ETV Bharat / bharat

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ': NCERT ಪಠ್ಯದಲ್ಲಿನ ಉಲ್ಲೇಖಕ್ಕೆ ಸುಪ್ರೀಂ ಅಸಮಾಧಾನ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಪ್ರಧಾನ್​ ವಿಷಾದ

ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶವಿರಲಿಲ್ಲ. ನಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ತನಿಖೆಗೂ ಮುಂದಾಗಿದ್ದೇವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

Education Minister expressed regret over NCERT book case, said- respect for judiciary is paramount
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (ETV Bharat)
author img

By ETV Bharat Karnataka Team

Published : February 26, 2026 at 7:24 PM IST

2 Min Read
Choose ETV Bharat

ಜೆಮ್ಶೆಡ್‌ಪುರ(ಜಾರ್ಖಂಡ್​): ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿ ಭ್ರಷ್ಟಾಚಾರ" ಕುರಿತು ಉಲ್ಲೇಖಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​​ ಅಸಮಾಧಾನ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿಷಾದ ವ್ಯಕ್ತಪಡಿಸಿದ್ದಾರೆ.

"ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಇಲ್ಲಿಯವರೆಗೆ ಮುದ್ರಿಸಲಾದ ಎಲ್ಲಾ ಪ್ರತಿಗಳನ್ನು ತಕ್ಷಣವೇ ಹಿಂಪಡೆಯಲು ಆದೇಶ ಹೊರಡಿಸಲಾಗಿದೆ. ನ್ಯಾಯಾಂಗದ ಮೇಲಿನ ಗೌರವ ಅತ್ಯಂತ ಮುಖ್ಯ" ಎಂದು ಅವರು ಹೇಳಿದ್ದಾರೆ.

ಕಾರ್ಯಕ್ರಮವೊಂದರ ನಿಮಿತ್ತವಾಗಿ ಇಂದು ಜೆಮ್ಶೆಡ್‌ಪುರಕ್ಕೆ ಭೇಟಿ ನೀಡಿದ್ದ ಧರ್ಮೇಂದ್ರ ಪ್ರಧಾನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, "ನ್ಯಾಯಾಂಗವು ದೇಶದ ಪ್ರಜಾಪ್ರಭುತ್ವ ರಚನೆಯ ಪ್ರಮುಖ ಆಧಾರಸ್ತಂಭವಾಗಿದ್ದು, ಸರ್ಕಾರವು ಅದನ್ನು ಯಾವಾಗಲೂ ಸಂಪೂರ್ಣವಾಗಿ ಗೌರವಿಸುತ್ತದೆ. ನ್ಯಾಯಾಲಯವು ಏನೇ ಹೇಳಿದ್ದರೂ, ನಾವು ಅದನ್ನು ಸಂಪೂರ್ಣವಾಗಿ ಪಾಲಿಸುತ್ತೇವೆ. ನಡೆದ ಘಟನೆಯಿಂದ ನನಗೆ ತುಂಬಾ ಬೇಸರವಾಗಿದೆ. ಅಲ್ಲದೇ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಕುರಿತು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಪ್ರಕಟವಾದ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಂತಹ ವಿಷಯ ಪಸ್ತಾಪವಾಗಿದ್ದರೆ ನಾವು ವಿಷಾದಿಸುತ್ತೇವೆ. ಸರ್ಕಾರಕ್ಕೆ ನ್ಯಾಯಾಂಗ ವ್ಯವಸ್ಥೆ ಮೇಲೆ ಗೌರವವಿದೆ. ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ಕಾಪಾಡಿಕೊಳ್ಳುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ" ಎಂದು ಸ್ಪಷ್ಟಪಡಿಸಿದ್ದಾರೆ.

"ಪುಸ್ತಕಗಳನ್ನು ವಾಪಸ್ ಪಡೆಯಲಾಗಿದೆ: "ಪಠ್ಯಪುಸ್ತಕದ ಎಲ್ಲಾ ಪ್ರತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಸಮಗ್ರ ತನಿಖೆಗೆ ಆದೇಶಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಕಾನೂನಿನ ಪ್ರಕಾರ ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಭವಿಷ್ಯದಲ್ಲಿ ಶೈಕ್ಷಣಿಕ ಪಠ್ಯಪುಸ್ತಕಗಳ ಪ್ರಕಟಣೆಗೂ ಮುನ್ನ ಪರಿಶೀಲನೆ ಮಾಡಲಾಗುವುದು. ಹೀಗೆ ಮಾಡುವುದರಿಂದ ಇಂತಹ ತಪ್ಪುಗಳು ಮತ್ತೆ ಸಂಭವಿಸುವುದಿಲ್ಲ ಎಂದು ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿದರು.

8ನೇ ತರಗತಿಯ NCERT ಪರಿಷ್ಕೃತ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ವಿಭಾಗ ಸೇರ್ಪಡೆ ವಿಚಾರದ ಕುರಿತಂತೆ ಸುಪ್ರೀಂ ಕೋರ್ಟ್ ಬುಧವಾರಷ್ಟೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಕೈಗೆತ್ತಿಕೊಂಡಿತ್ತು. ಅಲ್ಲದೇ ಯಾವುದೇ ಸಂಸ್ಥೆಯನ್ನು ದೂಷಿಸಲು ಅವಕಾಶ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಅಧ್ಯಾಯವಿರುವ NCERT ಪಠ್ಯಪುಸ್ತಕವನ್ನು ನಿಷೇಧಿಸಿರುವ ಸುಪ್ರೀಂ, ಅದರ ಎಲ್ಲಾ ಭೌತಿಕ ಪ್ರತಿಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ಡಿಜಿಟಲ್ ರೂಪಗಳನ್ನು ತೆಗೆದುಹಾಕುವಂತೆ ಆದೇಶಿಸಿದೆ.

ಗುರುವಾರ ಈ ಬಗ್ಗೆ ವಿಚಾರ ಮುಂದುವರೆಸಿದ ಸುಪ್ರೀಂಕೋರ್ಟ್,​ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಇದು ಆಳವಾಗಿ ಬೇರೂರಿರುವ ಪಿತೂರಿ ಮತ್ತು ಉತ್ತಮವಾಗಿ ಯೋಜಿಸಿರುವ ಕೃತ್ಯ ಎಂದೂ ಕರೆದಿದೆ.

ಇದನ್ನೂ ಓದಿ: