ETV Bharat / bharat

ಬಿಹಾರ ಸಂಪುಟ ವಿಸ್ತರಣೆ: ನಿತೀಶ್​ ಪುತ್ರ ಸೇರಿದಂತೆ 32 ಸಚಿವರ ಪ್ರಮಾಣವಚನ

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಜರಿದ್ದರು.

ಪುತ್ರನೊಂದಿಗೆ ನಿತೀಶ್ ಕುಮಾರ್
ಪುತ್ರನೊಂದಿಗೆ ನಿತೀಶ್ ಕುಮಾರ್ (ETV Bharat)
author img

By ETV Bharat Karnataka Team

Published : May 7, 2026 at 2:28 PM IST

1 Min Read
Choose ETV Bharat

ಪಾಟ್ನಾ(ಬಿಹಾರ): ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಮತ್ತು ಇತರ 31 ಮಂದಿ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮತ್ತು ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಸೇರಿದಂತೆ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ರಾಜ್ಯಸಭೆ ಪ್ರವೇಶಿಸಲು ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸಂಪುಟ ಸೇರಿದ್ದಾರೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ 89 ಶಾಸಕರನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿದೆ. ಬಿಜೆಪಿಯ 15 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಳೆದ ವರ್ಷದ ನವೆಂಬರ್‌ನಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದ್ದ ಎನ್‌ಡಿಎ, ನಿತೀಶ್ ಕುಮಾರ್ ನೇತೃತ್ವದಲ್ಲಿ ಸರ್ಕಾರ ರಚಿಸಿತ್ತು. ಈ ಸರ್ಕಾರದ ಭಾಗವಾಗಿದ್ದ ಹೆಚ್ಚಿನವರು ಈ ಬಾರಿಯೂ ಸಚಿವರಾಗಿದ್ದಾರೆ. ಜೆಡಿಯುನ 15 ಮಂದಿ ಸಚಿವರಿದ್ದು, ಈ ಪೈಕಿ 13 ಮಂದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಾಮ್ರಾಟ್​ ಚೌಧರಿ ಸಿಎಂ ಆಗಿದ್ದು, ಇವರು ಕಳೆದ ಏಪ್ರಿಲ್​ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್ ಡಿಸಿಎಂ ಆಗಿದ್ದಾರೆ.

ಎನ್​ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಸಂಜಯ್ ಕುಮಾರ್ ಸಿಂಗ್ ಮತ್ತು ಸಂಜಯ್ ಕುಮಾರ್ ಪಾಸ್ವಾನ್ ಅವರು ಮತ್ತೆ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಕೇಂದ್ರ ಸಚಿವ ಹಾಗು ಹಿಂದೂಸ್ತಾನಿ ಅವಾಮ್ ಮೋರ್ಚಾದ ಜಿತನ್ ರಾಮ್ ಮಾಂಝಿ ಮತ್ತು ರಾಷ್ಟ್ರೀಯ ಲೋಕ ಮೋರ್ಚಾದ ಉಪೇಂದ್ರ ಕುಶ್ವಾಹ ಅವರ ಪುತ್ರರಾದ ಸಂತೋಷ್ ಕುಮಾರ್ ಸುಮನ್ ಮತ್ತು ದೀಪಕ್ ಪ್ರಕಾಶ್ ಕೂಡ ಸಚಿವರಾಗಿದ್ದಾರೆ.

ಇವುಗಳನ್ನೂ ಓದಿ: