LIVE: ದಾವಣಗೆರೆಯಲ್ಲಿ ಪ್ರಿಯಾಂಕಾ ಗಾಂಧಿ ಮತಬೇಟೆ - ಸಿದ್ದರಾಮಯ್ಯ, ಡಿಕೆಶಿ ಭಾಗಿ - Priyanka Gandhi Vadra

By ETV Bharat Karnataka Team

Published : May 4, 2024, 4:59 PM IST

Updated : May 4, 2024, 6:01 PM IST

thumbnail

ದಾವಣಗೆರೆ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತಕ್ಕೆ ಮತಬೇಟೆ ಬಿರುಸಿನಿಂದ ಸಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಕಾಂಗ್ರೆಸ್​​ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಕೈ​ ಅಭ್ಯರ್ಥಿ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್​​ ಪರ ಮತಯಾಚನೆ ಮಾಡುತ್ತಿದ್ದಾರೆ.ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಬಹಿರಂಗ ಸಭೆ ನಡೆಯುತ್ತಿದೆ. ಪ್ರಿಯಾಂಕಾ ವಾದ್ರಾ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಜಿಲ್ಲೆಯ ಶಾಸಕರುಗಳಾದ ಡಾ. ಶಾಮನೂರು ಶಿವಶಂಕರಪ್ಪ, ಸಚಿವ ಎಸ್​. ಎಸ್​. ಮಲ್ಲಿಕಾರ್ಜುನ, ಡಿ.ಜಿ. ಶಾಂತನಗೌಡ, ಶಿವಗಂಗಾ ಬಸವರಾಜ್, ಕೆ.ಎಸ್. ಬಸವಂತಪ್ಪ, ದೇವೆಂದ್ರಪ್ಪ, ಶಾಸಕಿ ಲತಾ ಮಲ್ಲಿಕಾರ್ಜುನ್, ಮಾಜಿ ಸಚಿವ ಕೆ.ಸಿ. ಕೊಂಡಯ್ಯ, ನಂದಿಗಾವಿ ಶ್ರೀನಿವಾಸ್, ಅರಸೀಕೆರೆ ಕೊಟ್ರೇಶ್, ಎಸ್. ರಾಮಪ್ಪ, ಪಿ.ಟಿ. ಪರಮೇಶ್ವರ ನಾಯ್ಕ ಸಮಾವೇಶದಲ್ಲಿ ಇದ್ದಾರೆ.ಸಮಾವೇಶಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸುಮಾರು 2 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ನಿಟ್ಟಿನಲ್ಲಿ ಕಾಂಗ್ರೆಸ್​ ಕ್ರಮ ಕೈಗೊಂಡಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್​​ ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರು ಕಣಕ್ಕಿಳಿದಿದ್ದಾರೆ.

Last Updated : May 4, 2024, 6:01 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.