ಪ್ರಯಾಣಿಕರಿಗೆ ಗುಡ್ ನ್ಯೂಸ್: ವಾಯವ್ಯ ಸಾರಿಗೆಯ ಪ್ರತಿಷ್ಠಿತ ಸಾರಿಗೆ ಬಸ್ಗಳ ಪ್ರಯಾಣ ದರ ಇಳಿಕೆ..!
ಹುಬ್ಬಳ್ಳಿಯಿಂದ ಪ್ರಮುಖ ದೂರದ ಸ್ಥಳಗಳಿಗೆ ಸಾರಿಗೆ ವರ್ಗವಾರು ಹಳೆಯ ಪ್ರಯಾಣದರ ಹಾಗೂ ಪರಿಷ್ಕೃತ ಪ್ರಯಾಣ ದರದ ವಿವರಗಳನ್ನು ಕೋಷ್ಟಕದಲ್ಲಿ ಪ್ರಸ್ತುತಪಡಿಸಲಾಗಿದೆ.

Published : January 6, 2026 at 9:34 PM IST
ಹುಬ್ಬಳ್ಳಿ: ದೂರ ಮಾರ್ಗಗಳಲ್ಲಿ ಪ್ರಯಾಣ ಮಾಡುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಇರುವ ಆಯ್ದ ಕೆಲವು ಮಾರ್ಗಗಳಲ್ಲಿ ಸಂಚರಿಸುವ ಪ್ರತಿಷ್ಠಿತ ಸಾರಿಗೆ ಬಸ್ಗಳ ಪ್ರಯಾಣ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ.
ಪ್ರಸ್ತುತ ಕೆಲವು ದೂರ ಮಾರ್ಗದ ಪ್ರತಿಷ್ಟಿತ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ವಿವಿಧ ದೂರದ ಪ್ರಮುಖ ಸ್ಥಳಗಳ ನಡುವೆ ಸಂಚರಿಸುವ ಪ್ರತಿಷ್ಠಿತ ಸಾರಿಗೆ ಬಸ್ಗಳ ಪ್ರಯಾಣ ದರದಲ್ಲಿ ಇಳಿಕೆ ಮಾಡಲಾಗಿದೆ.

ಹುಬ್ಬಳ್ಳಿಯಿಂದ ಪ್ರಮುಖ ದೂರದ ಸ್ಥಳಗಳಿಗೆ ಸಾರಿಗೆ ವರ್ಗವಾರು ಹಳೆಯ ಪ್ರಯಾಣದರ ಹಾಗೂ ಪರಿಷ್ಕೃತ ಪ್ರಯಾಣ ದರದ ವಿವರಗಳನ್ನು ಕೋಷ್ಟಕದಲ್ಲಿ ಪ್ರಸ್ತುತಪಡಿಸಲಾಗಿದೆ.
ಮುಂಗಡ ಬುಕ್ಕಿಂಗ್; ರಿಯಾಯಿತಿ - www.ksrtc.in ವೆಬ್ ಸೈಟ್ KSRTC Mobile Booking App, ಹೊಸೂರು ಬಸ್ ನಿಲ್ದಾಣ ಮತ್ತು ಗೋಕುಲ ರಸ್ತೆ ಬಸ್ ನಿಲ್ದಾಣದಲ್ಲಿ ಮುಂಗಡ ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.
ಒಂದೇ ಟಿಕೆಟ್ನಲ್ಲಿ 4 ಅಥವಾ ಹೆಚ್ಚು ಆಸನಗಳನ್ನು ಕಾಯ್ದಿರಿಸಿದರೆ ಪ್ರಯಾಣದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆ ಒಂದೇ ಟಿಕೆಟ್ ಖರೀದಿಸಿದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇಕಡಾ 10ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 7760991674 / 7760991682 / 7760017682 ಸಂಪರ್ಕಿಸಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ: ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಮಿರ್ಚಿ ಘಮಲು: 20 ದಿನವೂ ದಾಸೋಹ
ಈ ನಡುವೆ ಬನದ ಹುಣ್ಣಿಮೆಯ ಪ್ರಯುಕ್ತ ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ನಡೆಯುವ ಪ್ರಸಿದ್ಧ ರೇಣುಕಾ ದೇವಿ ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಜಾತ್ರಾ ವಿಶೇಷ ಬಸ್ಗಳಿಗೆ ಇತ್ತೀಚೆಗಷ್ಟೇ ಹೊಸೂರು ಬಸ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸಿ, ಚಾಲನೆ ನೀಡಲಾಗಿತ್ತು.

ಜಾತ್ರಾ ವಿಶೇಷ ಕಾರ್ಯಕ್ರಮಕ್ಕಾಗಿ 30 ಬಸ್ಗಳು, 65 ಚಾಲನಾ ಸಿಬ್ಬಂದಿ, 12 ಅಧಿಕಾರಿಗಳು ಮತ್ತು 22 ಮೇಲ್ವಿಚಾರಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಯಾಣಿಕರ ದಟ್ಟಣೆ ಹೆಚ್ಚಾದಲ್ಲಿ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಕಳೆದ ವರ್ಷ ಬನದ ಹುಣ್ಣಿಮೆ ಜಾತ್ರೆಯ ಅವಧಿಯಲ್ಲಿ ಕಲ್ಪಿಸಲಾಗಿದ್ದ ವಿಶೇಷ ಬಸ್ಗಳಲ್ಲಿ 334 ಸರತಿಗಳಲ್ಲಿ 30 ಸಾವಿರಕ್ಕೂ ಹೆಚ್ಚು ಭಕ್ತರು ಪ್ರಯಾಣಿಸಿದ್ದರು ಎಂದು ರಾಮನಗೌಡರ್ ಹೇಳಿದ್ದರು.

