ETV Bharat / education-and-career

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಜವಾನ ಹುದ್ದೆಗೆ ಅರ್ಜಿ ಆಹ್ವಾನ: 10 ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು!

ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

Gadag District Court Recruitment For 22 peon post
ಉದ್ಯೋಗ ಮಾಹಿತಿ (ETV BHARAT)
author img

By ETV Bharat Karnataka Team

Published : October 5, 2026 at 2:49 PM IST

1 Min Read
Choose ETV Bharat

ಬೆಂಗಳೂರು: ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 22 ಜವಾನ ಹುದ್ದೆಗಳ ಭರ್ತಿಗೆ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ವಿವರ: ಜವಾನ ಹುದ್ದೆ 22

ವಿದ್ಯಾರ್ಹತೆ: ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18, ಗರಿಷ್ಠ 40 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ಮತ್ತು ಪ್ರವರ್ಗ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್​ ಮತ್ತು ಸಂದರ್ಶನದ ಮೂಲಕ

Gadag District Court Recruitment For 22 peon post
ಅಧಿಸೂಚನೆ (gadag.dcourts.gov.in)

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ. ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ವಿನಾಯಿತಿ ನೀಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 31 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು gadag.dcourts.gov.in ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೌರಾಡಳಿತ ನಿರ್ದೇಶನಾಲಯದ ಅಧೀನದಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಗ್ರೂಪ್​ ಸಿ ಹುದ್ದೆಗಳ ಭರ್ತಿಗೆ ಅಕ್ಟೋಬರ್​ 7ರವರೆಗೆ ಅವಕಾಶವಿದೆ.

ನೀರು ಸರಬರಾಜು ಆಪರೇಟರ್​, ಎಲೆಕ್ಟ್ರಿಷಿಯನ್​ ಗ್ರೇಡ್​ 1, ಸಹಾಯಕ ನೀರು ಸರಬರಾಜು ಆಪರೇಟರ್​, ಎಲೆಕ್ಟ್ರಿಷಿಯನ್​ ಗ್ರೇಡ್​ 2 ನ ಒಟ್ಟು 210 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಹತೆ ಹೊತೆಗೆ ಅಪ್ರೆಂಟಿಸ್​ ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅಭ್ಯರ್ಥಿಗಳು ಅಕ್ಟೋಬರ್​​ 7ರವರೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಶುಲ್ಕ ಪಾವತಿಗೆ ಕೊನೆಯ ದಿನಾಂಕ ಅಕ್ಟೋಬರ್​ 8 ಆಗಿದೆ.

ಈ ಹುದ್ದೆಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಹೆಚ್ಚಿನ ಮಾಹಿತಿ ಈ ಕೆಳಗಿನ ಲಿಂಕ್​ ಕ್ಲಿಕ್​ ಮಾಡಿ:

ಕೆಇಎ ನೇಮಕಾತಿ; 210 ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ