ETV Bharat / state

ಬಾಗಲಕೋಟೆ: ಸರ್ಕಾರಿ ಶಾಲೆಯ ಕಬ್ಬಿಣದ ಗೇಟ್ ಮುರಿದು ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಸರ್ಕಾರಿ ಶಾಲೆಯ ಕಬ್ಬಿಣದ ಗೇಟ್ ಮುರಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Four students injured after iron gate of government school collapses
ಮುರಿದು ಬಿದ್ದ ಕಬ್ಬಿಣ ಗೇಟ್ (ETV Bharat)
author img

By ETV Bharat Karnataka Team

Published : July 6, 2026 at 9:00 PM IST

1 Min Read
Choose ETV Bharat

ಬಾಗಲಕೋಟೆ: ಸರ್ಕಾರಿ ಶಾಲೆಯ ಮುಖ್ಯ ದ್ವಾರದ ಕಬ್ಬಿಣದ ಗೇಟ್ ಏಕಾಏಕಿ ಮುರಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಇಲಕಲ್ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ದ್ವಾರ ಬಾಗಿಲುಗೆ ಕಬ್ಬಿಣದ ಗೇಟ್ ಅಳವಡಿಸಲಾಗಿತ್ತು. ನಾಲ್ವರು ವಿದ್ಯಾರ್ಥಿಗಳು ಶಾಲೆಗೆ ಬಂದ ಬಳಿಕ ಗೇಟ್​ ಪಕ್ಕದಲ್ಲಿ ಆಟ ಆಡುತ್ತಿದ್ದರು. ಈ ಸಮಯದಲ್ಲಿ ಗೇಟ್ ಏಕಾಏಕಿ ಮುರಿದು ಬಿದ್ದಿದೆ.

ನಾಲ್ವರ ಪೈಕಿ ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Four students injured after iron gate of government school collapses
ಮುರಿದು ಬಿದ್ದ ಕಬ್ಬಿಣ ಗೇಟ್ (ETV Bharat)

ಗೇಟ್ ಬಿದ್ದು ಮಕ್ಕಳಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮನೆಗೆ ತೆರಳಿದ್ದಾರೆ. ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಆರೋಗ್ಯವನ್ನು ಪರಿಶೀಲಿಸಿದರು. ಅಲ್ಲದೇ, ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ಬಾಲಕಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಇದೇ ವೇಳೆ ಆಕೆಯ ತಂದೆ ತಾಯಿಯೊಂದಿಗೆ ಸಮಾಲೋಚನೆ ಮಾಡಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಮನೆ ಮುಂದೆ ಆಟವಾಡುವಾಗ ಗೇಟ್ ಬಿದ್ದು, ಐದು ವರ್ಷದ ಬಾಲಕಿ ಸಾವು: ಮತ್ತೋರ್ವ ಬಾಲಕಿಗೆ ಗಾಯ