ETV Bharat / bharat

ಲಾರಿಗೆ ಕಾರು ಡಿಕ್ಕಿ: ಬೆಂಗಳೂರಿನ ಐವರು ಸಾವು

ಕಾರಿನಲ್ಲಿ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ROAD ACCIDENT
ಲಾರಿಗೆ ಕಾರು ಡಿಕ್ಕಿ (ETV Bharat)
author img

By ETV Bharat Karnataka Team

Published : March 4, 2026 at 4:40 PM IST

1 Min Read
Choose ETV Bharat

ಚಿತ್ತೂರು (ಆಂಧ್ರ ಪ್ರದೇಶ): ಗಂಗಾವರ ಮಂಡಲದ ವಿಸ್ತೀರ್ ಜಂಕ್ಷನ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಐವರು ಮೃತಪಟ್ಟಿದ್ದಾರೆ. ಮೋಹನ್ ದಾಸ್ (71), ನಾಗರಾಜರಾವ್ (61), ಕುಸುಮಾ (61), ಜಯಂತಿ (59), ಪೂಜಾ (33) ಮೃತರು.

ಅತಿ ವೇಗದಲ್ಲಿ ಕಾರು ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಲಾರಿಯ ಕೆಳಗೆ ಸಿಲುಕಿಕೊಂಡಿತ್ತು. ಹರಸಾಹಸಪಟ್ಟು ಕಾರನ್ನು ಹೊರತೆಗೆಯಲಾಯಿತು. ಬೆಂಗಳೂರಿನ ರಾಜಾಜಿನಗರದ ಕುಟುಂಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ತಿರುಮಲಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಮೃತರ ಸಂಬಂಧಿಕರಿಗೆ ಅಪಘಾತದ ಬಗ್ಗೆ ಮಾಹಿತಿ ನೀಡಲಾಗಿದೆ.

ಅಪಘಾತಕ್ಕೆ ಸಚಿವ ಮಂಡಿಪಲ್ಲಿ ಪ್ರತಿಕ್ರಿಯೆ: ಚಿತ್ತೂರು ಜಿಲ್ಲೆಯ ಗಂಗಾವರಂ ಮಂಡಲದ ವೈಎಸ್ಆರ್ ಜಂಕ್ಷನ್ ಬಳಿ ನಡೆದ ಭೀಕರ ರಸ್ತೆ ಅಪಘಾತದ ಬಗ್ಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಘಟನೆಯ ಬಗ್ಗೆ ವಿಚಾರಿಸಿದರು. ಅಪಘಾತದ ಸುದ್ದಿ ತಿಳಿದು ಸಚಿವರು ಆಘಾತ ವ್ಯಕ್ತಪಡಿಸಿದರು. ಮೃತರಿಗೆ ತೀವ್ರ ಸಂತಾಪ ಸೂಚಿಸಿದರು. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೇವೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಪಘಾತದ ಕಾರಣಗಳ ಬಗ್ಗೆ ವಿವರಗಳನ್ನು ತಿಳಿದುಕೊಂಡರು. ಮೃತರ ಕುಟುಂಬಗಳಿಗೆ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದರು.

ಆಟೋ ಡಿಕ್ಕಿಯಲ್ಲಿ ಏಳು ಜನರಿಗೆ ಗಂಭೀರ ಗಾಯ: ಮಾರ್ಕಪುರಂ ಜಿಲ್ಲೆಯ ದೋರ್ನಾಳದಲ್ಲಿ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ. ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರಡು ಆಟೋಗಳು ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿನ್ನ ದೋರ್ನಾಳದಿಂದ ಬೊಮ್ಮಲಾಪುರಂ ಕಡೆಗೆ ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋ, ಬೊಮ್ಮಲಾಪುರಂ ನಿಂದ ದೋರ್ನಾಳಕ್ಕೆ ಬರುತ್ತಿದ್ದ ಮತ್ತೊಂದು ಆಟೋಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ದೋರ್ನಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇವುಗಳನ್ನೂ ಓದಿ: