ಕಾರ್ಕಳ: ಪರಶುರಾಮ ಥೀಮ್ ಪಾರ್ಕ್‌ನ ತಾಮ್ರದ ಹೊದಿಕೆ ಕಳ್ಳತನ
ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಭಾರಿ ಮೌಲ್ಯದ ತಾಮ್ರದ ಹೊದಿಕೆ ಕಳವಾಗಿದೆ ಎಂದು ದೂರು ದಾಖಲಾಗಿದೆ.

Published : January 5, 2026 at 1:50 PM IST
ಕಾರ್ಕಳ(ಉಡುಪಿ): ತಾಲೂಕಿನ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ಗೆ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ತಾಮ್ರದ ಹೊದಿಕೆಯನ್ನು ಕಳವು ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಪರಶುರಾಮ ಥೀಮ್ ಪಾರ್ಕ್‌ನ ಮುಖ್ಯ ದ್ವಾರವನ್ನು ಆಯುಧದಿಂದ ಮೀಟಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು, ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ ತಾಮ್ರದ ಹೊದಿಕೆಯನ್ನು ಕಳ್ಳತನ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.
ಪಾರ್ಕ್‌ನ ಮಾಜಿ ಕಾವಲುಗಾರ ಬೈಲೂರಿನ ಸಂತೋಷ್, ಈ ವಿಷಯವನ್ನು ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ಗೆ ತಿಳಿಸಿದ್ದು, ಅವರು ನೀಡಿದ ದೂರಿನ ಮೇರೆಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಠಾಣಾ ಉಪನಿರೀಕ್ಷಕ ಶಿವಕುಮಾರ್ ಎಸ್.ಆರ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರ ತಂಡ, ಶ್ವಾನದಳ ಹಾಗೂ ಸೋಕೋ ತಂಡ ಆಗಮಿಸಿ ಘಟನಾ ಸ್ಥಳದಿಂದ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದಾರೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸ್ ಮಾಲೀಕ ಸೈಫುದ್ದೀನ್ ಕೊಲೆ, ಆರೋಪಿಗಳ ವಿರುದ್ಧ ಕೋಕಾ ಕೇಸ್: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ನಾಗಬನದ ಸಮೀಪ ನಡೆದ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೇರಿ ಒಟ್ಟು ಆರು ಮಂದಿ ವಿರುದ್ಧ ಕೋಕಾ (KCOCA) ಕಾಯ್ದೆಯ ಸೆಕ್ಷನ್ 3 ಅಳವಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಇತ್ತೀಚೆಗೆ ತಿಳಿಸಿದ್ದರು.
27-09-2025ರಂದು ಬೆಳಗ್ಗೆ ಫೈಜಲ್ ಖಾನ್ ಎಂಬಾತ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಇರುವ ಸೈಫುದ್ದೀನ್ ಅವರ ಮನೆಗೆ ಬಂದು, ಬಸ್ ವ್ಯವಹಾರ ಕುರಿತು ಮಾತನಾಡಲು ಮಂಗಳೂರಿಗೆ ಹೋಗಬೇಕಿದೆ ಎಂದು ಹೇಳಿ, ಬೆಳಗ್ಗೆ ಸುಮಾರು 10 ಗಂಟೆಗೆ ಕಾರಿನಲ್ಲಿ ಹೊರಟಿದ್ದರು. ನಂತರ ಫೈಜಲ್ ಖಾನ್ ಹಾಗೂ ಶರೀಫ್ ಸೇರಿದಂತೆ ಇತರರು ಸೇರಿಕೊಂಡು ಸೈಫುದ್ದೀನ್ ಅವರನ್ನು ಮಲ್ಲೆಗೆ ಕರೆದುಕೊಂಡು ಹೋಗಿ, ಬೆಳಗ್ಗೆ 10.15ರಿಂದ 11.30ರ ಮಧ್ಯೆ ಉಡುಪಿ ತಾಲೂಕು ಕೊಡವೂರು ಗ್ರಾಮದ ನಾಗಬನದ ಬಳಿ ಇರುವ (ಎಚ್.ಎ. ಮಂಜಿಲ್) ಮನೆಯಲ್ಲಿ ಮಚ್ಚಿನಿಂದ ತಲೆ ಮತ್ತು ಬೆನ್ನಿಗೆ ಹೊಡೆದು ಕೊಲೆ ಮಾಡಿದ್ದರು.
ಕೊಲೆಯ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 108/2025 ಕಲಂ 103 ಹಾಗೂ 3(5) ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಾದ ಮಹಮ್ಮದ್ ಫೈಜಲ್ ಖಾನ್ (27), ಮುಹಮ್ಮದ್ ಶರೀಫ್ (37) ಮತ್ತು ಅಬ್ದುಲ್ ಶುಕುರ್ (43) ಮತ್ತು ನಾಲ್ಕನೇ ಆರೋಪಿ ರಿಧಾ ಶಭನಾ (27) ಅವರನ್ನು ಬಂಧಿಸಲಾಗಿತ್ತು.
ಇವುಗಳನ್ನೂ ಓದಿ:

