ಹುಬ್ಬಳ್ಳಿ : ದೇವಸ್ಥಾನವೊಂದರ ಪೂಜಾರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ಭಾನುವಾರ ನಡೆದಿದೆ.
ಇಲ್ಲಿನ ವೈಷ್ಣೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ದೇವೇಂದ್ರಪ್ಪ ಹೊನ್ನಾಳಿ ಎಂಬುವರು ಹತ್ಯೆಯಾಗಿದ್ದು, ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದುಷ್ಕರ್ಮಿಗಳು ಹತ್ಯೆಗೈದ್ದು ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಹಂತಕರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ನವನಗರ ಎಪಿಎಂಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ: ಮಚ್ಚಿನಿಂದ ಕೊಚ್ಚಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ - Husband killed his wife