ಖನಿಜ ವಲಯದ ಸಹಕಾರಕ್ಕೆ ಭಾರತ - ಕೆನಡಾ ನಡುವೆ ಮಹತ್ದದ ಒಪ್ಪಂದ; ಸಮಗ್ರ ಆರ್ಥಿಕ ಪಾಲುದಾರಿಕೆ ಅಂತಿಮಗೊಳಿಸುವ ಪ್ರತಿಜ್ಞೆ
ಭಾರತ ಮತ್ತು ಕೆನಡಾ ಪ್ರಜಾಪ್ರಭುತ್ವ ಮೌಲ್ಯಗಳಲ್ಲಿ ಅಚಲ ನಂಬಿಕೆ ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

By PTI
Published : March 2, 2026 at 2:18 PM IST
ನವದೆಹಲಿ: ನವೀಕರಿಸಬಹುದಾದ ಇಂಧನ ಬಳಕೆ ಉತ್ತೇಜನ ಮತ್ತು ನಿರ್ಣಾಯಕ ಖನಿಜ ವಲಯದಲ್ಲಿ ಸಹಕಾರ ಹೆಚ್ಚಿಸುವ ಗುರಿಯೊಂದಿಗೆ ಸೋಮವಾರ ಭಾರತ ಮತ್ತು ಕೆನಡಾ ತಿಳಿವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿವೆ. ದ್ವಿಪಕ್ಷೀಯ ಪಾಲುದಾರಿಕೆ ಬಲಪಡಿಸುವ ಸಂಬಂಧ ಇಲ್ಲಿನ ಹೈದರಾಬಾದ್ ಹೌಸ್‌ನಲ್ಲಿ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಮಾತುಕತೆ ನಡೆಸಿದರು.
ಬಳಿಕ, ಕೆನಡಾದ ಪ್ರಧಾನಿ ಕಾರ್ನಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಭಾರತ ಮತ್ತು ಕೆನಡಾ ಶೀಘ್ರದಲ್ಲೇ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದವನ್ನು ಅಂತಿಮಗೊಳಿಸಲು ನಿರ್ಧರಿಸಿವೆ" ಎಂದು ಘೋಷಿಸಿದರು.
ಜಗತ್ತಿನಲ್ಲಿ ಬಹಳ ಕಡಿಮೆ ಜನರು ಎರಡು ದೇಶಗಳ ಕೇಂದ್ರ ಬ್ಯಾಂಕ್‌ಗಳನ್ನು ಮುನ್ನಡೆಸಿದ್ದಾರೆ. ನಮ್ಮ ಮೊದಲ ಸಭೆಯಿಂದಲೇ ನಮ್ಮ ಸಂಬಂಧಗಳಲ್ಲಿ ಹೊಸ ಶಕ್ತಿ, ಪರಸ್ಪರ ನಂಬಿಕೆ ಮತ್ತು ಸಕಾರಾತ್ಮಕತೆ ಹೊರಹೊಮ್ಮಿದೆ. ಕಾರ್ನಿ ಅವರ ಭಾರತ ಭೇಟಿ ಒಂದು ಪ್ರಮುಖ ಮೈಲಿಗಲ್ಲು ಎಂದು ಪ್ರಧಾನಿ ಮೋದಿ ಬಣ್ಣಿಸಿದರು.
ಅಲ್ಲದೆ, ಕಳೆದ ವರ್ಷ ಕೆನಡಾದಲ್ಲಿ ನಡೆದ G7 ಸಭೆಯ ಸಂದರ್ಭದಲ್ಲಿ ತಮ್ಮೊಂದಿಗಿನ ಆತ್ಮೀಯ ಭೇಟಿಯನ್ನು ನೆನಪಿಸಿಕೊಂಡ ಮೋದಿ, ಎರಡು ದೇಶಗಳ ಕೇಂದ್ರ ಬ್ಯಾಂಕಿಂಗ್ ನಾಯಕತ್ವದಲ್ಲಿ ಕಾರ್ನಿ ಅವರ ಪಾತ್ರಕ್ಕಾಗಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಆವೇಗಕ್ಕೆ ನನ್ನ ಸ್ನೇಹಿತ ಪ್ರಧಾನಿ ಕಾರ್ನಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಭಾರತ ಮತ್ತು ಕೆನಡಾ ಪ್ರಜಾಪ್ರಭುತ್ವ ಮೌಲ್ಯಗಳಲ್ಲಿ ಅಚಲ ನಂಬಿಕೆ ಹೊಂದಿವೆ. ನಾವು ವೈವಿಧ್ಯತೆಯನ್ನು ಆಚರಿಸುತ್ತೇವೆ. ಮಾನವೀಯತೆಯ ಕಲ್ಯಾಣವು ನಮ್ಮ ಹಂಚಿಕೆಯ ದೃಷ್ಟಿಕೋನವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಇಂದು ಉಭಯ ನಾಯಕರು ವ್ಯಾಪಾರ ಸಮುದಾಯದ ಸದಸ್ಯರನ್ನು ಭೇಟಿ ಮಾಡಲಿದ್ದೇವೆ. ಸದಸ್ಯರ ಸಲಹೆಗಳು ಎರಡೂ ದೇಶಗಳ ನಡುವಿನ ಆರ್ಥಿಕ ಸಹಕಾರಕ್ಕಾಗಿ ಮಾರ್ಗಸೂಚಿ ರೂಪಿಸಲು ಸಹಾಯವಾಗಲಿವೆ ಎಂದು ಪ್ರಧಾನಿ ತಿಳಿಸಿದರು.
ಇದನ್ನೂ ಓದಿ: ಇರಾನ್ ದಾಳಿ ಖಂಡಿಸಿದ ಮೋದಿ: ನಿಮ್ಮೊಂದಿಗೆ ನಾವಿದ್ದೇವೆ - ಯುಎಇ ಅಧ್ಯಕ್ಷರಿಗೆ ಪ್ರಧಾನಿ ಫೋನ್
ನಾಗರಿಕ ಪರಮಾಣು ಇಂಧನ ವಲಯದಲ್ಲಿ ನಾವು ದೀರ್ಘಾವಧಿಯ ಯುರೇನಿಯಂ ಪೂರೈಕೆಗಾಗಿ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದ್ದೇವೆ. ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳು ಮತ್ತು ಸುಧಾರಿತ ರಿಯಾಕ್ಟರ್‌ಗಳ ಮೇಲೂ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಪ್ರಧಾನಿ ಹೇಳಿದರು.
ಒಪ್ಪಂದದಡಿ ಕೆನಡಾ ಭಾರತಕ್ಕೆ ಯುರೇನಿಯಂ ಪೂರೈಸಲಿದೆ. ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದದ ನಿಯಮಗಳನ್ನು ಎರಡೂ ಕಡೆಯವರು ಇದೇ ವೇಳೆ ದೃಢಪಡಿಸಿದರು. ಭಾರತ ಮತ್ತು ಕೆನಡಾ ಪ್ರಜಾಪ್ರಭುತ್ವ ಮೌಲ್ಯಗಳಲ್ಲಿ ಅಚಲ ನಂಬಿಕೆ ಹೊಂದಿವೆ. ನಾವು ವೈವಿಧ್ಯತೆಯನ್ನು ಆಚರಿಸುತ್ತೇವೆ. ಮಾನವೀಯತೆಯ ಯೋಗಕ್ಷೇಮವು ನಮ್ಮ ಹಂಚಿಕೆಯ ದೃಷ್ಟಿಕೋನವಾಗಿದೆ. ಈ ದೃಷ್ಟಿಕೋನವು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ಹೇಳಿದರು.
ಭಾರತ ಮತ್ತು ಕೆನಡಾ ರಕ್ಷಣಾ ಕೈಗಾರಿಕೆಗಳು ಮತ್ತು ಕಡಲ ಕ್ಷೇತ್ರದ ಜಾಗೃತಿಯನ್ನು ಹೆಚ್ಚಿಸಲು ಸಹ ಕೆಲಸ ಮಾಡುತ್ತವೆ ಎಂದು ಪ್ರಧಾನಿ ಮೋದಿ ಇದೇ ವೇಳೆ ಘೋಷಿಸಿದರು.
ಮುಂದಿನ ಭವಿಷ್ಯಕ್ಕಾಗಿ ತಮ್ಮದೇ ಹಾದಿ ರೂಪಿಸಿಕೊಳ್ಳುತ್ತಿವೆ - ಕಾರ್ನಿ: ಕೆನಡಾ ಮತ್ತು ಭಾರತ ಭವಿಷ್ಯಕ್ಕಾಗಿ ತಮ್ಮದೇ ಆದ ಹಾದಿಯನ್ನು ರೂಪಿಸಿಕೊಳ್ಳುತ್ತಿವೆ. ಇದು ಹೊಸ ಮಹತ್ವಾಕಾಂಕ್ಷೆಗಳೊಂದಿಗೆ ಮೌಲ್ಯಯುತ ಪಾಲುದಾರಿಕೆಯ ವಿಸ್ತರಣೆಯಾಗಿದೆ ಎಂದು ಕಾರ್ನಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

