ETV Bharat / state

ಬೈಕ್‌ಗೆ ಡಿಕ್ಕಿ ಹೊಡೆದ ಮೈನ್ಸ್​ ಲಾರಿ: ತಂದೆ-ಮಗ ಸ್ಥಳದಲ್ಲೇ ಸಾವು

ಲಾರಿ ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ACCIDENT  BALLARI  ಲಾರಿ ಬೈಕ್‌ ಡಿಕ್ಕಿ  ಅಪಘಾತ
ಬೈಕ್‌ಗೆ ಡಿಕ್ಕಿಯಾದ ಮೈನ್ಸ್ ಲಾರಿ (ETV Bharat)
author img

By ETV Bharat Karnataka Team

Published : June 4, 2026 at 2:29 PM IST

1 Min Read
Choose ETV Bharat

ಬಳ್ಳಾರಿ: ಮೈನ್ಸ್​ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದು ತಂದೆ ಮತ್ತು ಮಗ ಮೃತಪಟ್ಟ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ನಂದಿಹಳ್ಳಿ ರಸ್ತೆಯಲ್ಲಿ ಗುರುವಾರ ನಡೆಯಿತು.

ಮೃತರನ್ನು ಬೆಳ್ಳಿ ನಾಗರಾಜ್ (45) ಹಾಗೂ ಅವರ ಪುತ್ರ ದುರ್ಗೇಶ್ ಎಂದು ಗುರುತಿಸಲಾಗಿದೆ.

ಇವರು ಸಂಡೂರಿನಿಂದ ನಂದಿಹಳ್ಳಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತಿ ವೇಗವಾಗಿ ಬಂದ ಮೈನ್ಸ್​ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪೊಲೀಸರು ಘಟನಾ ಸ್ಥಳ ಪರಿಶೀಲನೆ ನಡೆಸಿ, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಚಾಮರಾಜನಗರ: ಕಾರು-ಪಿಕ್ ಅಪ್ ಡಿಕ್ಕಿಯಾಗಿ 7 ತಿಂಗಳ ಮಗು, ವೃದ್ಧ ಸಾವು

ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್​ನಲ್ಲಿ ಬುಧವಾರ ತಡರಾತ್ರಿ ಈ ಘಟನೆ ಸಂಭವಿಸಿದೆ‌. ಕಾರು ಹಾಗೂ ಪಿಕ್ ಅಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನ ಮುಬಾರಕ್ (70) ಹಾಗೂ 7 ತಿಂಗಳ ಗಂಡು ಮಗು ಮೃತಪಟ್ಟವರು. ತಮಿಳುನಾಡು ಕಡೆಗೆ ತೆರಳುತ್ತಿದ್ದ ಬೊಲೆರೋ ಪಿಕ್ ಅಪ್ ಹಾಗೂ ತಮಿಳುನಾಡಿನಿಂದ ಬೆಂಗಳೂರಿನತ್ತ ಹೊರಟಿದ್ದ ಎರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.