ETV Bharat / state

ಚಿಕ್ಕಮಗಳೂರು: ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಸಿಟಿ ರವಿ

ಘಟಾ‌ನುಘಟಿ ನಾಯಕರ ಪ್ರವೇಶದಿಂದ ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಚುನಾವಣೆಯು ದಿನದಿಂದ ದಿನಕ್ಕೆ ರಂಗೇರುತ್ತಿದೆ.

Chikkamagaluru: CT Ravi files nomination for District DCC Bank elections
ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪರಿಷತ್ ಸದಸ್ಯ ಸಿಟಿ ರವಿ (ETV Bharat)
author img

By ETV Bharat Karnataka Team

Published : January 8, 2026 at 3:01 PM IST

2 Min Read
Choose ETV Bharat

ಚಿಕ್ಕಮಗಳೂರು: ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರತಿ ಸಲದಂತೆ ಈ ಬಾರಿ ಕೂಡ ಘಟಾನುಘಟಿ ನಾಯಕರು ಕಣಕ್ಕಿಳಿಯುತ್ತಿರುವುದರಿಂದ ಜಿಲ್ಲೆಯಲ್ಲಿ ಸ್ವಲ್ಪ ವಿಶೇಷ ಹಾಗೂ ವಿಭಿನ್ನ ವಾತಾವರಣ ಕಾಣಿಸಲು ಪ್ರಾರಂಭವಾಗಿದೆ.

ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಡಿಸಿಸಿ ಬ್ಯಾಂಕ್ ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಬೆಳವಣಿಗೆಯಿಂದ ಚುನಾವಣಾ ಅಖಾಡ ಇನ್ನಷ್ಟು ರಂಗೇರಿದೆ. ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ - ಜೆಡಿಎಸ್ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದು, ಘಟಾ‌ನುಘಟಿ ನಾಯಕರ ಪ್ರವೇಶದಿಂದ ದಿನದಿಂದ ದಿನಕ್ಕೆ ಲೆಕ್ಕಾಚಾರವೇ ಬದಲಾಗುತ್ತಿದೆ.

ಬಿಜೆಪಿಯಿಂದ ಸಿ.ಟಿ ರವಿ ಹಾಗೂ ಜೆಡಿಎಸ್​ನಿಂದ ಮತ್ತೋರ್ವ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡರಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಇಬ್ಬರ ನಾಮಪತ್ರ ಸಲ್ಲಿಕೆಯಿಂದ‌ ಚುನಾವಣಾ ಅಖಾಡ ಪ್ರಾಮುಖ್ಯತೆ ಪಡೆದಿದೆ. ಕಾಂಗ್ರೆಸ್ ಪಕ್ಷದಿಂದ ಈವರೆಗೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಅಭ್ಯರ್ಥಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದು, ಒಟ್ಟು 13 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಎನ್​ಡಿಎ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನಡುವೆ ನೇರಾ - ನೇರ ಹಣಾಹಣಿ ಸಾಧ್ಯತೆ ಇದ್ದು, ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಸಲು ಕಡೆಯ ದಿನ. ಇದೇ ತಿಂಗಳ 17 ರಂದು‌ ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ ಮತ ಎಣಿಕೆ ಕಾರ್ಯ ಮುಕ್ತಾಯವಾಗಲಿದೆ.

ಇತ್ತೀಚೆಗೆ ಬೆಳಗಾವಿ, ಮಂಡ್ಯ, ಉತ್ತರ ಕನ್ನಡ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆಗಳು ನಡೆದಿದ್ದವು. ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್​​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷ ಸ್ಥಾನಕ್ಕೆ ಶಾಸಕ ರಾಜು ಕಾಗೆ ಅಧಿಕೃತವಾಗಿ ಆಯ್ಕೆಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತದಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ, ರಾಜು ಕಾಗೆ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಕೆಡಿಸಿಸಿ) ಆಡಳಿತ ಮಂಡಳಿ ಚುನಾವಣೆಯಲ್ಲಿ ಪ್ರಕಟಗೊಂಡ ಹಾಗೂ ಮುಂಚೂಣಿಯ ಫಲಿತಾಂಶಗಳ ಪ್ರಕಾರ ಹಾಲಿ ಅಧ್ಯಕ್ಷ ಹಾಗೂ ಶಾಸಕ ಶಿವರಾಮ್ ಹೆಬ್ಬಾರ್ ನೇತೃತ್ವದ ಬಣ ಮುನ್ನಡೆ ಸಾಧಿಸಿದರೆ, ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಆಡಳಿತ ಮಂಡಳಿ ಚುನಾವಣೆಯಲ್ಲಿ 8 ಮಂದಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: