''ಮುಖ್ಯಮಂತ್ರಿಜೀ ಹೀಗೆಲ್ಲ ಆಗ್ತಿರುತ್ತೆ''; ಸಭಿಕರ 'ಮೋದಿ... ಮೋದಿ' ಘೋಷಣೆ ಬಗ್ಗೆ ಪ್ರಧಾನಿ ಪ್ರತಿಕ್ರಿಯೆ

By ETV Bharat Karnataka Desk

Published : Jan 20, 2024, 1:09 AM IST

thumbnail

ಬೆಂಗಳೂರು: ''ಮುಖ್ಯಮಂತ್ರಿಜೀ ಹೀಗೆಲ್ಲ ಆಗುತ್ತಿರುತ್ತದೆ''... ಇದು ಸಿಎಂ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಹೇಳಿದ ಮಾತು. ಶುಕ್ರವಾರ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಕ್ಯಾಂಪಸ್​ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಪಾಲ್ಗೊಂಡಿದ್ದರು.

ಬಳಿಕ ಪ್ರಧಾನಿ ಭಾಷಣ ಮಾಡುತ್ತಿದ್ದಾಗ ಸಭಿಕರು ''ಮೋದಿ.. ಮೋದಿ...'' ಎಂದು ಘೋಷಣೆ ಕೂಗಿದರು. ಆಗ ಸಭೆಯಲ್ಲಿ ಹಾಜರಿದ್ದ ಸಿದ್ದರಾಮಯ್ಯ ಅವರತ್ತ ನೋಡಿದ ಪಿಎಂ ಮೋದಿ, ''ಮುಖ್ಯಮಂತ್ರಿಜೀ ಈ ರೀತಿ ಆಗುತ್ತಿರುತ್ತದೆ...'' ಎಂದು ಹೇಳಿದರು. ಇದಕ್ಕೆ ಸಿದ್ದರಾಮಯ್ಯ ಸಹ ಮೋದಿ ಅವರ ಕಡೆ ನೋಡಿ ಮುಗುಳ್ನಗೆ ಬೀರಿದರು. 

ಇದಕ್ಕೂ ಮುನ್ನ ಮಹಾರಾಷ್ಟ್ರದ ಸೊಲ್ಲಾಪುರದಿಂದ ಬೆಂಗಳೂರಿಗೆ ಬಂದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್​.ಅಶೋಕ ಹಾಗೂ ಅಧಿಕಾರಿಗಳು ಇದ್ದರು. ಕಾರ್ಯಕ್ರಮದ ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮೋದಿ ಚೆನ್ನೈಗೆ ಪ್ರಯಾಣ ಬೆಳೆಸಿದರು. 

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.