ETV Bharat / bharat

ಪಶ್ಚಿಮ ಏಷ್ಯಾ ಸಂಘರ್ಷ: ಭಾರತೀಯರ ಸುರಕ್ಷಿತ ಸ್ಥಳಾಂತರಕ್ಕೆ ಇಂದು 58 ವಿಮಾನಗಳ ಹಾರಾಟ

ಇಂಡಿಗೊ 30 ಮತ್ತು ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯ 23 ವಿಮಾನಗಳು ಇಂದು ಮಧ್ಯಪ್ರಾಚ್ಯದಿಂದ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಿವೆ.

Indian carriers are further planning 58 flights From  Middle East Today
ಸಾಂದರ್ಭಿಕ ಚಿತ್ರ (ANI)
author img

By ETV Bharat Karnataka Team

Published : March 4, 2026 at 10:50 AM IST

1 Min Read
Choose ETV Bharat

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಅಲ್ಲಿರುವ ಭಾರತೀಯರ ಸುರಕ್ಷಿತ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಇಂದು (ಬುಧವಾರ) 58 ವಿಮಾನಗಳು ಹಾರಾಟ ನಡೆಸಲಿವೆ. ಈ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ.

ಪ್ರಯಾಣಿಕರ ಸ್ಥಳಾಂತರಕ್ಕೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ವಿಮಾನಯಾನ ಸಂಸ್ಥೆಗಳು ಅಗತ್ಯವಿರುವ ಕಡೆ ಹೆಚ್ಚುವರಿ ಸಾಮರ್ಥ್ಯವನ್ನು ನಿಯೋಜಿಸುತ್ತಿವೆ. ಸುರಕ್ಷಿತ ಪ್ರಯಾಣ ಸಂಚಾರವನ್ನು ಖಚಿತಪಡಿಸಿಕೊಳ್ಳಲು ವಿದೇಶಿ ವಿಮಾನಯಾನ ಅಧಿಕಾರಿಗಳು ಮತ್ತು ವಿದೇಶದಲ್ಲಿರುವ ಭಾರತೀಯ ಕಾರ್ಯಾಚರಣೆಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಮಂಗಳವಾರ ಒಟ್ಟು 24 ವಿಮಾನಗಳು ಕಾರ್ಯ ನಿರ್ವಹಿಸಿವೆ. ಹೆಚ್ಚುವರಿಯಾಗಿ ಎಮಿರೇಟ್ಸ್ ಮತ್ತು ಎತಿಹಾದ್ ಗಲ್ಫ್‌ನಿಂದ 9 ವಿಮಾನಗಳು ಹಾರಾಟ ನಡೆಸಿವೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಟಿಕೆಟ್ ಬೆಲೆಗಳಲ್ಲಿ ಅನಗತ್ಯ ಏರಿಕೆಯಾಗದಂತೆ ನೋಡಿಕೊಳ್ಳಲು ವಿಮಾನಯಾನ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ವಿಮಾನ ದರಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ.

ನಿರ್ಬಂಧಿತ ವಾಯುಪ್ರದೇಶದಿಂದ ಪರ್ಯಾಯ ಮಾರ್ಗಗಳ ಮೂಲಕ ಹಾರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ದೀರ್ಘ ಪ್ರಯಾಣ ಮತ್ತು ಅತಿ ದೀರ್ಘ ಪ್ರಯಾಣದ ಕಾರ್ಯಾಚರಣೆಗಳನ್ನು ಹಂತಹಂತವಾಗಿ ಪುನರಾರಂಭಿಸಲಾಗುತ್ತಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ಒಳಗೊಂಡ ಯುದ್ಧದಿಂದ ಮಧ್ಯಪ್ರಾಚ್ಯದ ಕೆಲವೆಡೆ ವಾಯುಪ್ರದೇಶಗಳನ್ನು ಮುಚ್ಚಿದ್ದು, ವಿಮಾನ ಕಾರ್ಯಾಚರಣೆಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ.

ಸಚಿವಾಲಯ ಒದಗಿಸಿದ ಅಂಕಿಅಂಶಗಳ ಪ್ರಕಾರ, ಫೆಬ್ರವರಿ 28ರಿಂದ ಭಾರತೀಯ ವಿಮಾನಯಾನ ಸಂಸ್ಥೆಗಳು 104 ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಿವೆ. ಇಲ್ಲಿಯವರೆಗೆ ಭಾರತೀಯ ವಿಮಾನಯಾನ ಸಂಸ್ಥೆಗಳ 1,221 ವಿಮಾನಗಳು ಮತ್ತು ವಿದೇಶಿ ವಿಮಾನಯಾನ ಸಂಸ್ಥೆಗಳ 388 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಕಳೆದ ಮೂರು ದಿನಗಳಲ್ಲಿ ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ 1,117 ಅಂತಾರಾಷ್ಟ್ರೀಯ ವಿಮಾನಗಳು ರದ್ದಾಗಿವೆ.

ಯುದ್ದ ವಾತಾವರಣದಿಂದ ಗಲ್ಫ್​ ದೇಶಗಳಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ, ತೊಂದರೆಗೊಳಗಾದ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಸಚಿವಾಲಯ ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣ ನಿರ್ವಾಹಕರು, ನಿಯಂತ್ರಕ ಅಧಿಕಾರಿಗಳು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸುತ್ತಿದೆ ಎಂದು ಸಚಿವಾಲಯ ಹೇಳಿದೆ.

ಇವುಗಳನ್ನೂ ಓದಿ: