ಮಂಜುಮ್ಮೆಲ್ ಬಾಯ್ಸ್ ಸಿನಿಮಾ ನಿರ್ದೇಶಕರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು
ನಿರ್ದೇಶಕ ಚಿದಂಬರಂ ಎಸ್. ಪೊಡುವಾಲ್ ಅವರು ಇನ್ನೂ ಈ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

By PTI
Published : March 2, 2026 at 2:51 PM IST
ಕೊಚ್ಚಿ, ಕೇರಳ: ಮಲಯಾಳಂನ ಮಂಜುಮ್ಮೆಲ್ ಬಾಯ್ಸ್ ಸಿನಿಮಾ ನಿರ್ದೇಶಕ ಚಿದಂಬರಂ ಎಸ್. ಪೊಡುವಾಲ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. 2022ರಲ್ಲಿ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಎರ್ನಾಕುಲಂ ದಕ್ಷಿಣ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರ್ನಾಕುಲಂನಲ್ಲಿರುವ ಮಹಿಳೆಯ ಅಪಾರ್ಟ್ಮೆಂಟ್ಗೆ ನುಗ್ಗಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 74 (ಆಕೆಯ ನಮ್ರತೆ ಕೆರಳಿಸುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲವಂತ) ಮತ್ತು 75 (ಲೈಂಗಿಕ ಕಿರುಕುಳ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಪ್ರಕರಣ ದಾಖಲಿಸುವ ಮೊದಲು ದೂರುದಾರರ ಹೇಳಿಕೆಯನ್ನು ದಾಖಲಿಸಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಚಲನಚಿತ್ರ ನಿರ್ದೇಶಕರಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಿದರು.
ಚಿದಂಬರಂ ಇನ್ನೂ ಆರೋಪಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ನಿರ್ದೇಶಕ ಚಿದಂಬರಂ ಎಸ್. ಪೊಡುವಾಲ್ ಅವರು ಜಾನ್.ಇ.ಮ್ಯಾನ್ (2021) ಮತ್ತು ಮಂಜುಮ್ಮೆಲ್ ಬಾಯ್ಸ್ ಎರಡು ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ; ಮಾಜಿ ಕ್ರಿಕೆಟರ್ಗೆ ನಿಷೇಧ!

