ಎರಡು ಬಸ್‌ಗಳ ನಡುವೆ ಭೀಕರ ಅಪಘಾತ: ಒಂದು ಬಸ್ ಬೆಂಕಿಗಾಹುತಿ, ಐವರು ಪ್ರಯಾಣಿಕರು ಸಾವು
ಎರಡು ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಪ್ರಯಾಣಿಕರು ಮೃತಪಟ್ಟಿದ್ದಾರೆ.

Published : June 2, 2026 at 7:48 PM IST
ಸೂರತ್ (ಗುಜರಾತ್): ಬಾರ್ಡೋಲಿಯ ಉವಾ ಗ್ರಾಮದ ಬಳಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 5ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಒಂದು ಬಸ್‌ಗೆ ಬೆಂಕಿ ಹೊತ್ತಿಕೊಂಡರೆ, ಮತ್ತೊಂದು ಬಸ್ ಡಿಕ್ಕಿ ರಭಸಕ್ಕೆ ಸಂಪೂರ್ಣ ಜಖಂ ಆಗಿದೆ.
ಎರಡು ಬಸ್‌ಗಳ ನಡುವೆ ಅಪಘಾತ: ಬಾರ್ಡೋಲಿಯ ಉವಾ ಗ್ರಾಮದ ಬಳಿ ಚಲಿಸುತ್ತಿದ್ದ ಟ್ಯಾಂಕರ್ವೊಂದು ರಸ್ತೆ ಮಧ್ಯೆ ಏಕಾಏಕಿ ಪಲ್ಟಿಯಾಗಿದ್ದು, ಇದರ ಹಿಂದೆ ವೇಗವಾಗಿ ಬರುತ್ತಿದ್ದ ಮಹಾರಾಷ್ಟ್ರ ರಾಜ್ಯ ಸರ್ಕಾರಿ ಬಸ್, ಟ್ಯಾಂಕರ್ ಡಿಕ್ಕಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡು ತನ್ನ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸ ಎಷ್ಟು ತೀವ್ರವಾಗಿತ್ತೆಂದರೆ ಬಸ್ ಪಲ್ಟಿಯಾಗಿದೆ.
ಸಿಎನ್‌ಜಿ ಚಾಲಿತವಾಗಿದ್ದರಿಂದ, ತಕ್ಷಣವೇ ಅದರಲ್ಲಿ ಭಾರಿ ಬೆಂಕಿ ಹೊತ್ತಿಕೊಂಡು ಆಹುತಿಯಾಗಿದೆ. ಸುದ್ದಿ ತಿಳಿದ ತಕ್ಷಣ ಬಾರ್ಡೋಲಿ ಅಗ್ನಿಶಾಮಕ ಇಲಾಖೆ ಮತ್ತು ಬಾರ್ಡೋಲಿ ಪಟ್ಟಣ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ.
ಘಟನೆಯಲ್ಲಿ ಐದಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿರುವ ಶಂಕೆ ಇದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಅಪಘಾತಕ್ಕೆ ನಿಖರ ಕಾರಣ ಗೊತ್ತಾಗಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ ; ರಸ್ತೆ ಬದಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿ, ಚಾಲಕ ಸೇರಿ ಆರು ಜನರ ಸಾವು

