ETV Bharat / state

ಶಾಸಕರಿಗೆ ಉಚಿತ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ

ಶಾಸಕರಿಗೆ ಉಚಿತ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.

DK SHIVAKUMAR REACTS ON IPL
ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)
author img

By ETV Bharat Karnataka Team

Published : May 6, 2026 at 5:18 PM IST

2 Min Read
Choose ETV Bharat

ಬೆಂಗಳೂರು: ಅಹಮದಾಬಾದ್​ನಲ್ಲಿ ದೊಡ್ಡ ಕ್ರೀಡಾಂಗಣವಿದೆ. ಹೆಚ್ಚು ಜನರು ಸೇರುತ್ತಾರೆ ಎಂಬ ಉದ್ದೇಶದಿಂದ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಉಚಿತ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು‌ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್​ಗೆ ಸ್ಥಳಾಂತರಗೊಂಡ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಶಾಸಕರಿಗೆ ಉಚಿತ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆಯಾ ಎಂಬ ವಿಚಾರವಾಗಿ ಕೇಳಿದಾಗ, ''ಬೇರೆ ಕಡೆ ಶೇ.50 ರಷ್ಟು ಮೀಸಲಿರುತ್ತದೆ. ಬಿಸಿಸಿಐ ಟಿಕೆಟ್ ವಿಚಾರಕ್ಕೆ ಸ್ಥಳಾಂತರ ನಿರ್ಧಾರ ಮಾಡಿದ್ದೇವೆ ಎಂದು ಹೇಳಿಕೆ ನೀಡಲಿ. ನಾನು ಅದಕ್ಕೆ ಸರಿಯಾದ ಉತ್ತರ ಕೊಡುತ್ತೇನೆ'' ಎಂದರು.

ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್​ಗೆ ಸ್ಥಳಾಂತರಗೊಂಡ ಬಗ್ಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸ್ಪಷ್ಟನೆ. (ETV Bharat)

ಪಕ್ಷದ ತೀರ್ಮಾನದ ಬಗ್ಗೆ ಮಾತನಾಡುವುದಿಲ್ಲ: ದಾವಣಗೆರೆಯಲ್ಲಿ ಮುಸ್ಲಿಂ ನಾಯಕರ ಅಮಾನತನ್ನು ವಾಪಸ್ ಪಡೆಯುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, "ನಾನು ಈ ಬಗ್ಗೆ ಏನೂ ಮಾತನಾಡುವುದಿಲ್ಲ. ಪಕ್ಷ ಈ ತೀರ್ಮಾನ ಮಾಡಿದೆ‌. ಸಿಎಂ ರಾಜಕೀಯ ಕಾರ್ಯದರ್ಶಿಯವರನ್ನು ಕೈಬಿಡಬೇಕಾದರೆ, ಆ ಬಗ್ಗೆ ಮುಖ್ಯಮಂತ್ರಿಯವರು ಮಾತನಾಡಿದ್ದರು. ಮುಖ್ಯಮಂತ್ರಿಗಳಿಗೆ ತಮ್ಮದೇ ಆದ ಮಾಹಿತಿ ಇರುತ್ತದೆ. ಪಕ್ಷದ ಪದಾಧಿಕಾರಿಗಳು ಮಾರ್ಗದರ್ಶನ ಮಾಡಿದ್ದಾರೆ. ಪಕ್ಷ ಅವರಿಗೆ ಕೆಲವು ಜವಾಬ್ದಾರಿಗಳನ್ನು ನೀಡಿತ್ತು. ಅದನ್ನು ಅವರು ಸರಿಯಾಗಿ ನಿಭಾಯಿಸಲಿಲ್ಲ. ಅದಕ್ಕೆ ಅವರನ್ನು ಆ ಸ್ಥಾನದಿಂದ ಇಳಿಸಲಾಯಿತು. ಜಬ್ಬಾರ್ ಅವರು ತಾವಾಗಿಯೇ ರಾಜೀನಾಮೆ ನೀಡಿದ್ದರು. ಅದನ್ನು ಸ್ವೀಕಾರ ಮಾಡಿದ್ದೇವೆ ಅಷ್ಟೇ" ಎಂದು ತಿಳಿಸಿದರು.

ಸಿಎಂ, ಡಿಸಿಎಂ ದೆಹಲಿ ಭೇಟಿ ವಿಚಾರ ಕೇಳಿದಾಗ, "ಅವರು (ಹೈಕಮಾಂಡ್) ಕರೆದಾಗ ನಾವು ಹೋಗುತ್ತೇವೆ. ಕರೆಯದೇ ಹೋಗುವುದು ಸರಿಯಲ್ಲ. ಕರೆಯುತ್ತಾರೆ, ಕರೆದಾಗ ನಾವು ಹೋಗುತ್ತೇವೆ" ಎಂದಷ್ಟೇ ಉತ್ತರಿಸಿದರು.

ಜಾತ್ಯತೀತ ತತ್ವ ಉಳಿಯಲು ತೀರ್ಮಾನ: ತಮಿಳುನಾಡಿನಲ್ಲಿ ಟಿವಿಕೆ(ತಮಿಳಿಗ ವೆಟ್ರಿ ಕಳಗಂ)ಗೆ ಕಾಂಗ್ರೆಸ್ ಬೆಂಬಲ ನೀಡಿರುವ ಬಗ್ಗೆ ಕೇಳಿದಾಗ, "ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು. ಜಾತ್ಯತೀತ ಶಕ್ತಿಗಳು ಒಂದಾಗಿ ಇರಬೇಕು ಎಂದು ಈ ತೀರ್ಮಾನ ಮಾಡಲಾಗಿದೆ. ಎಐಡಿಎಂಕೆ, ಬಿಜೆಪಿಯವರು ಎಷ್ಟೇ ಒತ್ತಡ ಹಾಕಿದರು ಟಿವಿಕೆಯವರು ಮೈತ್ರಿ ಮಾಡಿಕೊಳ್ಳಲಿಲ್ಲ. ಜಾತ್ಯತೀತ ಶಕ್ತಿ ಉಳಿಯಲು, ತಮಿಳುನಾಡಿನ ಹಿತಕ್ಕಾಗಿ ನಮ್ಮ ಪಕ್ಷ ತೀರ್ಮಾನ ಮಾಡಿದೆ" ಎಂದು ಡಿಕೆಶಿ ಹೇಳಿದರು.

ಐಪಿಎಲ್​ ಪ್ಲೇ-ಆಫ್ ಪಂದ್ಯಗಳ ವೇಳಾಪಟ್ಟಿ:

ಕ್ವಾಲಿಫೈಯರ್ 1: ಮೇ 26 - ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

ಎಲಿಮಿನೇಟರ್ : ಮೇ 27 - ಮಹಾರಾಜ ಯಾದವೀಂದ್ರ ಸಿಂಗ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ, ನ್ಯೂ ಚಂಡೀಗಢ್

ಕ್ವಾಲಿಫೈಯರ್ 2 : ಮೇ 29 - ಮಹಾರಾಜ ಯಾದವೀಂದ್ರ ಸಿಂಗ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ, ನ್ಯೂ ಚಂಡೀಗಢ್

ಫೈನಲ್ : ಮೇ 31 - ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

ಇದನ್ನೂ ಓದಿ: ಐಪಿಎಲ್ ಪ್ಲೇ-ಆಫ್, ಫೈನಲ್ ಪಂದ್ಯಗಳ ಸ್ಥಳ ನಿಗದಿ; ಬೆಂಗಳೂರಿನ ಕೈತಪ್ಪಿದ ಆತಿಥ್ಯ, ಕೆಎಸ್​ಸಿಎ ಪ್ರತಿಕ್ರಿಯೆ ಹೀಗಿದೆ