ETV Bharat / snippets

ಯು.ಟಿ.ಖಾದರ್ ಸಹೋದರನ ಪುತ್ರಿಯ ಮದುವೆಯಲ್ಲಿ ಸಿಎಂ, ಡಿಸಿಎಂ ಭಾಗಿ

author img

By ETV Bharat Karnataka Team

Published : May 26, 2024, 7:28 AM IST

CM, DCM in marriage program
ಯು.ಟಿ.ಖಾದರ್ ಸಹೋದರನ ಪುತ್ರಿಯ ಮದುವೆ (ETV Bharat)

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ರಾತ್ರಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರ ಹಿರಿಯ ಸಹೋದರ ಯು.ಟಿ ಇಮ್ತಿಯಾಝ್ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡರು. ನಗರದ ಟಿ.ಎಂ.ಎ.ಪೈ ಸಭಾಂಗಣದಲ್ಲಿ ಮದುವೆ ಜರುಗಿತು.

ಮಧ್ಯಾಹ್ನ ಮಂಗಳೂರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ಭೇಟಿ ದೇವರ ದರ್ಶನ ಪಡೆದು, ಬೆಳ್ತಂಗಡಿಯಲ್ಲಿ ದಿ.ವಸಂತ ಬಂಗೇರ ಅವರ ನುಡಿನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಂಜೆ ಮಂಗಳೂರಿಗೆ ಆಗಮಿಸಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಶೇಷ ವಿಮಾನದ ಮೂಲಕ ಮೈಸೂರಿಗೆ ತೆರಳಿದರು.

ಇದನ್ನೂ ಓದಿ: ಧರ್ಮಸ್ಥಳಕ್ಕೆ ಸಿಎಂ, ಡಿಸಿಎಂ ಭೇಟಿ: ಸಾಂಪ್ರದಾಯಿಕ ಉಡುಗೆಯೊಂದಿಗೆ ದೇವರ ದರ್ಶನ - CM DCM Visited Dharmasthala

ETV Bharat Logo

Copyright © 2024 Ushodaya Enterprises Pvt. Ltd., All Rights Reserved.