ಸೌದಿ, ಬಹ್ರೇನ್ ದೊರೆಗಳ ಜೊತೆ ಪ್ರಧಾನಿ ಮೋದಿ ಫೋನ್ ಸಂಭಾಷಣೆ: ಇರಾನ್ ದಾಳಿಗೆ ಖಂಡನೆ
ಇರಾನ್ ದಾಳಿ ನಡೆಸಿದ ಸೌದಿ ಅರೇಬಿಯಾ ಮತ್ತು ಬಹ್ರೇನ್ ರಾಷ್ಟ್ರಗಳ ಮುಖ್ಯಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರೆ ಮಾಡಿ ನೈತಿಕ ಬೆಂಬಲ ನೀಡಿದರು.

By PTI
Published : March 2, 2026 at 7:53 PM IST
ನವದೆಹಲಿ: ಇಸ್ರೇಲ್ ಮತ್ತು ಅಮೆರಿಕ ಸೇರಿ ಇರಾನ್ ಮೇಲೆ ದಾಳಿ ನಡೆಸಿದ್ದರ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಹ್ರೇನ್ ದೊರೆ ಹಮದ್ ಬಿನ್ ಇಸಾ ಅಲ್ ಖಲೀಫಾ, ಸೌದಿ ಅರೇಬಿಯಾದ ರಾಜಕುಮಾರ ಮತ್ತು ಪ್ರಧಾನಿಯೂ ಆಗಿರುವ ಮೊಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಫೋನ್ ಕರೆ ಮಾಡಿ ಮಾತನಾಡಿದರು. ಎರಡೂ ದೇಶಗಳ ಮೇಲೆ ಇರಾನ್ ನಡೆಸಿದ ದಾಳಿಯನ್ನು ಖಂಡಿಸಿದರು.
ಇಬ್ಬರು ನಾಯಕರೊಂದಿಗಿನ ದೂರವಾಣಿ ಸಂಭಾಷಣೆಯಲ್ಲಿ, ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆ ಅತ್ಯಂತ ಮಹತ್ವದ್ದಾಗಿದೆ. ಈ ಕಷ್ಟದ ಸಮಯದಲ್ಲಿ ಅಲ್ಲಿ ವಾಸಿಸುವ ಭಾರತೀಯ ಸಮುದಾಯದ ರಕ್ಷಣೆಗೆ ನಿಂತಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
Discussed the evolving situation in West Asia with Crown Prince and PM of Saudi Arabia, HRH Prince Mohammed bin Salman. India condemns the recent attacks on Saudi Arabia in violation of its sovereignty and territorial integrity. We agreed that earliest restoration of regional…
— Narendra Modi (@narendramodi) March 2, 2026
"ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಪರಿಸ್ಥಿತಿಯ ಬಗ್ಗೆ ಸೌದಿ ಅರೇಬಿಯಾದ ರಾಜಕುಮಾರ ಮತ್ತು ಪ್ರಧಾನಿಯೂ ಆಗಿರುವ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಚರ್ಚಿಸಿ, ಸೌದಿ ಅರೇಬಿಯಾದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆ ಉಲ್ಲಂಘಿಸುವ ಇರಾನ್ ದಾಳಿಗಳನ್ನು ಭಾರತ ಖಂಡಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ಬಹ್ರೇನ್ ಅಧ್ಯಕ್ಷರ ಜೊತೆ ಸಂಭಾಷಣೆ: ಇತ್ತ, ಬಹ್ರೇನ್ ದೊರೆ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೂ ದೂರವಾಣಿ ಸಂಭಾಷಣೆ ನಡೆಸಿರುವ ಪ್ರಧಾನಿ ಮೋದಿ ಅವರು, ಭಾರತವು ಬಹ್ರೇನ್ ಮೇಲಿನ ಇರಾನ್ ದಾಳಿಯನ್ನು ಖಂಡಿಸುತ್ತದೆ. ಸಂಕಷ್ಟದ ಸಮಯದಲ್ಲಿ ಬಹ್ರೇನ್‌ನಲ್ಲಿರುವ ಭಾರತೀಯ ಸಮುದಾಯದ ಜೊತೆ ನಿಂತಿದ್ದಕ್ಕೆ ಧನ್ಯವಾದ ಸಲ್ಲಿಸಿದರು.
ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಫೋನ್ನಲ್ಲಿ ಸಂಭಾಷಣೆ ನಡೆಸಿ ಬೆಂಬಲ ನೀಡಿದ್ದರು.
Had a productive telephone conversation with the King of Bahrain, His Majesty King Hamad Bin Isa Al Khalifa. India condemns the attacks on Bahrain and stands in solidarity with its people in this difficult hour. I thank him for the steadfast support extended to the Indian…
— Narendra Modi (@narendramodi) March 2, 2026
ಗಲ್ಫ್ ರಾಷ್ಟ್ರದಲ್ಲಿ ವಾಸವಾಗಿರುವ ಭಾರತೀಯ ಸಮುದಾಯವನ್ನು ಸುರಕ್ಷಿತವಾಗಿ ನೋಡಿಕೊಂಡಿದ್ದಕ್ಕಾಗಿ ಯುಎಇ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದರು. ಹಾಗೆಯೇ ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಭಾರತ ಬೆಂಬಲಿಸಲಿದೆ ಎಂದು ಪ್ರತಿಪಾದಿಸಿದ್ದರು.
ಖಮೇನಿ ಹತ್ಯೆಗೆ ಇರಾನ್ ಪ್ರತೀಕಾರ: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿ ಹತ್ಯೆ ನಡೆಸಿದ್ದವು. ಇದಕ್ಕೆ ಪ್ರತೀಕಾರವಾಗಿ ಇರಾನ್ ಸೇನೆಯು ಇಸ್ರೇಲ್, ಬಹ್ರೇನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಪಶ್ಚಿಮ ಏಷ್ಯಾದ ದೇಶಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ಸರಣಿ ಕ್ಷಿಪಣಿಗಳನ್ನು ಹಾರಿಸಿತ್ತು.
ಇವುಗಳನ್ನೂ ಓದಿ:

