ಬುಡಕಟ್ಟು ಬಾಲಕಿ ಮೇಲೆ ಮೂವರು ಅಪ್ರಾಪ್ತರು ಸೇರಿ ಐವರು ಆರೋಪಿಗಳಿಂದ ಸಾಮೂಹಿಕ ಅತ್ಯಾಚಾರ
ಜಾರ್ಖಂಡ್ನ ಲತೇಹರ್ ಜಿಲ್ಲೆಯ ಮಹುವಾದ್ ಎಂಬಲ್ಲಿ ಬುಡಕಟ್ಟು ಜನಾಂಗದ ಅಪ್ರಾಪ್ತೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

Published : February 28, 2026 at 4:22 PM IST
ಲತೇಹರ್ (ಜಾರ್ಖಂಡ್): ಜಿಲ್ಲೆಯ ಮಹುವಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಡಕಟ್ಟು ಜನಾಂಗದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ, ಮೂವರು ಅಪ್ರಾಪ್ತ ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮಹುವಾದ್ ಪೊಲೀಸ್ ಠಾಣಾಧಿಕಾರಿ ಮನೋಜ್ ಕುಮಾರ್ ಅವರು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಇಬ್ಬರು ವಯಸ್ಕ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಆದರೆ, ಅಪ್ರಾಪ್ತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದರು.
ಮದುವೆಗೆ ಹೋದವಳ ಅಪಹರಿಸಿ ರೇಪ್: ಸಂತ್ರಸ್ತೆಯು ಗ್ರಾಮದಲ್ಲಿ ಇಂದು ನಡೆದ ಮದುವೆ ಸಮಾರಂಭಕ್ಕೆ ಮುಂಚಿತವಾಗಿಯೇ ತೆರಳಿದ್ದಳು. ಈ ಕಾರ್ಯಕ್ರಮಕ್ಕೆ ಅದೇ ಗ್ರಾಮದ ಐವರು ಆರೋಪಿಗಳೂ ಅತಿಥಿಗಳಾಗಿ ಭಾಗವಹಿಸಿದ್ದರು. ಇಂದು (ಶನಿವಾರ) ಬೆಳಗಿನಜಾವ 3 ರಿಂದ 4 ರ ನಡುವಿನಲ್ಲಿ ಐವರು ಆರೋಪಿಗಳು ಅಪ್ರಾಪ್ತೆಯನ್ನು ಅಪಹರಿಸಿ ಕಾಡಿಗೆ ಎಳೆದೊಯ್ದಿದ್ದಾರೆ. ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ನಂತರ, ಅಪ್ತಾಪ್ತೆಯು ಹೇಗೋ ಮನೆಗೆ ಮರಳುವಲ್ಲಿ ಯಶಸ್ವಿಯಾಗಿದ್ದಾಳೆ. ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದಾಳೆ. ಮಾಹಿತಿ ಪಡೆದ ನಂತರ, ಹುಡುಗಿಯ ಕುಟುಂಬಸ್ಥರು ಮಹುವಾದ್ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದಾರೆ.
ದೂರಿನ ನಂತರ, ಸ್ಟೇಷನ್ ಹೌಸ್ ಆಫೀಸರ್ ಮನೋಜ್ ಕುಮಾರ್ ಅವರ ನೇತೃತ್ವದ ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿ ಎಲ್ಲಾ ಐವರು ಆರೋಪಿಗಳನ್ನು ಗುರುತಿಸಿದರು. ಈ ಆರೋಪಿಗಳಲ್ಲಿ ಇಬ್ಬರು ವಯಸ್ಕರಾಗಿದ್ದು, ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಯಿತು. ಆದರೆ, ಇತರ ಮೂವರು ಅಪ್ರಾಪ್ತ ವಯಸ್ಕರಾದ್ದರಿಂದ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.
ಪೊಲೀಸರು ಇಡೀ ಪ್ರಕರಣವನ್ನು ತನಿಖೆ ಮಾಡುತ್ತಿದ್ದಾರೆ. ಸಂತ್ರಸ್ತೆಯ ತಾಯಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ ಹೇಳಿದ್ದಾರೆ.
ಇವುಗಳನ್ನೂ ಓದಿ:

