ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಕ್ರಿಕೆಟಿಗ ಕೆ.ಎಲ್. ರಾಹುಲ್

By ETV Bharat Karnataka Team

Published : Feb 19, 2024, 10:44 AM IST

thumbnail

ತುಮಕೂರು: ಮಾಗಡಿ ತಾಲೂಕಿನವರೇ ಆಗಿರುವ ಭಾರತೀಯ ಕ್ರಿಕೆಟ್ ಆಟಗಾರ, ಕನ್ನಡಿಗ ಕೆ.ಎಲ್. ರಾಹುಲ್ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು. ಮಠದ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. ಕೆ.ಎಲ್. ರಾಹುಲ್​ ಅವರೊಂದಿಗೆ ತಂದೆ ಲೋಕೇಶ್, ತಾಯಿ ಲೋಕೇಶ್ವರಿ ಕೂಡ ಬಂದಿದ್ದರು.

ವಿಷಯ ತಿಳಿದು ಸಾವಿರಾರು ಮಕ್ಕಳು ಸೇರಿದಂತೆ ಅಪಾರ ಸಂಖ್ಯೆಯ ಜನರು ಶ್ರೀಮಠಕ್ಕೆ ಆಗಮಿಸಿದ್ದರು. ಮಠಕ್ಕೆ ಆಗಮಿಸಿದ್ದ ರಾಹುಲ್ ಅವರನ್ನು ಕಣ್ತುಂಬಿಕೊಂಡರು. ಈ ವೇಳೆ, ಮುಗಿಬಿದ್ದ ಜನರನ್ನು ನಿಯಂತ್ರಿಸಲು ಮಠದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ರಾಹುಲ್ ತಂದೆ ಲೋಕೇಶ್ ರಾಮನಗರ ಜಿಲ್ಲೆ ಮಾಗಡಿ ತಾಲೂಕು ಕಣ್ಣೂರು ಮೂಲದವರಾಗಿದ್ದಾರೆ. ಅವರು ಸಿದ್ಧಗಂಗಾ ಮಠದ ಭಕ್ತರಾಗಿದ್ದಾರೆ.

ಸಿದ್ಧಲಿಂಗ ಸ್ವಾಮೀಜಿ ಅವರ ಪೂರ್ವಾಶ್ರಮದ ಊರು ಕೂಡ ರಾಮನಗರ ಜಿಲ್ಲೆಯೇ ಆಗಿದ್ದು, ಈ ಸಮಯದಲ್ಲಿ ಪರಸ್ಪರ ಮಾತುಕತೆಯಲ್ಲಿ ತೊಡಗಿದರು. ಅಲ್ಲದೇ ರಾಹುಲ್ ಅವರ ಚಿಕ್ಕಪ್ಪ ಸಿದ್ಧಗಂಗಾ ಮಠದಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಇದೇ ವೇಳೆ ಮಠದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಕೆ. ಎಲ್. ರಾಹುಲ್ ಅವರು ವಿದ್ಯಾರ್ಥಿಗಳನ್ನು ಉದ್ಧೇಶಿಸಿ ಮಾತನಾಡಿದರು.

ಇದನ್ನೂ ಓದಿ: 3ನೇ ಟೆಸ್ಟ್​: ಇಂಗ್ಲೆಂಡ್​ ವಿರುದ್ಧ ಭಾರತಕ್ಕೆ 434 ರನ್​ಗಳ ಜಯ; ಟೆಸ್ಟ್​ ಇತಿಹಾಸದಲ್ಲೇ ದೊಡ್ಡ ಗೆಲುವು

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.