ETV Bharat / state

ಪುತ್ತೂರು: ತಂದೆಯಿಂದ ಮಗಳ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೊ ಪ್ರಕರಣ ದಾಖಲು

ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪುತ್ತೂರು ಮಹಿಳಾ ಪೊಲೀಸ್ ಠಾಣೆ
ಪುತ್ತೂರು ಮಹಿಳಾ ಪೊಲೀಸ್ ಠಾಣೆ (ETV Bharat)
author img

By ETV Bharat Karnataka Team

Published : January 6, 2026 at 12:18 PM IST

2 Min Read
Choose ETV Bharat

ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ 40 ವರ್ಷದ ತಂದೆಯ ವಿರುದ್ದ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನೊಂದ ಬಾಲಕಿ ಮಂಗಳೂರು ಲೇಡಿಗೋಷನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಒಂದೇ ದಿನ ಎರಡು ಪ್ರತ್ಯೇಕ ಪೋಕ್ಸೊ ಕೇಸ್ ದಾಖಲು: ಹುಬ್ಬಳ್ಳಿ ನಗರದಲ್ಲಿ ಒಂದೇ ದಿನದಲ್ಲಿ ಎರಡು ಪ್ರತ್ಯೇಕ ಪೋಕ್ಸೊ ಪ್ರಕರಣಗಳು ಕಳೆದ ವಾರದ ದಾಖಲಾಗಿವೆ. ಶಹರ ಮತ್ತು ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕರಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದರು.

ಶಹರ ಠಾಣೆ ವ್ಯಾಪ್ತಿಯಲ್ಲಿ ಮೂವರು ಅಪ್ರಾಪ್ತರಿಂದ ಓರ್ವ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಮೂವರು ಆರೋಪಿಗಳು ಕೂಡ 15-16 ವರ್ಷದವರಾಗಿದ್ದಾರೆ.‌ ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ಅದರ ಬಗ್ಗೆಯೂ ಕೂಡ ತನಿಖೆ ನಡೆಸಲಾಗುತ್ತಿದೆ. ಪೋಷಕರು ಅಪ್ರಾಪ್ತ ಮಕ್ಕಳನ್ನು ಬಿಟ್ಟು ಹೋಗುವಾಗ ಯೋಚನೆ ಮಾಡಬೇಕು. ಅವರ ಮೇಲೆ ಪೋಷಕರು ಗಮನಹರಿಸಬೇಕು. ಮೂವರು ಅಪ್ರಾಪ್ತ ಆರೋಪಿಗಳು ಪೋಷಕರಿಲ್ಲದ ವೇಳೆ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಪ್ರಾಪ್ತ ಬಾಲಕಿ ಆರೋಗ್ಯವಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸರು ಆಯುಕ್ತರು ತಿಳಿಸಿದ್ದರು.

ಮತ್ತೊಂದೆಡೆ, ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತರಿಂದ ಓರ್ವ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಮಾಡಿದ ಆರೋಪ ಕುರಿತು ಪ್ರಕರಣ ದಾಖಲಾಗಿದೆ. ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಅದೇ ಶಾಲೆಯ ಇಬ್ಬರು ಬಾಲಕರು ಕಿರಿಕುಳ ನೀಡಿದ್ದಾರೆ. ಆಗ ಬಾಲಕಿ ಯಾಕೆ ಕಿರುಕುಳ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಬಾಲಕಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಅಪ್ರಾಪ್ತೆಯ ತಂದೆ ಮೇಲೂ ಹಲ್ಲೆ ಮಾಡಿದ್ದಾರೆ. ಇದರಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಅಪ್ರಾಪ್ರ ಬಾಲಕಿ ಜೊತೆ ‌ಅನುಚಿತ ವರ್ತನೆ ಹಾಗೂ ಹಲ್ಲೆ ಮಾಡಿರುವ ಆರೋಪ ಸಂಬಂಧ ಎರಡು ಪ್ರಕರಣ ದಾಖಲಿಸಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ್ದ ತಂದೆಗೆ ಮರಣದಂಡನೆ