ಭಾರತ ವಿರುದ್ಧ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ; ಅಕ್ಷರ್ ಪಟೇಲ್, ಸಂಜು ಸ್ಯಾಮ್ಸನ್‌ಗೆ ಅವಕಾಶ
ಟಿ20 ವಿಶ್ವಕಪ್: ಭಾರತದ ವಿರುದ್ಧ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ದುಕೊಂಡಿದೆ. ಭಾರತ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ನಿರೀಕ್ಷೆ ಇದೆ.

Published : February 26, 2026 at 6:54 PM IST
|Updated : February 26, 2026 at 7:08 PM IST
ಚೆನ್ನೈ(ತಮಿಳುನಾಡು): ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿಂದು ಭಾರತ-ಜಿಂಬಾಬ್ವೆ ತಂಡಗಳ ನಡುವೆ ಮಹತ್ವದ ಸೂಪರ್ 8 ಪಂದ್ಯ ನಡೆಯುತ್ತಿದೆ. ಭಾರತದ ವಿರುದ್ಧ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ದುಕೊಂಡಿದೆ. ಬ್ಯಾಟಿಂಗ್ ಆರಂಭಿಸಿರುವ ಭಾರತದ ಪರ ಓಪನರ್‌ಗಳಾಗಿ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಕ್ರೀಸ್‌ನಲ್ಲಿದ್ದಾರೆ.
ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಸೆಮಿಫೈನಲ್‌ಗೆ ಪ್ರವೇಶ ಪಡೆಯಲು ಈ ಪಂದ್ಯ ಎರಡೂ ತಂಡಗಳಿಗೂ ಬಹಳ ಮಹತ್ವದ್ದಾಗಿದೆ.
🚨 Toss 🚨#TeamIndia have been asked to bat first in their second Super 8 Fixture!
— BCCI (@BCCI) February 26, 2026
Updates ▶️ https://t.co/p4GxtxGkBf#T20WorldCup | #MenInBlue | #INDvZIM pic.twitter.com/VMHTKSVPUC
ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ವಾಷಿಂಗ್ಟನ್ ಸುಂದರ್ ಬದಲಿಗೆ ಅಕ್ಷರ್ ಪಟೇಲ್ ಮತ್ತು ರಿಂಕು ಸಿಂಗ್ ಬದಲಿಗೆ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗಿದೆ.
ಭಾರತ (ಪ್ಲೇಯಿಂಗ್ 11): ಸಂಜು ಸ್ಯಾಮ್ಸನ್(ವಿ.ಕೀ), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್(ಕ್ಯಾಪ್ಟನ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
A look at #TeamIndia's Playing XI for the #INDvZIM contest 🙌
— BCCI (@BCCI) February 26, 2026
Updates ▶️ https://t.co/p4GxtxGkBf#T20WorldCup | #MenInBlue pic.twitter.com/CTXKP3bwIu
ಜಿಂಬಾಬ್ವೆ (ಪ್ಲೇಯಿಂಗ್ 11): ತಡಿವಾನಾಶೆ ಮರುಮಾನಿ(ವಿ.ಕೀ), ಬ್ರಿಯಾನ್ ಬೆನೆಟ್, ಡಿಯೋನ್ ಮೈಯರ್ಸ್, ರಿಯಾನ್ ಬರ್ಲ್, ಸಿಕಂದರ್ ರಜಾ(ಕ್ಯಾ), ಟೋನಿ ಮುನ್ಯೊಂಗಾ, ತಶಿಂಗಾ ಮುಸೆಕಿವಾ, ಬ್ರಾಡ್ ಇವಾನ್ಸ್, ಟಿನೊಟೆಂಡಾ ಮಪೋಸಾ, ಬ್ಲೆಸ್ಸಿಂಗ್ ಮುಜರಬಾನಿ, ರಿಚರ್ಡ್ ನಾಗರವಾ
ಇದನ್ನೂ ಓದಿ: 16.1 ಓವರ್‌ಗಳಲ್ಲೇ 177 ರನ್ ಚೇಸ್! ದ.ಆಫ್ರಿಕಾ ಬಿರುಗಾಳಿಗೆ ವಿಂಡೀಸ್ ಧೂಳೀಪಟ; ಭಾರತದ ಸೆಮಿಫೈನಲ್ ಆಸೆ ಜೀವಂತ

