ತಿಪಟೂರಿನ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಡಿ.ಕೆ.ಶಿವಕುಮಾರ್ ಭೇಟಿ; ಅಜ್ಜಯ್ಯಗೆ ವಿಶೇಷ ಪೂಜೆ

By ETV Bharat Karnataka Team

Published : Mar 6, 2024, 12:08 PM IST

thumbnail

ತುಮಕೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್​ ಕಳೆದ ರಾತ್ರಿ ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಠದ ಸ್ವಾಮೀಜಿ ಈ ವೇಳೆ ಹಾಜರಿದ್ದರು. ಸ್ವಾಮೀಜಿಯ ನೇತೃತ್ವದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಡಿ.ಕೆ. ಶಿವಕುಮಾರ್​ ತಮ್ಮ ಕುಟುಂಬ ಸದಸ್ಯರ ಹೆಸರಿನಲ್ಲಿ ಅಜ್ಜಯ್ಯರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಡಿಕೆಶಿ ವಿರುದ್ಧದ ಪ್ರಕರಣವೇನು?: ಡಿ.ಕೆ.ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಹಾಗೂ 2002ರ ಸೆಕ್ಷನ್ 3ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ ಇಲಾಖೆಗಳು ಪ್ರಕರಣ ದಾಖಲಿಸಿಕೊಂಡಿದ್ದವು. ಇದು ಐಪಿಸಿ ಸೆಕ್ಷನ್ 120 ಬಿ ಅಡಿಯಲ್ಲಿ ಶಿಕ್ಷಾರ್ಹ ಕ್ರಿಮಿನಲ್ ಪಿತೂರಿ ಎಂದೂ ಉಲ್ಲೇಖಿಸಲಾಗಿತ್ತು. ಆದರೆ, ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ ಸೆಕ್ಷನ್ 3 ಅನ್ವಯಿಸುವುದಿಲ್ಲ, ಹಾಗಾಗಿ ಪ್ರಕರಣವನ್ನು​ ವಜಾ ಮಾಡಬೇಕು ಎಂದು ಅರ್ಜಿಯಲ್ಲಿ ಡಿಕೆಶಿ ಕೋರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಡಿಕೆಶಿ ವಿರುದ್ಧ ಸೆಕ್ಷನ್ 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಮಂಗಳವಾರ ವಜಾಗೊಳಿಸಿದೆ.

ಇದನ್ನೂ ಓದಿ: ಡಿಕೆಶಿಗೆ ಬಿಗ್​ ರಿಲೀಫ್​: ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.