ETV Bharat / bharat

ಇರಾನ್​ ಮೇಲೆ ಅಮೆರಿಕ-ಇಸ್ರೇಲ್​ ದಾಳಿ: ಅಂತಾ​​ರಾಷ್ಟ್ರೀಯ ವಿಮಾನ ಸೇವೆಗಳು ಸ್ತಬ್ಧ

ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಜೋರಾಗಿದೆ. ಇಸ್ರೇಲ್​ ಮತ್ತು ಅಮೆರಿಕದ ಪಡೆಗಳು ಇರಾನ್​ ಮೇಲೆ ದಾಳಿ ಮುಂದುವರಿಸಿವೆ. ಇದರಿಂದ ವಿಮಾನ ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.

FLIGHT CANCELLATIONS
ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ಜನರು (ಪ್ರಾತಿನಿಧಿಕ ಚಿತ್ರ) (ANI)
author img

By PTI

Published : March 1, 2026 at 3:44 PM IST

2 Min Read
Choose ETV Bharat

ನವದೆಹಲಿ: ಇಸ್ರೇಲ್ ಮತ್ತು ಅಮೆರಿಕ ಸೇನೆಗಳು ಜಂಟಿಯಾಗಿ ಇರಾನ್ ಮೇಲೆ ಭೀಕರ ದಾಳಿ ನಡೆಸಿದ್ದು, ಮಧ್ಯಪ್ರಾಚ್ಯದಲ್ಲಿ ಭಾರಿ ಸಂಘರ್ಷ ಏರ್ಪಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಲಿನ ದೇಶಗಳು ತಮ್ಮ ವಾಯುಪ್ರದೇಶವನ್ನು ಮುಚ್ಚಿದ್ದು, ಅಂತಾರಾಷ್ಟ್ರೀಯ ವಿಮಾನ ಸೇವೆಗಳು ಸಂಪೂರ್ಣವಾಗಿ ಸ್ತಬ್ಧವಾಗಿವೆ.

ಭಾರತದ ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ, ಮಧ್ಯಪ್ರಾಚ್ಯದಲ್ಲಿ ವಾಯುಪ್ರದೇಶ ನಿರ್ಬಂಧಗಳಿಂದಾಗಿ ವಿವಿಧ ವಿಮಾನಯಾನ ಸಂಸ್ಥೆಗಳ 444 ಅಂತಾರಾಷ್ಟ್ರೀಯ ವಿಮಾನಗಳನ್ನು ಮಾರ್ಚ್ 1 ರಂದು ರದ್ದುಗೊಳಿಸುವ ಸಾಧ್ಯತೆ ಇದೆ ಎಂದಿದೆ.

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಟಾಟಾ ಗ್ರೂಪ್​ ಒಡೆತನದ ಏರ್ ಇಂಡಿಯಾ ಭಾನುವಾರ 22 ಅಂತಾ​​ರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಿದೆ. ಇದರಿಂದ ಇದುವರೆಗೆ ಘೋಷಿಸಲಾದ ಒಟ್ಟು ವಿದೇಶಿ ವಿಮಾನ ರದ್ದತಿಗಳ ಸಂಖ್ಯೆ 50ಕ್ಕೆ ಏರಿದೆ.

ಮಧ್ಯಪ್ರಾಚ್ಯದಲ್ಲಿ ಉಲ್ಭಣಗೊಳ್ಳುತ್ತಿರುವ ಸಂಘರ್ಷದಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನಗಳ ಕಾರ್ಯಾಚರಣೆಯನ್ನು ಮೊಟಕುಗೊಳಿಸಲಾಗಿದೆ. ಇದು ಮುಂದುವರಿದರೆ, ಮತ್ತಷ್ಟು ಕ್ರಮ ಅಗತ್ಯವಾಗಲಿದೆ ಎಂದು ಹೇಳಿದೆ.

ಇತ್ತ ಇಂಡಿಗೋ ಕೂಡ, "ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮಧ್ಯಪ್ರಾಚ್ಯ ವಾಯುಪ್ರದೇಶವನ್ನು ಬಳಸುವ ಆಯ್ದ ಅಂತಾರಾಷ್ಟ್ರೀಯ ವಿಮಾನಗಳ ಸೇವೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿಡಲಾಗಿದೆ. ಇದು ಮಾರ್ಚ್ 2 ರವರೆಗೂ ವಿಸ್ತರಿಸಲಾಗಿದೆ" ಎಂದು ಎಂದು ತನ್ನ ಎಕ್ಸ್​ ಖಾತೆಯಲ್ಲಿ ತಿಳಿಸಿದೆ.

ಚೆನ್ನೈ-ಗಲ್ಫ್​​ ರಾಷ್ಟ್ರಗಳ ಸಂಪರ್ಕ ಸ್ಥಗಿತ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಕಾರಣ ಹಲವಾರು ಅಂತಾರಾಷ್ಟ್ರೀಯ ವಿಮಾನಗಳ ಸೇವೆ ತಾತ್ಕಾಲಿಕ ಸ್ಥಗಿತ ಕಂಡಿವೆ. ಚೆನ್ನೈ ಮತ್ತು ಗಲ್ಫ್ ದೇಶಗಳ ನಡುವೆ ಕಾರ್ಯನಿರ್ವಹಿಸುವ ಸುಮಾರು 18 ಅಂತಾರಾಷ್ಟ್ರೀಯ ವಿಮಾನಗಳು ರದ್ದಾಗಿವೆ ಎಂದು ಚೆನ್ನೈ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಎಮಿರೇಟ್ಸ್, ಎತಿಹಾದ್, ಇಂಡಿಗೋ, ಗಲ್ಫ್ ಏರ್ ಸಂಸ್ಥೆಗಳು ತಮ್ಮ ವಿಮಾನಗಳ ಸಂಚಾರವನ್ನು ರದ್ದು ಮಾಡಿವೆ. ದುಬೈ-ತಿರುಚಿರಾಪಳ್ಳಿ ನಡುವಿನ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ.

ಕೇರಳ-ಗಲ್ಫ್‌ ಸಂಚಾರ ಬಂದ್​: ಸಂಘರ್ಷದಿಂದಾಗಿ ಕೇರಳದ ನಾಲ್ಕು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ಹೆಚ್ಚಿನ ವಿಮಾನಗಳ ಸಂಚಾರ ರದ್ದಾಗಿದೆ.

ಶನಿವಾರ ಮಧ್ಯಾಹ್ನದಿಂದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಟಿಐಎಎಲ್) ನಿಂದ ವಿವಿಧ ಗಲ್ಫ್ ದೇಶಗಳಿಗೆ ಹೊರಡಬೇಕಿದ್ದ 37 ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೂ 35 ವಿಮಾನಗಳು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್ ಸೇನೆಗಳು ಶನಿವಾರ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್, ಇಸ್ರೇಲ್ ಮತ್ತು ಅಮರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳೊಂದಿಗೆ ಪ್ರತಿ ದಾಳಿ ಮಾಡಿದೆ. ಬಹ್ರೇನ್, ಕುವೈತ್ ಮತ್ತು ಕತಾರ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳು ದಾಳಿಗೆ ತುತ್ತಾಗಿವೆ.

ಇವುಗಳನ್ನೂ ಓದಿ: