಗೂ ಮುಂಡಗೋಡಿನಲ್ಲಿ ಗುರುವಾರ ಮಳೆಯಾಗಿದೆ.

ತಾಪಮಾನ: ಎಲ್ಲಿ,ಎಷ್ಟು?: ಬೆಂಗಳೂರು ನಗರದಲ್ಲಿ ಗುರುವಾರ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: ಭಾರತದಾದ್ಯಂತ ನೈರುತ್ಯ ಮಾನ್ಸೂನ್ ಚುರುಕು​: ಹಲವು ರಾಜ್ಯಗಳಿಗೆ ರೆಡ್​​​​​ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ.. ಇರಲಿ ಎಚ್ಚರಿಕೆ!​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.