ದುಬೈ ನಿಂದ ಭಾರತಕ್ಕೆ ವಾಪಾಸ್ ಆದ ಟೆನ್ನಿಸ್ ತಾರೆ ಪಿವಿ ಸಿಂಧು!!
ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತದ ಟೆನ್ನಿಸ್ ತಾರೆ ಪಿವಿ ಸಿಂಧು ಭಾರತಕ್ಕೆ ವಾಪಾಸ್ ಆಗಿದ್ದಾರೆ.


Published : March 3, 2026 at 1:49 PM IST
ಪಶ್ಚಿಮ ಏಷ್ಯಾದ ಉದ್ವಿಗ್ನತೆಯ ನಡುವೆ ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂಧು ಕೊನೆಗೂ ತವರಿಗೆ ವಾಪಾಸಾಗಿದ್ದಾರೆ. ಅವರು ಮಂಗಳವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಸ್ವತಃ ಸಿಂಧು ತಮ್ಮ ಎಕ್ಸ್ ಖಾತೆ ಮೂಲಕ ಇದನ್ನು ಬಹಿರಂಗಪಡಿಸಿದ್ದಾರೆ.
"ನಾನು ಸುರಕ್ಷಿತವಾಗಿ ಬೆಂಗಳೂರನ್ನು ತಲುಪಿದ್ದೇನೆ. ಕಳೆದ ಕೆಲವು ದಿನಗಳಿಂದ ಬಹಳ ಅನಿಶ್ಚಿತ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದರೂ, ನಾನು ಅಂತಿಮವಾಗಿ ಮನೆಗೆ ತಲುಪಲು ಸಾಧ್ಯವಾಯಿತು. ಈ ಕಷ್ಟದ ಸಮಯದಲ್ಲಿ ನಮ್ಮನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ದುಬೈ ಅಧಿಕಾರಿಗಳು, ವಿಮಾನ ನಿಲ್ದಾಣದ ಸಿಬ್ಬಂದಿ ಮತ್ತು ಇಮಿಗ್ರೇಷನ್ ಅಧಿಕಾರಿಗಳು ಒದಗಿಸಿದ ಸೇವೆಗಳನ್ನು ನಾನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಅವರೆಲ್ಲರಿಗೂ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನಾನು ಈಗ ವಿಶ್ರಾಂತಿ ಪಡೆಯಲು ಬಯಸುತ್ತೇನೆ. ರಿಸೆಟ್ ಆದ ನಂತರ ನನ್ನ ಮುಂದಿನ ಯೋಜನೆಗಳ ಬಗ್ಗೆ ಯೋಚಿಸುತ್ತೇನೆ,'' ಎಂದು ಸಿಂಧು ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗಾಗಿ ಕಳೆದ ವಾರ ಇಂಗ್ಲೆಂಡ್‌ಗೆ ತೆರಳಿದ್ದ ಸಿಂಧು, ಯುಎಸ್-ಇಸ್ರೇಲ್ ಮತ್ತು ಇರಾನ್ ಘರ್ಷಣೆಯಿಂದಾಗಿ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದರು. ಉದ್ವಿಗ್ನತೆಯ ನಡುವೆ ಕಳೆದ ಶನಿವಾರ ವಿಮಾನ ಸೇವೆಗಳನ್ನು ಹಠಾಟ್ ರದ್ದುಗೊಳಿಸಿದ ನಂತರ ಅವರ ಪ್ರಯಾಣವನ್ನು ಸ್ಥಗಿತಗೊಳಿಸಲಾಯಿತು. ಅಂದಿನಿಂದ ಅವರು ದುಬೈನಲ್ಲಿ ಸಿಲುಕಿಕೊಂಡಿದ್ದರು. ಈ ಸಂದರ್ಭದಲ್ಲಿ, ಯುಎಇ ಮತ್ತು ಭಾರತೀಯ ಅಧಿಕಾರಿಗಳ ಸಮನ್ವಯದೊಂದಿಗೆ ಅಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ವ್ಯವಸ್ಥೆ ಮಾಡಲಾಯಿತು. ಇದರಿಂದಾಗಿ ಸಿಂಧು ಬೆಂಗಳೂರಿಗೆ ಬಂದಿಳಿದ್ದಾರೆ.
Back home in Bangalore and safe 🙏
— Pvsindhu (@Pvsindhu1) March 3, 2026
The last few days have been intense and uncertain, but I’m truly grateful to be back to my house. A heartfelt thank you to the incredible ground teams, Dubai authorities, airport staff, immigration, and every single person who stepped up and…
ಏತನ್ಮಧ್ಯೆ, ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಮಂಗಳವಾರ ಆರಂಭವಾಗಲಿದೆ. ಈ ಪಂದ್ಯಾವಳಿಯಲ್ಲಿ ಸಿಂಧು ಭಾಗವಹಿಸುವ ಬಗ್ಗೆ ಅನಿಶ್ಚಿತತೆ ಇದೆ. ಪ್ರಸ್ತುತ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಬ್ಯಾಡ್ಮಿಂಟನ್ ವಿಶ್ವ ಒಕ್ಕೂಟ (WFI), ಪ್ರಯಾಣದ ಅಡಚಣೆಗಳಿಂದಾಗಿ ಆಟಗಾರರು ತಡವಾಗಿ ಬಂದರೆ ವೇಳಾಪಟ್ಟಿಯಲ್ಲಿ ಬದಲಾವಣೆಗಳನ್ನು ಮಾಡಲು ಸಿದ್ಧರಿರುವಂತೆ ತೋರುತ್ತಿದೆ. ಆದಾಗ್ಯೂ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಲಾಗಿಲ್ಲ.
ವಿಶ್ವ ಶ್ರೇಯಾಂಕದಲ್ಲಿ 12 ನೇ ಸ್ಥಾನದಲ್ಲಿರುವ ಟೆನ್ನಿಸ್ ತಾರೆ ಪಿವಿ ಸಿಂಧು, ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಥೈಲ್ಯಾಂಡ್‌ನ ಸುಪಾನಿಡಾ ಕಟೆಥಾಂಗ್ ಅವರನ್ನು ಎದುರಿಸಬೇಕಿತ್ತು. ಲಕ್ಷ್ಯ ಸೇನ್ ಮತ್ತು ಆಯುಷ್ ಶೆಟ್ಟಿ ತಮ್ಮ ಮೊದಲ ಸುತ್ತಿನ ಪಂದ್ಯಗಳನ್ನು ಗೆದ್ದುಕೊಂಡಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನ ತಂಡದ ಆಟಗಾರರಿಗೆ ತಲಾ ₹50 ಲಕ್ಷ ದಂಡ ವಿಧಿಸಿದ ಪಿಸಿಬಿ!!

