ಮುಂದಿನ ಎರಡೂವರೆ ವರ್ಷಗಳ ಕಾಲ ಸಿಎಂ ಆಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತೀರಿ: ಬಸವರಾಜ ರಾಯರೆಡ್ಡಿ ಪತ್ರ
ಮುಂದಿನ ಎರಡೂವರೆ ವರ್ಷಗಳ ಕಾಲ ಅಂದರೆ 28 ಮೇ 2028 ರವರೆಗೆ ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತೀರಿ ಎಂದು ನನ್ನ ನಂಬಿಕೆಯಾಗಿದೆ ಎಂದು ಬಸವರಾಜ ರಾಯರೆಡ್ಡಿ ಸಿಎಂಗೆ ಪತ್ರ ಬರೆದು ಅಭಿನಂದಿಸಿದ್ದಾರೆ.

Published : January 6, 2026 at 7:00 PM IST
ಬೆಂಗಳೂರು: ದೀರ್ಘಾವದಿ ಸಿಎಂ ಆಗಿ ಮುಂದುವರೆದಿರುವ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿ ಬರೆದ ಪತ್ರದಲ್ಲಿ ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ, ಮುಂದಿನ ಎರಡೂವರೆ ವರ್ಷಗಳ ಕಾಲ ಅಂದರೆ 28 ಮೇ 2028 ರವರೆಗೆ ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತೀರಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಂದಿನ ಎರಡೂವರೆ ವರ್ಷ ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸುವ ವಿಶ್ವಾಸವಿದೆ ಎಂದು ಉಲ್ಲೇಖಿಸುವ ಮೂಲಕ ಪವರ್ ಫೈಟ್ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ತಮ್ಮ ಪತ್ರದಲ್ಲಿ ಸಾಮಾಜಿಕ ನ್ಯಾಯ ತಾತ್ವಿಕ ಮತ್ತು ರಾಜಕೀಯ ಪರಂಪರೆ ಮತ್ತು ಸರ್ವಾಂಗೀಣ ಅಭಿವೃದ್ಧಿ ಚಿಂತನೆಗಳನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಮುಂದುವರೆಸಿಕೊಂಡು, ಕರ್ನಾಟಕದ ಇತಿಹಾಸಕ್ಕೆ ಹೊಸ ಮೈಲಿಗಲ್ಲು ಸ್ಥಾಪಿಸಿ ನೀವು 13-05-2013 ರಿಂದ 15-05-2018 ರವರೆಗೆ ಹಾಗೂ 20-05-2023 ರಿಂದ 06-01-2026 ರವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದೀರಿ. ಸುದೀರ್ಘ ಮತ್ತು ಸಾರ್ಥಕ ಆಡಳಿತದ ಮೂಲಕ ಚಾರಿತ್ರಿಕ ದಾಖಲೆ ನಿರ್ಮಿಸುತ್ತಿರುವುದು ರಾಜ್ಯದ ಜನತೆಗೆ ಅಪಾರ ಹೆಮ್ಮೆಯ ವಿಷಯವಾಗಿದೆ ಹಾಗೂ ಮುಂದಿನ ಎರಡೂವರೆ ವರ್ಷಗಳ ಕಾಲ ಅಂದರೆ 28 ಮೇ 2028 ರವರೆಗೆ ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತೀರಿ ಎಂದು ನನ್ನ ನಂಬಿಕೆಯಾಗಿದೆ ಎಂದಿದ್ದಾರೆ.
ಪತ್ರದ ಸಾರಾಂಶ ಏನು?: ಕರ್ನಾಟಕದ ಸಾಮಾಜಿಕ ನ್ಯಾಯ ಹಾಗೂ ಜನಪರ ಸರ್ವಾಂಗೀಣ ಅಭಿವೃದ್ಧಿ ಪರಂಪರೆಯನ್ನು ಸಮರ್ಥವಾಗಿ ಮುಂದುವರಿಸುತ್ತಿರುವ ನಿಮ್ಮ ದೂರದೃಷ್ಟಿಯ ನಾಯಕತ್ವಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ರಾಜ್ಯದ ಪರಂಪರೆಯಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಮಹಾನ್ ನಾಯಕರಲ್ಲಿ ದಿವಂಗತ ದೇವರಾಜ ಅರಸು ಅವರು ಅಗ್ರಗಣ್ಯರು. ಅವರು 20-03-1972 ರಿಂದ 31-12-1977 ರವರೆಗೆ ಹಾಗೂ 28-02-1978 ರಿಂದ 07-01-1980 ರವರೆಗೆ ಒಟ್ಟಾರೆ 2792 ದಿನಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ, ಭೂ ಸುಧಾರಣೆ, ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಉನ್ನತಿ ಮತ್ತು ಶೋಷಿತರ ಸಬಲೀಕರಣದ ಮೂಲಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅಮರ ಅಧ್ಯಾಯವೊಂದನ್ನು ರಚಿಸಿದರು ಎಂದು ಬಣ್ಣಿಸಿದ್ದಾರೆ.
ಅದೇ ಸಾಮಾಜಿಕ ನ್ಯಾಯ, ತಾತ್ವಿಕ ಮತ್ತು ರಾಜಕೀಯ ಪರಂಪರೆ ಮತ್ತು ಸರ್ವಾಂಗೀಣ ಅಭಿವೃದ್ಧಿ ಚಿಂತನೆಗಳನ್ನು ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ಮುಂದುವರೆಸಿಕೊಂಡು, ಕರ್ನಾಟಕದ ಇತಿಹಾಸಕ್ಕೆ ಹೊಸ ಮೈಲಿಗಲ್ಲು ಸ್ಥಾಪಿಸಿ ನೀವು 13-05-2013 ರಿಂದ 15-05-2018 ರವರೆಗೆ ಹಾಗೂ 20-05-2023 ರಿಂದ 06-01-2026 ರವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು, ಸುದೀರ್ಘ ಮತ್ತು ಸಾರ್ಥಕ ಆಡಳಿತದ ಮೂಲಕ ಚಾರಿತ್ರಿಕ ದಾಖಲೆ ನಿರ್ಮಿಸುತ್ತಿರುವುದು ರಾಜ್ಯದ ಜನತೆಗೆ ಅಪಾರ ಹೆಮ್ಮೆಯ ವಿಷಯವಾಗಿದೆ ಹಾಗೂ ಮುಂದಿನ ಎರಡುವರೆ ವರ್ಷಗಳ ಕಾಲ ಅಂದರೆ 28 ಮೇ 2028 ರವರೆಗೆ ಈ ರಾಜ್ಯದ ಮುಖ್ಯಮಂತ್ರಿಗಳಾಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿರಿ ಎಂದು ನನ್ನ ನಂಬಿಕೆಯಾಗಿದೆ ಎಂದಿದ್ದಾರೆ.
ನಿಮ್ಮ ಸಮಾಜಮುಖಿ ಮತ್ತು ಪ್ರಗತಿಪರ ದೃಷ್ಟಿಕೋನಕ್ಕೆ ಸಮಕಾಲೀನ ರಾಜಕೀಯ ರೂಪ ನೀಡಿದ ನಾಯಕರೆಂದು ನಿಮ್ಮನ್ನು ಗೌರವದಿಂದ ಮುಂದಿನ ಇತಿಹಾಸ ಪುಟಗಳಲ್ಲಿ ಸ್ಮರಿಸುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಕೋಟ್ಯಂತರ ಜನತೆಯ ಪರವಾಗಿ, ನಿಮ್ಮ ದೂರದೃಷ್ಟಿಯ ನಾಯಕತ್ವಕ್ಕೆ, ಜನಪರ ನೀತಿಗಳಿಗೆ ಹಾಗೂ ರಾಜ್ಯವನ್ನು ಸಮಾನತೆ, ಸೌಹಾರ್ದ ಮತ್ತು ಸಾಮಾಜಿಕ ನ್ಯಾಯದ ದಾರಿಯಲ್ಲಿ ದಿಟ್ಟವಾಗಿ ಮುನ್ನಡೆಸುತ್ತಿರುವ ನಿಮ್ಮ ಅವಿರತ ಸೇವೆಗೆ ಗೌರವಪೂರ್ವಕ ಹಾಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮ ಆಡಳಿತವು ಮುಂದಿನ ಪೀಳಿಗೆಗಳಿಗೆ ದಾರಿ ದೀಪವಾಗಲಿ. ಕರ್ನಾಟಕವು ಸರ್ವಾಂಗೀಣ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದದ ಮಾದರಿ ರಾಜ್ಯವಾಗಿ ರಾಷ್ಟ್ರಮಟ್ಟದಲ್ಲಿ ತನ್ನ ಸ್ಥಾನವನ್ನು ಇನ್ನಷ್ಟು ದೃಢಪಡಿಸಲಿ ಎಂಬುದು ನನ್ನ ಹಾರೈಕೆ ಎಂದಿದ್ದಾರೆ.
ಇವುಗಳನ್ನೂ ಓದಿ:

