ETV Bharat / education-and-career
ಕೆಇಎ ನೇಮಕಾತಿ: ಸೆಕ್ಷನ್ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ಒಟ್ಟು 19 ಹುದ್ದೆಗಳ ಪೈಕಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ 2 ಹುದ್ದೆಗಳನ್ನು ಮೀಸಲಿಡಲಾಗಿದೆ.


Published : April 17, 2026 at 3:16 PM IST
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ(KSLSA)ಕ್ಕೆ ಶಾಖಾಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಧಿಸೂಚನೆ ಹೊರಡಿಸಿದೆ. ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: ಒಟ್ಟು 19 ಹುದ್ದೆಗಳಿದ್ದು, ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ 2 ಹುದ್ದೆಗಳನ್ನು ಮೀಸಲಿರಿಡಲಾಗಿದೆ.
ವಿದ್ಯಾರ್ಹತೆ: ಅಧಿಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ.
ವಯೋಮಿತಿ: ಕನಿಷ್ಠ 18 ಮತ್ತು ಗರಿಷ್ಠ40 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪ.ಜಾ, ಪ. ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 1000 ರೂ, ಪ.ಜಾ, ಪ.ಪಂ, ಪ್ರವರ್ಗ -1, ವಿಕಲಚೇತನ ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕವಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಏಪ್ರಿಲ್ 16ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮೇ 15 ಕೊನೆಯ ದಿನ.
ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ cetonline.karnataka.gov.in/kea ಭೇಟಿ ನೀಡಿ.

ಸಿವಿಲ್ ನ್ಯಾಯಾಧೀಶರ ನೇಮಕಾತಿ: ರಾಜ್ಯದಲ್ಲಿ ಖಾಲಿ ಇರುವ 56 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಮೇ 15ರೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಅಂಗೀಕೃತ ವಿವಿಯಿಂದ ಕಾನೂನು ಪದವಿ ಪಡೆದಿರಬೇಕು ಹಾಗೂ ವಕೀಲರಾಗಿ ನೋಂದಾಯಿಸಿಕೊಂಡಿರಬೇಕು. ಸಾಮಾನ್ಯ ಅಭ್ಯರ್ಥಿಗಳ ವಯೋಮಿತಿ 45 ವರ್ಷ ನಿಗದಿಪಡಿಸಿದ್ದು, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ಮತ್ತು ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 250 ರೂ, ಇತರೆ ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಮುಖ್ಯ ಪರೀಕ್ಷೆಗೆ ಕ್ರಮವಾಗಿ 750 ರೂ ಮತ್ತು 1500 ರೂ ಅರ್ಜಿ ಶುಲ್ಕವಿದೆ.
ಈ ಹುದ್ದೆಗೆ ಪ್ರಿಲಿಮ್ಸ್, ಮೇನ್ಸ್, ಸ್ಟೆನೋಗ್ರಫಿ ಮತ್ತು ಸಂದರ್ಶನ ಮೂಲಕ ಆಯ್ಕೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ karnatakajudiciary.kar.nic.in ಭೇಟಿ ನೀಡಬಹುದು.
ಇದನ್ನೂ ಓದಿ: ವಿಕಾಸ್ ಸೌಹರ್ದ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ನೇಮಕಾತಿ: 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

