ETV Bharat / education-and-career
ಶಿವಮೊಗ್ಗ ರಾಯಚೂರು ಜಿಲ್ಲಾ ಪಂಚಾಯತ್ನಲ್ಲಿ ಕರ ವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆ
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 52 ಮತ್ತು ರಾಯಚೂರಿನಲ್ಲಿ ಒಟ್ಟು 65 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ


Published : August 29, 2026 at 2:57 PM IST
ಬೆಂಗಳೂರು: ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇರುವ ಕರ ವಸೂಲಿಗಾರ ಮತ್ತು ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ವಿವರ : ಒಟ್ಟು ಹುದ್ದೆಗಳು 52
- ಕರವಸೂಲಿಗಾರ - 21
- ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ - 31
ಜಿಲ್ಲೆಯ 7 ತಾಲೂಕುಗಳ ಗ್ರಾಮ ಪಂಚಾಯತ್ಗಳಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಅಧಿಸೂಚನೆ ಪರಿಶೀಲಿಸತಕ್ಕದ್ದು.
ಶೈಕ್ಷಣಿಕ ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ತೀರ್ಗಡೆಯಾಗಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಆಗಿದ್ದು, ಗರಿಷ್ಠ ವಯೋಮಿತಿ 40 ಆಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3ವರ್ಷ, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತ್ಗಳ ನಿವಾಸಿಯಾಗಿರಬೇಕು.
ಶಿವಮೊಗ್ಗ ಜಿಲ್ಲಾಡಳಿತ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ನಿಗದಿತ ಅರ್ಜಿ ಭರ್ತಿ ಮಾಡಿ. ಅಧಿಕೃತ ದಾಖಲಾತಿಗಳೊಂದಿಗೆ ಡಿಮ್ಯಾಂಡ್ ಡ್ರಾಫ್ಟ್ನೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯತ್ನ ಪಿಡಿಒ ಗಳಿಗೆ ಸಲ್ಲಿಸಬೇಕು. ಪ.ಜಾ, ಪ.ಪಂ ಅಭ್ಯರ್ಥಿಗಳು 50 ರೂ. ಮತ್ತು ಇತರೆ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕದ ಡಿಮ್ಯಾಂಡ್ ಡ್ರಾಫ್ಟ್ ಪಡೆಯಬೇಕು.
ಈ ಹುದ್ದೆಗೆ ಆಗಸ್ಟ್ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟಂಬರ್ 25 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು shivamogga.nic.in ಭೇಟಿ ನೀಡಬಹುದು.
ರಾಯಚೂರು ಜಿಲ್ಲಾ ಪಂಚಾಯತ್ನಲ್ಲಿ ಉದ್ಯೋಗ:
ರಾಯಚೂರು ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ಕರ ವಸೂಲಿಗಾರ ಮತ್ತು ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 65 ಹುದ್ದೆಗಳಿದ್ದು, ಇದರಲ್ಲಿ 31 ಕರ ವಸೂಲಿಗಾರ ಮತ್ತು 34 ಕ್ಲರ್ಕ್ ಕಂ ಡೇಟಾ ಆಪರೇಷರ್ ಹುದ್ದೆಯಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.
ಗರಿಷ್ಠ ವಯೋಮಿತಿ 40 ವರ್ಷವಾಗಿದ್ದು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ., ಪ.ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 200 ರೂ. ಮತ್ತು ವಿಶೇಷ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟಂಬರ್ 3 ಆಗಿದ್ದು, ಹೆಚ್ಚಿನ ಮಾಹಿತಿಗೆ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆ zpraichur.karnataka.gov.in ಭೇಟಿ ನೀಡಿ.
ಇದನ್ನೂ ಓದಿ: ಬೆಂಗಳೂರು ದೂರದರ್ಶನದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

