ETV Bharat / education-and-career
890 ಕೃಷಿ ಅಧಿಕಾರಿಗಳ ಹುದ್ದೆಗಳಿಗೆ KEA ಅರ್ಜಿ ಆಹ್ವಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 10 ಕಡೇಯ ದಿನವಾಗಿದ್ದು, ಮೇ 12 ರವರೆಗೆ ಶುಲ್ಕ ಪಾವತಿಸಬಹುದು.


Published : April 21, 2026 at 3:11 PM IST
ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ವಿದ್ಯಾರ್ಹತೆ: ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಿಎಸ್ಸಿ, ಬಿ.ಟೆಕ್ ಪದವಿ ಪಡೆದಿರಬೇಕು.
ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 43 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿ ಇದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಮತ್ತು ಪ್ರವರ್ಗ2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 750 ರೂ ಶುಲ್ಕ ಪಾವತಿಸಬೇಕು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು 500 ರೂ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 250 ರೂ ಅರ್ಜಿ ಶುಲ್ಕವಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಮೇ 10 ಹಾಗು ಅರ್ಜಿ ಶುಲ್ಕ ಪಾವತಿಗೆ ಮೇ 12 ಕೊನೆಯ ದಿನವಾಗಿದೆ. ಜೂನ್ 6 ಮತ್ತು 7ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಅಧಿಕೃತ ಅಧಿಸೂಚನೆ ಮತ್ತು ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್ಸೈಟ್ cetonline.karnataka.gov.in ಭೇಟಿ ನೀಡಬಹುದು.

ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ನೇಮಕಾತಿ: ಬೀದರ್ನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿನ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ತಾತ್ಕಾಲಿಕ ಅವಧಿಗೆ ಕ್ಷೇತ್ರ ಕಾರ್ಮಿಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೀನುಗಾರಿಕೆ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಏಪ್ರಿಲ್ 28ರಂದು ಬೆಳಗ್ಗೆ 11ಕ್ಕೆ ಬಂಗಳೂರಿನ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಸಂದರ್ಶನ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ kvafsu.edu.in ಭೇಟಿ ನೀಡಿ.
ಇದನ್ನೂ ಓದಿ: ಕೆಇಎ ನೇಮಕಾತಿ: ಸೆಕ್ಷನ್ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

