ETV Bharat / sports

"ಈ ಸಲವೂ ಕಪ್​ ನಮ್ಮದೇ" ಮತ್ತೊಮ್ಮೆ ಐಪಿಎಲ್​ ಸಿಂಹಾಸನ ಏರಿದ RCB!!

ಗುರಾತ್​ ಟೈಟಾನ್ಸ್​ ವಿರುದ್ದ ನಡೆದಿದ್ದ ಐಪಿಎಲ್​ 2026ರ ಫೈನಲ್​ ಪಂದ್ಯದಲ್ಲಿ ಆರ್​ಸಿಬಿ ತಂಡ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

ಗುಜರಾತ್​ ಮಣಿಸಿ ಎರಡನೇ ಬಾರಿಗೆ ಚಾಂಪಿಯನ್​ ಪಟ್ಟಕ್ಕೇರಿದ ಆರ್​ಸಿಬಿ
ಗುಜರಾತ್​ ಮಣಿಸಿ ಎರಡನೇ ಬಾರಿಗೆ ಚಾಂಪಿಯನ್​ ಪಟ್ಟಕ್ಕೇರಿದ ಆರ್​ಸಿಬಿ (ETV Bharat)
author img

By ETV Bharat Sports Team

Published : May 31, 2026 at 11:28 PM IST

2 Min Read
Choose ETV Bharat

17 ವರ್ಷಗಳಿಂದ ಐಪಿಎಲ್ ಟ್ರೋಫಿ ಗೆಲ್ಲದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2025ರಲ್ಲಿ ಚೊಚ್ಚಲ ಬಾರಿಗೆ ಟ್ರೋಫಿಯನ್ನು ಗೆದ್ದುಕೊಂಡಿತು. ಇದೀಗ ಯಶಸ್ವಿಯಾಗಿ ಟ್ರೋಫಿಯನ್ನು ಉಳಿಸಿಕೊಂಡಿದೆ. ರಜತ್ ಪಾಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ ಹಣಾಹಣಿಯಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಎದುರಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 156 ರನ್‌ಗಳ ಸಮಾನ್ನಯ ಗುರಿಯನ್ನು ನಿಗದಿಪಡಿಸಿತು, ಇದನ್ನು ಬೆನ್ನತ್ತಿದ ಆರ್​ಸಿಬಿ 18 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ ಗುರಿಯನ್ನು ತಲುಪಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿ ಅಜೇಯವಾಗಿ ಅರ್ಧಶತಕ ಸಿಡಿಸಿದರು.

ಕೊಹ್ಲಿ ಅರ್ಧಶತಕ: ಗುಜರಾತ್ ಟೈಟಾನ್ಸ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಆರ್‌ಸಿಬಿ ಗೆಲ್ಲಲು ಕೇವಲ 156 ರನ್‌ಗಳ ಗುರಿಯನ್ನು ಹೊಂದಿತ್ತು. ಇದನ್ನು ಬೆನ್ನಟ್ಟಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಮತ್ತು ವೆಂಕಟೇಶ್ ಅಯ್ಯರ್ ಇನ್ನಿಂಗ್ಸ್ ಆರಂಭಿಸಿದರು. ಇವರಿಬ್ಬರು ಕೇವಲ 4.3 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 62 ರನ್‌ಗಳ ಆರಂಭಿಕ ಪಾಲುದಾರಿಕೆಯನ್ನು ಹಂಚಿಕೊಂಡರು. ಈ ಪಾಲುದಾರಿಕೆಯು ಆರ್‌ಸಿಬಿ ಅಂತಿಮ ಪಂದ್ಯವನ್ನು ಆರಂಭದಿಂದಲೇ ಏಕಪಕ್ಷೀಯವನ್ನಾಗಿ ಮಾಡಲು ಸಹಾಯ ಮಾಡಿತು.

ಆದಾಗ್ಯೂ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ವೆಂಕಟೇಶ್ ಅಯ್ಯರ್ 16 ಎಸೆತಗಳಲ್ಲಿ 32 ರನ್‌ಗಳಿಸಿದ್ದಾಗ ಔಟಾದರು. ನಂತರ ಬ್ಯಾಟಿಂಗ್ ಮಾಡಲು ಬಂದ ದೇವದತ್ ಪಡಿಕ್ಕಲ್ ಕೇವಲ ಒಂದು ರನ್ ಗಳಿಸಲು ಸಾಧ್ಯವಾಯಿತು. ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಕೂಡ 15 ರನ್ ಗಳಿಸಿದರೆ, ಕೃನಾಲ್ ಪಾಂಡ್ಯ ಕೇವಲ ಒಂದು ರನ್ ಗಳಿಸಿ ವಿಕೆಟ್​ ಕಳೆದುಕೊಂಡರು. ನಂತರ ವಿರಾಟ್​ ಕೊಹ್ಲಿ ಜವಾಬ್ದಾರಿಯುತ ಆಟವಾಡಿ ಕೊನೆಯವರೆಗೂ ನಿಂತು ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಕಳಪೆ ಆರಂಭ ಪಡೆದುಕೊಂಡಿತು. ಪವರ್​ಪ್ಲೇ ಮುಗಿಯುವ ಮುನ್ನವೇ ಗಿಲ್​ ಮತ್ತು ಸುದರ್ಶನ್ ಇಬ್ಬರೂ ಪೆವಿಲಿಯನ್‌ಗೆ ಮರಳಿದರು. ನಂತರ ವಾಷಿಂಗ್ಟನ್ ಸುಂದರ್ 37 ಎಸೆತಗಳಲ್ಲಿ 50 ರನ್ ಗಳಿಸಿ ಹೈಸ್ಕೋರರ್​ ಎನಿಸಿಕೊಂಡರು. ಇವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್​ಗಳ 20 ರನ್‌ಗಳಿಗಿಂತ ಹೆಚ್ಚಿನ ರನ್​ ಗಳಿಸಲು ಸಾಧ್ಯವಾಗಲಿಲ್ಲ. ಆರ್‌ಸಿಬಿ ಪರ ರಸಿಕ್ ಸಲಾಂ ದಾರ್ ಮೂರು ವಿಕೆಟ್‌ ಪಡೆದರೇ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ತಲಾ ಎರಡು ವಿಕೆಟ್ ಪಡೆದರು, ಕೃನಾಲ್ ಪಾಂಡ್ಯ ಒಂದು ವಿಕೆಟ್ ಕಿತ್ತರು. ಇನ್ನು ಈ ಗೆಲುವಿನೊಂದಿಗೆ ಆರ್​ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ ಮೂರನೇ ತಂಡವಾಗಿ ದಾಖಲೆ ಬರೆದಿದೆ.

ಸತತ ಎರಡು ಋತುಗಳಲ್ಲಿ ಐಪಿಎಲ್ ಟ್ರೋಫಿಯನ್ನು ಗೆದ್ದ ತಂಡಗಳು

ಎಂಎಸ್ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 2010 ಮತ್ತು 2011 ರಲ್ಲಿ ಸತತ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ 2019 ಮತ್ತು 2020 ರಲ್ಲಿ ಐಪಿಎಲ್‌ನಲ್ಲಿ ಸತತ ಪ್ರಶಸ್ತಿಗಳನ್ನು ಗೆದ್ದುಕೊಂಡಿತು.

2025ರ ಫೈನಲ್‌ನಲ್ಲಿ ರಜತ್​ ಪಾಟಿದಾರ್​ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಶಸ್ತಿಯನ್ನು ಗೆದ್ದುಕೊಂಡಿತು, ಇದೀಗ 2026 ರ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಟ್ರೋಫಿ ಗೆದ್ದುಕೊಂಡಿದೆ.