ETV Bharat / bharat

ಭೀಕರ ಸರಣಿ ಅಪಘಾತ: ಆರು ಜನರು ಸಾವು, ಹಲವರ ಸ್ಥಿತಿ ಗಂಭೀರ

ಬಿಹಾರದಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

ROAD ACCIDENT
ಅಪಘಾತದಲ್ಲಿ ಜಖಂ ಆದ ವಾಹನಗಳು (ETV Bharat)
author img

By ETV Bharat Karnataka Team

Published : February 24, 2026 at 8:06 PM IST

1 Min Read
Choose ETV Bharat

ಭಾಗಲ್ಪುರ: ಬಿಹಾರದ ಭಾಗಲ್ಪುರದಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದರೆ, ಹಲವರು ಗಾಯಗೊಂಡ ಘಟನೆ ನಡೆದಿದೆ. ಖಾರಿಕ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್ಡಿ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಅಪಘಾತ ಸಂಭವಿಸಿದೆ.

ವೇಗವಾಗಿ ಬಂದ ಟ್ರಕ್ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ, ಪಿಕಪ್ ವ್ಯಾನ್ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇ-ರಿಕ್ಷಾಗೆ ಬಲವಾಗಿ ಗುದ್ದಿದೆ. ಈ ಸರಣಿ ಅಪಘಾತದಲ್ಲಿ ಒಂದು ಬಸ್​ ಕೂಡ ಡಿಕ್ಕಿ ಹೊಡೆದಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಸ್ಥಳೀಯರ ಸಹಾಯದೊಂದಿಗೆ ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರು. ಆರು ಜನರು ಮೃತಪಟ್ಟ ಬಗ್ಗೆ ಜಿಲ್ಲಾಡಳಿತವು ದೃಢಪಡಿಸಿದೆ. ಘಟನೆಯಲ್ಲಿ ಎಂಟರಿಂದ ಒಂಬತ್ತು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾದ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಗಾಯಾಳುಗಳನ್ನು ತಕ್ಷಣ ಬಿಹ್ಪುರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಭೀರವಾಗಿ ಗಾಯಗೊಂಡ ಕೆಲವರನ್ನು ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಜವಾಹರಲಾಲ್ ನೆಹರು ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮೃತರಲ್ಲಿ ಕೆಲವರು ನವಗಚಿಯಾ ನಿವಾಸಿಗಳಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಿಹ್ಪುರ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾವು