ETV Bharat / bharat

ಜಕಾರ್ತ್​​ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಇಂಡೋನೇಷ್ಯಾ ಫೈಟರ್ ಜೆಟ್‌ನಿಂದ ಬೆಂಗಾವಲು ಗೌರವ

ಇಂಡೋನೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಕಾರ್ತ್​ನಲ್ಲಿ ಭವ್ಯ ಸ್ವಾಗತ ನೀಡಲಾಯಿತು.

PM Narendra Modi receives grand ceremonial welcome in Jakarta
ಜರ್ಕಾತ್​ನಲ್ಲಿ ಪ್ರಧಾನಿಗೆ ಭವ್ಯ ಸ್ವಾಗತ (ANI)
author img

By ANI

Published : July 7, 2026 at 10:39 AM IST

1 Min Read
Choose ETV Bharat

ಜಕಾರ್ತ್​ (ಇಂಡೋನೇಷ್ಯಾ): ಇಂಡೋನೇಷ್ಯಾ ಪ್ರವಾಸ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಕಾರ್ತ್​ನಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಎರಡು ದೇಶಗಳ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮತ್ತು ಉಭಯ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಸಹಕಾರವನ್ನು ಬಲಪಡಿಸುವ ಗುರಿಯೊಂದಿಗೆ ಮೋದಿ ಅವರು ಈ ಪ್ರವಾಸ ಕೈಗೊಂಡಿದ್ದಾರೆ.

ಮೂರು ರಾಷ್ಟ್ರಗಳ ರಾಜತಾಂತ್ರಿಕ ಭೇಟಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ, ಮೊದಲು ಇಂಡೋನೇಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಇಂಡೋನೇಷ್ಯಾ ವಾಯುಪಡೆಯ ಫೈಟರ್ ಜೆಟ್‌ನ ಬೆಂಗಾವಲು ಮತ್ತು ಇಂಡೋನೇಷ್ಯಾ ಅಧ್ಯಕ್ಷರು, ಮೋದಿ ಅವರಿಗೆ ಭವ್ಯ ಸ್ವಾಗತ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನ ಇಂಡೋನೇಷ್ಯಾ ವಾಯುಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ಮಿಲಿಟರಿ ಫೈಟರ್ ಜೆಟ್‌ಗಳು ಪ್ರಧಾನಿಯವರ ವಿಮಾನವನ್ನು ಬೆಂಗಾವಲು ಮಾಡಿದವು. ನಂತರ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಔಪಚಾರಿಕವಾಗಿ ಪ್ರಧಾನಿಯನ್ನು ಬರಮಾಡಿಕೊಂಡರು. ಈ ವೇಳೆ ಸಾಂಪ್ರದಾಯಿಕ ಸಾಂಸ್ಕೃತಿಕ ನೃತ್ಯ ಪ್ರದರ್ಶನ ಗಮನ ಸೆಳೆಯಿತು.

ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಅವರ ವೈಯಕ್ತಿಕ ಆಹ್ವಾನದ ಮೇರೆಗೆ ಮೋದಿ ಈ ಪ್ರವಾಸ ಕೈಗೊಂಡಿದ್ದಾರೆ. 2018ರಲ್ಲಿ ಎರಡೂ ರಾಷ್ಟ್ರಗಳು ತಮ್ಮ ರಾಜತಾಂತ್ರಿಕ ಸಂಬಂಧವನ್ನು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ಔಪಚಾರಿಕವಾಗಿ ಉನ್ನತೀಕರಿಸಿದ ನಂತರ ಇದು ಉಭಯ ದೇಶಗಳ ನಡುವೆ ನಡೆಯುತ್ತಿರುವ ಮೊದಲ ಭೇಟಿ ಇದಾಗಿದೆ.

ಈ ಭೇಟಿಯಲ್ಲಿ ದ್ವಿಪಕ್ಷೀಯ ರಕ್ಷಣೆ ಮತ್ತು ಕಡಲ ಸಮನ್ವಯ ಹಂಚಿಕೆ ಪ್ರಮುಖವಾಗಿದೆ. ಉನ್ನತ ಮಟ್ಟದ ಅಧಿಕೃತ ವಿನಿಮಯಗಳು, ನಿಯಮಿತ ಜಂಟಿ ಮಿಲಿಟರಿ ಕಾರ್ಯ, ಸಹಯೋಗದ ರಕ್ಷಣಾ ಉದ್ಯಮ ಉಪಕ್ರಮಗಳು ಮತ್ತು ಇಂಡೋನೇಷ್ಯಾದಿಂದ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ಸ್ವಾಧೀನವು ಹೊಂದಿದೆ.

ಮಹಾಸಾಗರ್ ಮೂಲಕ ಸಮುದ್ರ ಕ್ಷೇತ್ರದಾದ್ಯಂತ ಭದ್ರತೆ, ಸ್ಥಿರತೆ ಮತ್ತು ಸಮಗ್ರ ಅಭಿವೃದ್ಧಿ ಬೆಳವಣಿಗೆ ಉತ್ತೇಜನ, ಆರ್ಥಿಕ ಮತ್ತು ಜನ ಕೇಂದ್ರಿತ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವತ್ತ ವಿಶಿಷ್ಟ ಗಮನ ಹರಿಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇಂಡೋನೇಷ್ಯಾದಲ್ಲಿ ವಾಸಿಸುವ ಭಾರತೀಯ ವಲಸಿಗ ಸಮುದಾಯದ ಸದಸ್ಯರನ್ನು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ಈ ಭೇಟಿ ಮೂಲಸೌಕರ್ಯ, ಇಂಧನ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ವರ್ಧಿತ ಸಹಯೋಗದ ಉದ್ಯಮಗಳಿಗೆ ದಾರಿ ಮಾಡಿಕೊಡುತ್ತದೆ ಎಂಬ ಬಲವಾದ ಆಶಾವಾದವನ್ನು ವ್ಯಕ್ತಪಡಿಸಿದರು.

ಇಂಡೋನೇಷ್ಯಾದಲ್ಲಿ ತಮ್ಮ ಕಾರ್ಯಕ್ರಮಗಳ ನಂತರ, ಪ್ರಧಾನಿ ಮೋದಿ ಅವರು ತಮ್ಮ ಬಹು ದೇಶೀಯ ಭೇಟಿಯ ಭಾಗವಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ತೆರಳಲಿದ್ದಾರೆ.

ಇದನ್ನೂ ಓದಿ:

ಪ್ರಧಾನಿ ಮೋದಿ ಇಂದಿನಿಂದ ಇಂಡೋನೇಷ್ಯಾ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​ ಪ್ರವಾಸ