ದೇಶದ ವಿವಿಧೆಡೆ ಬಿಸಿಲ ತಾಪ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆ ಎಂದ ಐಎಂಡಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸರಾಸರಿಗಿಂತ ಉಷ್ಣಾಂಶ ಹೆಚ್ಚಳ!
ಈ ವರ್ಷ ಹೆಚ್ಚಿನ ಬಿಸಿಲು ದಾಖಲಾಗಲಿದೆ ಎಂದು ಅಂದಾಜಿಸಿರುವ ಹವಾಮಾನ ಇಲಾಖೆ, ಮುಂದಿನ ವಾರದಲ್ಲಿ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಮುನ್ಸೂಚನೆ ನೀಡಿದೆ.

By ANI
Published : March 3, 2026 at 4:39 PM IST
ನವದೆಹಲಿ: ದೇಶದ ಹೆಚ್ಚಿನ ಭಾಗಗಳಲ್ಲಿ ಮುಂದಿನ ವಾರದಲ್ಲಿ ತಾಪಮಾನ ಏರಿಕೆ ಮುಂದುವರಿಯಲಿದೆ. ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ 4-6 ಡಿಗ್ರಿ ಸೆಲ್ಸಿಯಸ್ ಮತ್ತು ಮಧ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರ (ಮಾರ್ಚ್ 4 ರಿಂದ 9), ಹಿಮಾಚಲ ಪ್ರದೇಶ (ಮಾರ್ಚ್ 7 ರಿಂದ 9) ಮತ್ತು ಉತ್ತರಾಖಂಡದಲ್ಲಿ (ಮಾರ್ಚ್ 8 ರಿಂದ 9) ವಾಯು ದುರ್ಬಲದಿಂದ ಹಗುರವಾದ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಮೇಘಾಲಯ ಮತ್ತು ಪಶ್ಚಿಮ ಬಂಗಾಳದ ಹಿಮಾಲಯನ್ ಪ್ರದೇಶಗಳಲ್ಲಿ 50 ರಿಂದ 199 ಮೀಟರ್‌ಗಳವರೆಗೆ ದಟ್ಟವಾದ ಮಂಜು ಆವರಿಸಲಿದೆ ಎಂದು ಮುನ್ಸೂಚನೆ ನೀಡಿದೆ.
ಸಿಕ್ಕಿಂನಲ್ಲಿ ನಾಳೆ (ಬುಧವಾರ) ಬೆಳಗಿನ ಜಾವದಲ್ಲಿ ಮಂಜಿ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ಪಶ್ಚಿಮ ರಾಜಸ್ಥಾನಗಳಲ್ಲಿ ತಾಪಮಾನದ ಏರಿಳಿತಗಳು ಸಾಮಾನ್ಯಕ್ಕಿಂತ 4-8 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಲಿದೆ. ದೆಹಲಿ, ಮಧ್ಯಪ್ರದೇಶ, ಗುಜರಾತ್, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರದಲ್ಲಿ ಸಾಮಾನ್ಯಕ್ಕಿಂತ 2-4 ಡಿಗ್ಸಿ ಸೆಲ್ಸಿಯಸ್ನಷ್ಟು ಹೆಚ್ಚು ದಾಖಲಾಗಲಿದೆ ಎಂದು ಐಎಂಡಿ ತಿಳಿಸಿದೆ.
ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಒಡಿಶಾದಲ್ಲಿ ಗರಿಷ್ಠ ತಾಪಮಾನ 35 ರಿಂದ 38 ಡಿಗ್ರಿ ಸೆಲ್ಸಿಯಸ್, ಮಧ್ಯಪ್ರದೇಶ, ಉತ್ತರ ಪ್ರದೇಶದ ದಕ್ಷಿಣ ಭಾಗ, ಬಿಹಾರದಲ್ಲಿ 32 ರಿಂದ 35 ಡಿಗ್ರಿ ಸೆಲ್ಸಿಯಸ್, ಬಯಲು ಪ್ರದೇಶಗಳಲ್ಲಿ 28 ರಿಂದ 31 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಯಲು ಪ್ರದೇಶ ವ್ಯಾಪ್ತಿಯಲ್ಲಿ ಬರುವ ಉತ್ತರಪ್ರದೇಶದ ಅಯೋಧ್ಯೆಯಲ್ಲಿ 10 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇವುಗಳನ್ನೂ ಓದಿ:
- ರಾಜ್ಯದಲ್ಲಿ ಮುಂದುವರೆದ ತಾಪಮಾನ ಏರಿಕೆ, ಮುಂದಿನ 7 ದಿನಗಳಲ್ಲಿ ಮತ್ತಷ್ಟು ಹೆಚ್ಚಳ
- ತಾಪಮಾನ ಏರಿಕೆಯಿಂದ ಭಾರತ, ಆಫ್ರಿಕಾದಲ್ಲಿ ಗಂಡು ಮಕ್ಕಳ ಜನನ ಪ್ರಮಾಣ ಇಳಿಕೆ: ನೂತನ ಅಧ್ಯಯನದಿಂದ ಆಘಾತಕಾರಿ ಮಾಹಿತಿ
ರಾಜ್ಯದಲ್ಲಿ ಮುಂದುವರೆದ ತಾಪಮಾನ ಏರಿಕೆ, ಮುಂದಿನ 7 ದಿನಗಳಲ್ಲಿ ಮತ್ತಷ್ಟು ಹೆಚ್ಚಳ: ರಾಜ್ಯದಲ್ಲಿ ತಾಪಮಾನ ಏರಿಕೆಯ ಪ್ರಮಾಣ ದಿನೇ ದಿನೇ ಅಧಿಕವಾಗುತ್ತಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ 34°Cವರೆಗೂ ಹಾಗೂ ಕನಿಷ್ಠ ತಾಪಮಾನ 22°C ದಾಖಲಾಗಬಹುದು ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಅಲ್ಪ ಮಳೆಯಾಗುವ ಸಾಧ್ಯತೆಯಿದೆ.
ಕಲಬುರಗಿ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಿರಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ ಸೆಕೆಯ ಅನುಭವ ಹೆಚ್ಚಿರಲಿದೆ. ಬೆಳಗಾವಿಯಲ್ಲಿ ಬೆಳಗ್ಗೆ ಮತ್ತು ರಾತ್ರಿ ತಂಪು ಹವೆ ಇರಲಿದ್ದು, ಮಧ್ಯಾಹ್ನ ಕೊಂಚ ತಾಪಮಾನ ಏರಿಕೆಯಾಗಲಿದೆ. ಕಲಬುರಗಿಯಲ್ಲಿ ಬಿಸಿ ಗಾಳಿಯ ಎಚ್ಚರಿಕೆ ನೀಡಲಾಗಿದೆ. ಹಾಗೂ ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಇತರೆ ಜಿಲ್ಲೆಗಳಿಗಿಂತ ಕೊಂಚ ತಂಪಾದ ವಾತಾವರಣವಿರಲಿದೆ.
ಮುಂದಿನ ಒಂದು ವಾರದ ನಿರೀಕ್ಷಿತ ಹವಾಮಾನ: ಹವಾಮಾನ ಇಲಾಖೆ ಈಗಾಗಲೇ ನೀಡಿರುವ ಮುನ್ಸೂಚನೆಯಂತೆ ಮುಂದಿನ 7 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉಷ್ಣಾಂಶವು ಸರಾಸರಿಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಪ್ರದೇಶದಲ್ಲಿ ಹವಾಮಾನವು ಶುಷ್ಕವಾಗಿರಲಿದ್ದು, ಮಧ್ಯಾಹ್ನದ ವೇಳೆ ತೀವ್ರ ಬಿಸಿಲಿರಲಿದೆ. ಉತ್ತರ ಒಳನಾಡಿನ ಕಲಬುರಗಿ, ರಾಯಚೂರುಗಳಲ್ಲಿ ಉಷ್ಣಾಂಶವು 38°C ದಾಟುವ ಸಾಧ್ಯತೆ ಇದೆ. ಬಿಸಿ ಗಾಳಿಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರು, ಉಡುಪಿಗಳಲ್ಲಿ ಆರ್ದ್ರತೆ ಹೆಚ್ಚಿರಲಿದೆ.

