ETV Bharat / education-and-career

ರಾಯಚೂರು ಜಿಲ್ಲಾ ಪಂಚಾಯತ್​ನಿಂದ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

ಒಟ್ಟು 13 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ

Raichur Taluk library Supervisors post Recruitment
ಉದ್ಯೋಗ ಮಾಹಿತಿ (ETV BHRAT)
author img

By ETV Bharat Karnataka Team

Published : May 29, 2026 at 6:01 PM IST

1 Min Read
Choose ETV Bharat

ಬೆಂಗಳೂರು: ರಾಯಚೂರು ಜಿಲ್ಲಾ ಪಂಚಾಯತ್​ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 13 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳ ಕುರಿತ ವಿವರ ಇಲ್ಲಿದೆ.

ಹುದ್ದೆಗಳ ವಿವರ: ಒಟ್ಟು 13 ಹುದ್ದೆಗಳಿದ್ದು, ತಾಲೂಕುವಾರು ಹುದ್ದೆಗಳ ವಿವರ ಇಲ್ಲಿದೆ.

Raichur Taluk library Supervisors post Recruitment
ಅಧಿಸೂಚನೆ (zpraichur.karnataka.gov.in)

ತಾಲೂಕು : ಹುದ್ದೆ ಸಂಖ್ಯೆ

ಸಿಂಧನೂರು: 3

ದೇವದುರ್ಗ: 2

ಸಿರವಾರ: 3

ಮಾನ್ವಿ: 1

ಮಸ್ಕಿ: 2

ಲಿಂಗಸೂಗೂರು: 1

ರಾಯಚೂರು: 1

ವಿದ್ಯಾರ್ಹತೆ: ಪಿಯುಸಿ. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್​ ವ್ಯಾಪ್ತಿಯ ನಿವಾಸಿಯಾಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 40 ವರ್ಷ ವಯೋಮಿತಿ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ ಹಾಗೂ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 200 ರೂ. ವಿಶೇಷಚೇತನ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕವಿದೆ.

ಮೇ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನ ಜೂನ್​ 10 ಆಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ zpraichur.karnataka.gov.in ಭೇಟಿ ನೀಡಿ.

ಇವುಗಳನ್ನೂ ಓದಿ:

ಸೇನೆ ಸೇರುವ ಆಸಕ್ತಿ ಇದೆಯೇ?: ಸಿಡಿಸಿ, ಎನ್​ಡಿಎ ಪರೀಕ್ಷೆಗಳಿಗೆ UPSC ಅರ್ಜಿ ಆಹ್ವಾನ- ಸಂಪೂರ್ಣ ಮಾಹಿತಿ

ಕೆಇಎ ನೇಮಕಾತಿ: ಎಫ್​ಡಿಎ, ಎಸ್​ಡಿಎ ಹುದ್ದೆಗಳ ಭರ್ತಿಗೆ ಅಧಿಸೂಚನೆ