ಚಾಮರಾಜನಗರ: ಸ್ವಂತ ಅಣ್ಣನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ದುರುಳ ಚಿಕ್ಕಪ್ಪನಿಗೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ.
ಅಪರಾಧಿ ಚಾಮರಾಜನಗರ ಜಿಲ್ಲೆಯವನೇ ಆಗಿದ್ದು, ಸ್ವಂತ ಅಣ್ಣನ ಮಗಳಾದ ಅಪ್ರಾಪ್ತೆಯನ್ನು ಅಪಹರಿಸಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರ ಎಸಗಿದ್ದ. ಸಾಕ್ಷ್ಯಾಧಾರಗಳಿಂದ ಕಾಮಾಂಧನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ ನ್ಯಾಯಾಧೀಶ ಎಸ್.ಜೆ.ಕೃಷ್ಣ ಅವರು ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.