ETV Bharat / state

ಐ ವಿಶ್​​ ಹಿಮ್ ಆಲ್ ದಿ ಬೆಸ್ಟ್, ಗುಡ್ ಲಕ್: ಸಿಎಂ ಸಿದ್ದರಾಮಯ್ಯಗೆ ಶುಭ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ಸಿದ್ದರಾಮಯ್ಯ ಅವರಿಗೆ ಯಶಸ್ಸು ಸಿಗಲಿ, ಭಗವಂತ ಒಳ್ಳೆಯದು ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶುಭ ಕೋರಿದ್ದಾರೆ.

D K SHIVAKUMAR
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : January 6, 2026 at 3:40 PM IST

2 Min Read
Choose ETV Bharat

ಬೆಂಗಳೂರು: ಐ ವಿಶ್ ಹಿಮ್ ಆಲ್ ದಿ ಬೆಸ್ಟ್, ಗುಡ್ ಲಕ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯಗೆ ಶುಭ ಹಾರೈಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನಾನೇ ಪೂರ್ಣಾವಧಿ ಸಿಎಂ ಆಗುವ ವಿಶ್ವಾಸ ಇದೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ಒಳ್ಳೆಯದಗಾಲಿ. ಗುಡ್ ಲಕ್. ಐ ವಿಶ್ ಹಿಮ್ ಆಲ್ ದಿ ಬೆಸ್ಟ್. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ.‌ ಗೊಂದಲ ಇರುವುದು ನಿಮ್ಮಲ್ಲಿ ಎಂದು ಸಮಜಾಯಿಷಿ ನೀಡಿದರು.

ಸಿಎಂ ಅವರು ದಾಖಲೆ ನಿರ್ಮಿಸುತ್ತಿರುವ ಬಗ್ಗೆ ಮಾತನಾಡಿ, ಅವರಿಗೆ ಯಶಸ್ಸು ಸಿಗಲಿ. ಭಗವಂತ ಒಳ್ಳೆಯದು ಮಾಡಲಿ. ಹೆಚ್ಚಿಗೆ ಆರೋಗ್ಯ ಸಿಗಲಿ. ಹೆಚ್ಚಿಗೆ ಜನರ ಸೇವೆ ಮಾಡುವ ಅವಕಾಶ ಸಿಗಲಿ ಎಂದು ಶುಭ ಕೋರಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆಯಲ್ಲಾ?: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ನೀಡಿದ ಪರಿಹಾರ ಹಣ ಮೂಲ ಕಾಂಗ್ರೆಸ್ ಪಕ್ಷದ್ದೋ, ಸರ್ಕಾರದಿಂದಲೋ?, ಐಟಿ ಇಲಾಖೆ ಏನು ಮಾಡುತ್ತಿದೆ ಎನ್ನುವ ಕುಮಾರಸ್ವಾಮಿ ಹಾಗೂ ಪ್ರತಿಪಕ್ಷಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, “ಐಟಿ ಸೇರಿದಂತೆ ಇತರ ಎಲ್ಲಾ ಇಲಾಖೆಗಳು ವಿರೋಧ ಪಕ್ಷಗಳ ಹತ್ತಿರವೇ ಇದೆಯಲ್ಲವೇ?, ಕುಮಾರಸ್ವಾಮಿ ಜೇಬಲ್ಲೇ ಇದ್ದಾವಲ್ಲ? ಪರಿಹಾರ ಹಣದ ಬಗ್ಗೆ ಜಮೀರ್ ಅವರ ಬಳಿ ಮಾತನಾಡುತ್ತೇನೆ” ಎಂದು ಉತ್ತರಿಸಿದರು.

ಬಳ್ಳಾರಿ ಭೇಟಿಯ ಬಗ್ಗೆ ಕೇಳಿದಾಗ, "ನಮಗೆ ಈ ರಾಜ್ಯದಲ್ಲಿರುವ ಹಾಗೂ ಬಳ್ಳಾರಿಯಲ್ಲಿ ಶಾಂತಿಯುತ ವಾತಾವರಣ ಉಳಿಯಬೇಕು. ಬಿಜೆಪಿಯವರು ಹತಾಶರಾಗಿ ಎಲ್ಲಾ ಕಡೆ ಇಂತಹ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲಿ ಹೋಗಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ" ಎಂದರು.

ಶೀಘ್ರ ಗುಣಮುಖರಾಗಲಿ: ಸೋನಿಯಾಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿ, "ಅನಾರೋಗ್ಯದ ಕಾರಣಕ್ಕೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದರ ಬಗ್ಗೆ ಅಧಿಕೃತ ಮಾಹಿತಿಯಿಲ್ಲ. ನನಗೂ ಇದರ ಬಗ್ಗೆ ಮಾಹಿತಿ ನೀಡಿದರು. ಅವರು ಶೀಘ್ರ ಗುಣಮುಖರಾಗಲಿ ಎಂದು ನಾವೆಲ್ಲರೂ ಪ್ರಾರ್ಥನೆ ಮಾಡುತ್ತೇವೆ. ದೀರ್ಘಕಾಲ ಆರೋಗ್ಯಯುತವಾಗಿರಲಿ. ಅವರ ಅಮೂಲ್ಯ ಸಲಹೆಗಳು ಈ ದೇಶ ಹಾಗೂ ಪಕ್ಷಕ್ಕೆ ಬೇಕಾಗಿದೆ. ಪಕ್ಷದ ಸಂಕಷ್ಟದ ಹೊತ್ತಿನಲ್ಲಿ ಅತ್ಯಮೂಲ್ಯ ಸಲಹೆ ನೀಡಿದವರು ಅವರು ಎಂದು ಹೇಳಿದರು.

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ - ಸಿಎಂ: ಮತ್ತೊಂದೆಡೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.

ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಈ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ. ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸುವ ವಿಶ್ವಾಸವಿದೆ ಎಂದರು.

ಇವುಗಳನ್ನೂ ಓದಿ:

ದೇವರಾಜ ಅರಸು ಅವರ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ: ಸಿಎಂ ಸಿದ್ದರಾಮಯ್ಯ

ದಾಖಲೆ ಬರೆಯುತ್ತಿರುವ ಸಿಎಂಗೆ ತುಂಬು ಹೃದಯದ ಶುಭ ಹಾರೈಕೆ‌; ಈ ಬಗ್ಗೆ ಉತ್ತಮವಾಗಿ ಪ್ರಚಾರ ಮಾಡಿ ಎಂದ ಡಿಸಿಎಂ