ETV Bharat / education-and-career

KEA ನೇಮಕಾತಿ: 945 ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರೂಪ್​ ಬಿ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ಕೆಇಎ ಅರ್ಜಿ ಆಹ್ವಾನಿಸಿದೆ.

KEA Recruitment for 945 agriculture officer post
ಉದ್ಯೋಗ ಮಾಹಿತಿ (KEA)
author img

By ETV Bharat Karnataka Team

Published : June 2, 2026 at 12:18 PM IST

1 Min Read
Choose ETV Bharat

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್​ ಬಿ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪರಿಷ್ಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ: ಒಟ್ಟು ಹುದ್ದೆಗಳ ಸಂಖ್ಯೆ 945

ಕೃಷಿ ಅಧಿಕಾರಿಗಳು (ಎಒ) - 128 (42 ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲು)

ಸಹಾಯಕ ಕೃಷಿ ಅಧಿಕಾರಿಗಳು (ಎಎಒ) - 817 (273 ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲು)

KEA Recruitment for 945 agriculture officer post
ಅಧಿಸೂಚನೆ (KEA)

ವಿದ್ಯಾರ್ಹತೆ: ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ, ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಿಎಸ್ಸಿ, ಬಿ.ಟೆಕ್​ ಪದವಿ ಪಡೆದಿರಬೇಕು.

ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 43 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿ ಇದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಮತ್ತು ಪ್ರವರ್ಗ2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 750 ರೂ ಶುಲ್ಕ ಪಾವತಿಸಬೇಕು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು 500 ರೂ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 250 ರೂ ಅರ್ಜಿ ಶುಲ್ಕವನ್ನು ಆನ್​ಲೈನ್​ ಮೂಲಕ ಪಾವತಿಸಬೇಕಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

ಈ ಹುದ್ದೆಗಳಿಗೆ ಮೇ 30 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಜೂನ್​ 22 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು cetonline.karnataka.gov.in ಭೇಟಿ ನೀಡಿ

ಬಳ್ಳಾರಿ ಡಿಸಿಸಿ ಬ್ಯಾಂಕ್​ನಲ್ಲಿ ಹುದ್ದೆ: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್​ ನಿಯಮಿತ ಹೊಸಪೇಟೆಯಲ್ಲಿ ಖಾಲಿ ಇರುವ ಕ್ಲರಿಕಲ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 82 ಹುದ್ದೆಗಳ ಭರ್ತಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬಹುತೇಕ ಹುದ್ದೆಗಳು ಕಲ್ಯಾಣ ಕರ್ನಾಟಕ ವೃಂದಕ್ಕೆ ಮೀಸಲಾಗಿವೆ. ಈ ಕುರಿತ ಹೆಚ್ಚಿನ ವಿವರ ಮತ್ತು ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್​ ಕ್ಲಿಕ್​ ಮಾಡಿ.

ಬಳ್ಳಾರಿ ಡಿಸಿಸಿ ಬ್ಯಾಂಕ್​ನಲ್ಲಿ ನೇಮಕಾತಿ; ಎಫ್​ಡಿಎ, ಎಸ್​ಡಿಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ