ETV Bharat / state

ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಬೆದರಿಕೆ ಸಂದೇಶ: ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಿರುವ ಕಾಮೆಂಟ್​ವೊಂದು ಹರಿದಾಡಿದೆ.

FIR
ಎಫ್​ಐಆರ್ (IANS)
author img

By ETV Bharat Karnataka Team

Published : March 2, 2026 at 6:43 PM IST

|

Updated : March 2, 2026 at 7:01 PM IST

1 Min Read
Choose ETV Bharat

ಮಂಗಳೂರು (ದಕ್ಷಿಣ ಕನ್ನಡ) : ಸಾಮಾಜಿಕ ಜಾಲತಾಣದಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಬೆದರಿಕೆ ಹಾಕಿದ ಕಾಮೆಂಟ್ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಲಾಗಿದ್ದ ಫೋಟೋಗೆ ಬಂದ ಕಾಮೆಂಟ್ ಬಾಕ್ಸ್‌ನಲ್ಲಿ ಬೆಂಬಲ ನೀಡಿ ಮಸೀದಿ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ ಎಂಬ ಬರಹ ಪೋಸ್ಟ್ ಮಾಡಲಾಗಿದೆ. ಈ ಕಾಮೆಂಟ್ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ವಿಷಯ ಪೊಲೀಸರ ಗಮನಕ್ಕೆ ಬಂದ ಬಳಿಕ ತಕ್ಷಣ ಕ್ರಮ ಕೈಗೊಳ್ಳಲಾಗಿದೆ.

ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

'ಸಾಮಾಜಿಕ ಜಾಲತಾಣದಲ್ಲಿ ಮಾಡಲಾದ ಈ ರೀತಿಯ ಕಾಮೆಂಟ್ ಸ್ಪಷ್ಟವಾಗಿ ಅಪರಾಧವಾಗಿದೆ. ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದೆ. ಆರೋಪಿಯನ್ನು ಬಂಧಿಸಲಾಗುತ್ತದೆ. ಅಪರಾಧ ಮಾಡಿದವರ ವಿರುದ್ಧವೇ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಕಸಬ್‌ ಮರಣ ದಂಡನೆ ಉಲ್ಲೇಖಿಸಿ ಕೋರಮಂಗಲದ ಪ್ರಾದೇಶಿಕ ಪಾಸ್‌ಪೋರ್ಟ್​ ಕಚೇರಿಗೆ ಹುಸಿ ಬಾಂಬ್​ ಬೆದರಿಕೆ

ಕೋರಮಂಗಲದ ಪ್ರಾದೇಶಿಕ ಪಾಸ್‌ಪೋರ್ಟ್​ ಕಚೇರಿಗೆ ಹುಸಿ ಬಾಂಬ್​ ಬೆದರಿಕೆ (ಬೆಂಗಳೂರು) : ನಗರದಲ್ಲಿ ಹುಸಿ ಬಾಂಬ್​​​ ಬೆದರಿಕೆ ಪ್ರಕರಣಗಳ ಸರಣಿ ಮುಂದುವರೆದಿದೆ. ಕೋರಮಂಗಲದ ಪ್ರಾದೇಶಿಕ ಪಾಸ್‌ಪೋರ್ಟ್​​ ಕಚೇರಿಗೆ ಇಂದು ಕಿಡಿಗೇಡಿಗಳು ಇ-ಮೇಲ್​​ ಮೂಲಕ ಬಾಂಬ್​​​ ಬೆದರಿಕೆ ಹಾಕಿದ್ದು, ಕೆಲಕಾಲ ಭಾರಿ ಆತಂಕದ ವಾತಾವರಣಕ್ಕೆ ಕಾರಣವಾಗಿತ್ತು.

ಆದರೆ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರ ಸುದೀರ್ಘ ಪರಿಶೀಲನೆಯ ನಂತರ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಖಚಿತವಾಗಿದೆ. ಪಾಸ್‌ಪೋರ್ಟ್​ ಕಚೇರಿಯ ಅಧಿಕೃತ ಇ-ಮೇಲ್​ಗೆ ತಮಿಳು ಭಾಷೆಯಲ್ಲಿ ಸಂದೇಶ ರವಾನಿಸಲಾಗಿದ್ದು "ಅಜ್ಮಲ್​​ ಕಸಬ್‌ನಿಗೆ ಮರಣ ದಂಡನೆ ವಿಧಿಸಿರುವ ನಿಮ್ಮನ್ನು ನಾವು ಬಿಡುವುದಿಲ್ಲ. ಕೆಲವೇ ಹೊತ್ತಿನಲ್ಲಿ ಕಚೇರಿಯಲ್ಲಿರಿಸಿರುವ ಸ್ಫೋಟಕಗಳು ಸ್ಫೋಟಗೊಳ್ಳಲಿವೆ" ಎಂದು ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಷಯ ತಿಳಿಯುತ್ತಿದ್ದಂತೆಯೇ ಕೋರಮಂಗಲ ಠಾಣೆ ಪೊಲೀಸರು, ಬಾಂಬ್​ ಪತ್ತೆ ಹಾಗೂ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ​ಕಚೇರಿಯ ಸಿಬ್ಬಂದಿ ಮತ್ತು ಸಾರ್ವಜನಿಕರನ್ನು ತಕ್ಷಣವೇ ಹೊರಗೆ ಕಳುಹಿಸಿ ತಪಾಸಣೆ ನಡೆಸಿದ್ದಾರೆ.​ ದೈನಂದಿನ ಪಾಸ್‌ಪೋರ್ಟ್ ವಿತರಣಾ ಕಾರ್ಯವನ್ನು ಕೆಲಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

Last Updated : March 2, 2026 at 7:01 PM IST