ETV Bharat / international

ಪ್ರಧಾನಿ ಮೋದಿಗೆ ಕರೆ ಮಾಡಿ ಹೊಸ ವರ್ಷದ ಶುಭಾಶಯ, ಗಾಜಾ ಶಾಂತಿ ಬಗ್ಗೆ ಚರ್ಚಿಸಿದ ಇಸ್ರೇಲ್ ಪ್ರಧಾನಿ

ಭಾರತ ಸ್ನೇಹರಾಷ್ಟ್ರವಾದ ಇಸ್ರೇಲ್​ನ ಪ್ರಧಾನಿ ಬೆಂಜಮಿನ್​ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರು ಜೊತೆ ಮಾತುಕತೆ ನಡೆಸಿದ್ದಾರೆ.

ISRAELI PRIME MINISTER
ಇಸ್ರೇಲ್​ನ ಪ್ರಧಾನಿ ಬೆಂಜಮಿನ್​ ನೆತನ್ಯಾಹು (ಎಡಭಾಗ) ಪ್ರಧಾನಿ ನರೇಂದ್ರ ಮೋದಿ (ಬಲಭಾಗ) (IANS)
author img

By PTI

Published : January 7, 2026 at 6:25 PM IST

2 Min Read
Choose ETV Bharat

ನವದೆಹಲಿ: ಇಸ್ರೇಲ್​ ಪ್ರಧಾನಿ ಬೆಂಜಮಿನ್​ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಕರೆ ಮಾಡಿ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದರು. ಜೊತೆಗೆ, ಗಾಜಾ ಶಾಂತಿ ಯೋಜನೆಯ ಬಗ್ಗೆ ಮಾಹಿತಿ ಹಂಚಿಕೊಂಡರು. ಭಯೋತ್ಪಾದನೆಯ ವಿರುದ್ಧ ಹೋರಾಡುವ ಸಂಕಲ್ಪವನ್ನೂ ಪುನರುಚ್ಚರಿಸಿದರು.

ಈ ಬಗ್ಗೆ ಪ್ರಧಾನಿ ಕಚೇರಿ ತನ್ನ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, "ಇಬ್ಬರೂ ನಾಯಕರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಎರಡೂ ದೇಶಗಳ ಜನರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ಹಾರೈಸಿದರು. ಗಾಜಾ ಶಾಂತಿ ಯೋಜನೆಯ ಅನುಷ್ಠಾನದ ಕುರಿತು ಪ್ರಧಾನಿಗೆ ವಿವರಿಸಿದರು" ಎಂದು ತಿಳಿಸಿದೆ.

ಇದಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಅವರು, "ಗಾಜಾದ ಜನರಿಗೆ ಸಿಗಬೇಕಾದ ನ್ಯಾಯ ಮತ್ತು ಶಾಂತಿಯುವ ಬದುಕಿಗೆ ಭಾರತದ ಬೆಂಬಲ ಇರಲಿದೆ" ಎಂದು ತಿಳಿಸಿದ್ದಾಗಿ ಪ್ರಧಾನಿ ಕಚೇರಿ ಹೇಳಿದೆ.

ಮುಂದಿನ ವರ್ಷದಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಪ್ರಜಾಪ್ರಭುತ್ವ ಮೌಲ್ಯಗಳು, ಪರಸ್ಪರ ನಂಬಿಕೆ ಮತ್ತು ಭವಿಷ್ಯದ ದೃಷ್ಟಿಕೋನದಿಂದ ಉಭಯ ದೇಶಗಳ ನಡುವೆ ಸಂಬಂಧವನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ.

ಭಯೋತ್ಪಾದನೆ ವಿರುದ್ಧ ಹೋರಾಟ: ಇದೇ ವೇಳೆ, ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ವಿಧಾನವನ್ನು ಅನುಸರಿಸಲು ಉಭಯ ನಾಯಕರು ಒಮ್ಮರ ವ್ಯಕ್ತಪಡಿಸಿದರು. ಉಗ್ರವಾದದ ವಿರುದ್ಧ ಹೋರಾಡುವ ತಮ್ಮ ಬದ್ಧತೆ ಪುನರುಚ್ಚರಿಸಿದರು. ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವಿಚಾರವನ್ನು ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಭಯೋತ್ಪಾದನೆಯ ವಿರುದ್ಧ ದೃಢನಿಶ್ಚಯದಿಂದ ಹೋರಾಡುವ ತಮ್ಮ ಸಂಕಲ್ಪವನ್ನು ಹಂಚಿಕೊಂಡೆವು ಎಂದು ತಿಳಿಸಿದ್ದಾರೆ. "ನನ್ನ ಸ್ನೇಹಿತ, ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದೆ. ಅವರಿಗೆ ಮತ್ತು ಇಸ್ರೇಲ್ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಲು ಸಂತೋಷವಾಗಿದೆ" ಎಂದು ಮೋದಿ ಹೇಳಿದ್ದಾರೆ.

ರೂಪಾಯಿ ಮೂಲಕ ವ್ಯಾಪಾರಕ್ಕೆ ಉತ್ತೇಜನ: ಇಸ್ರೇಲ್​ ಮತ್ತು ಭಾರತದ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಕುರಿತು ಮಾತುಕತೆ ಮತ್ತು ಕಾರ್ಯತಂತ್ರಗಳು ಸಾಗುತ್ತಿರುವ ಹೊತ್ತಿನಲ್ಲಿ ಭಾರತೀಯ ಸ್ಟೇಟ್​ ಬ್ಯಾಂಕ್​ (ಎಸ್​ಬಿಐ) ಇಸ್ರೇಲ್​ ಜೊತೆಗೆ ದ್ವಿಪಕ್ಷೀಯ ಸಂಬಂಧವನ್ನು ಭಾರತೀಯ ರೂಪಾಯಿಗಳೊಂದಿಗೆ ನಡೆಸಲು ಚಿಂತನೆ ನಡೆಸುತ್ತಿದೆ. ಇಸ್ರೇಲ್​ನಲ್ಲಿ ಇರುವ ಏಕೈಕ ಭಾರತೀಯ ಬ್ಯಾಂಕ್​ ಕೂಡ ಎಸ್​ಬಿಐ ಆಗಿದೆ.

ಇವುಗಳನ್ನೂ ಓದಿ: