ETV Bharat / state

RSS ವಿರುದ್ಧ ಅವಹೇಳನ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್​ಗೆ ಜಾಮೀನು ಮಂಜೂರು

ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

HOME MINISTER PRIYANKA KHARGE  MOHAMMAD NALAPAD  BENGALURU  ಆರ್​ಎಸ್​ಎಸ್ ವಿರುದ್ಧ ಅವಹೇಳನ  RSS CASE
ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ (ETV Bharat)
author img

By ETV Bharat Karnataka Team

Published : August 29, 2026 at 3:46 PM IST

1 Min Read
Choose ETV Bharat

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್​ಎಸ್​ಎಸ್) ಹಾಗೂ ಸದಸ್ಯರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಹಾಗೂ ಸಂಘದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ ಪ್ರಕರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ 42ನೇ ಎಸಿಜೆಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್ ಹಾಜರಾಗಿದ್ದರು. ಕೋರ್ಟ್ ವಿಚಾರಣೆ ನಡೆಸಿ, ಅಂತಿಮವಾಗಿ 10 ಸಾವಿರ ರೂ. ವೈಯಕ್ತಿಕ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಹಿನ್ನೆಲೆ: ಪ್ರಿಯಾಂಕ್ ಖರ್ಗೆ ಅವರು 2025ರ ಅ.14ರಂದು ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು ಎಂಬ ಆರೋಪವಿದೆ. ಇನ್ನು ಮೊಹಮ್ಮದ್ ನಲಪಾಡ್ ಅವರು ಯೂಟ್ಯೂಬ್ ಚಾನೆಲ್​ವೊಂದರಲ್ಲಿ ಸಂಘದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ದೂರಲಾಗಿತ್ತು. ಈ ಹೇಳಿಕೆಗಳು ಮತ್ತು ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ ಘನತೆಗೆ ಧಕ್ಕೆ ತಂದಿವೆ ಎಂದು ಬೆಂಗಳೂರಿನ ಸಿದ್ದಾಪುರದ ನಿವಾಸಿ ದೂರು ನೀಡಿದ್ದರು.