ಮನರೇಗಾ ರದ್ದು: ಕೇಂದ್ರದ ವಿರುದ್ಧ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ತೀರ್ಮಾನ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮನರೇಗಾ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕಾನೂನು ಹೋರಾಟಕ್ಕೆ ತೀರ್ಮಾನಿಸಲಾಯಿತು.

Published : January 8, 2026 at 7:42 PM IST
ಬೆಂಗಳೂರು: ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ರದ್ದುಗೊಳಿಸಿ ಜಿ ರಾಮ್ ಜಿ ಎಂದು ಪುನರ್‌ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕಾನೂನು ಹೋರಾಟ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಮಾತನಾಡಿರುವ ಕಾನೂನು ಸಚಿವ ಹೆಚ್.ಕೆ.ಪಾಟೀಲ್, "ಸಂಪುಟ ಸಭೆಯಲ್ಲಿ ಮನರೇಗಾ ರದ್ದು ಬಗ್ಗೆ ಚರ್ಚೆ ಆಗಿದೆ. ನರೇಗಾ ರದ್ದು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ತೀರ್ಮಾನ ಮಾಡಲಾಗಿದೆ. ಈ ವಿಚಾರವನ್ನು ಹೋರಾಟದ ಮೂಲಕ ಜನರ ಬಳಿಯೂ ಕೊಂಡೊಯ್ಯಲಿದ್ದೇವೆ. ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ನಲ್ಲಿ ಅರ್ಜಿ ಹಾಕಬೇಕೋ ಎಂಬ ಬಗ್ಗೆ ಎಜಿ ಅವರೊಂದಿಗಿನ ಪರಾಮರ್ಶೆಯ ಬಳಿಕ ತೀರ್ಮಾನ ಮಾಡಲಾಗುವುದು" ಎಂದರು.
ಸಚಿವ ಸಂಪುಟ ಸಭೆಯ ಇತರೆ ಪ್ರಮುಖ ತೀರ್ಮಾನಗಳು:
- ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL), ಬೆಂಗಳೂರು ಸಂಕೀರ್ಣಕ್ಕೆ ಸಾಬೂನು ತಯಾರಿಸುವ ಯಂತ್ರವನ್ನು 17.70 ಕೋಟಿ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ.
- ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ 50 TPD Bio CNG ಘಟಕವನ್ನು ರೂ. 24.96 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸುವ ಯೋಜನೆ ಕೈಬಿಟ್ಟು, ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು GAIL ಸಂಸ್ಥೆಯವರು ಕೋಲಾರದಲ್ಲಿ ಸ್ಥಾಪಿಸುತ್ತಿರುವ 150 TPD CBG ಘಟಕಕ್ಕೆ ಪೂರೈಸಲು ಒಪ್ಪಿಗೆ.
- ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು 50 ಕೋಟಿಗಳ ಮೊತ್ತದಲ್ಲಿ ಕಲ್ಯಾಣ ಪ್ರದೇಶಾಭಿವೃದ್ಧಿ ಕರ್ನಾಟಕ ಮಂಡಳಿಯ ಅನುದಾನದಿಂದ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ.
- ಕಲಬುರಗಿಯಲ್ಲಿ 10 ಕೋಟಿ ಮೊತ್ತದಲ್ಲಿ ಪ್ರಾದೇಶಿಕ ಸಹಕಾರ ಭವನವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಿಂದ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ.
- PM-ABHIM ಯೋಜನೆಯಡಿ 2024-2026ನೇ ಸಾಲಿನಲ್ಲಿ ರಾಜ್ಯದಾದ್ಯಂತ 196 SC-AAM (Rural Health and Wellness Centre)ಗಳನ್ನು 127.40 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು 31.12.2025 ರಂದು ಸರ್ಕಾರಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ.
- ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 31 ಜೀವಾವಧಿ ಶಿಕ್ಷಾ ಬಂದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಒಪ್ಪಿಗೆ. ಇಬ್ಬರು ಶಿಕ್ಷಾಬಂಧಿಗಳ ಸಂಬಂಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣವಾಗಿರುವುದರಿಂದ ಕೇಂದ್ರ ಸರ್ಕಾರದ ಅನುಮತಿ ಪಡೆದು ಅವಧಿಪೂರ್ವ ಬಿಡುಗಡೆಗೆ ತೀರ್ಮಾನ.
- ಬೆಂಗಳೂರಿನ ಜಯನಗರದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ 2ನೇ ಹಂತದ ಕಟ್ಟಡ ಕಾಮಗಾರಿಯನ್ನು ಅಂದಾಜು ರೂ.24 ಕೋಟಿ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
- ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣಗಳನ್ನು 40 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.
- ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ ರೂ.12.30 ಕೋಟಿಗಳ ಪರಿಷ್ಕೃತ ಮೊತ್ತಕ್ಕೆ ಅನುಮೋದನೆ.
- ತುಮಕೂರು ಜಿಲ್ಲೆ, ಶಿರಾ ತಾಲೂಕು, ಕಲ್ಲುಕೋಟೆ ಗ್ರಾಮದ ಸ.ನಂ.49 ರಲ್ಲಿ 72 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ 'ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು' ಇವರಿಗೆ ಮಂಜೂರು.
- ರಾಯಚೂರು ಜಿಲ್ಲೆ, ಸಿರವಾರ ತಾಲೂಕು, ಸಿರವಾರ ಸೀಮಾದ ಸ.ನಂ. 39/*/* ರಲ್ಲಿ 10 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣದ ಉದ್ದೇಶಕ್ಕಾಗಿ 'ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು' ಇವರಿಗೆ ಮಂಜೂರು.
- ಕಲಬುರಗಿ ಜಿಲ್ಲೆಯ ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ GTTC ಬಹುಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (KKRDB) ಅನುದಾನದಿಂದ ಎರಡನೇ ಹಂತದಲ್ಲಿ ರೂ.66.75 ಕೋಟಿಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ.
- ಹಳಿಯಾಳ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯಡಿ ನಿರ್ಮಿಸಲಾಗಿರುವ ವಿವಿಧ ಘಟಕಗಳ 5 ವರ್ಷಗಳ ನಿರ್ವಹಣೆ ಮತ್ತು ದುರಸ್ತಿ ಕಾಮಗಾರಿಯನ್ನು ರೂ.10.60 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
- ಶಿವಮೊಗ್ಗ, ಮಹಾನಗರ ಪಾಲಿಕೆಯಿಂದ ಆರ್.ಜಿ.ತೆಲಂಗ್ ಬಿನ್ ಗೋಪಾಲರಾಮಯ್ಯ ಅವರಿಗೆ ವಿನೋಬನಗರ 1ನೇ ಹಂತದಲ್ಲಿ ಹಂಚಿಕೆಯಾಗಿರುವ 1200 ಚದರ ಅಡಿ ನಿವೇಶನ ಸಂಖ್ಯೆ: 586ರ ಬದಲಿಗೆ ಅದೇ ಬಡಾವಣೆಯಲ್ಲಿ 1350 ಚದರ ಅಡಿ ವಿಸ್ತೀರ್ಣದ ನಿವೇಶನ ಸಂಖ್ಯೆ: 385ನ್ನು ಬದಲಿ ನಿವೇಶನವನ್ನಾಗಿ ಮಂಜೂರಿಗೆ ಒಪ್ಪಿಗೆ.
- 'ಅಕ್ಕ ಪಡೆ' ಯೋಜನೆಯನ್ನು ಒಳಾಡಳಿತ ಇಲಾಖೆಯ ಸಹಯೋಗದೊಂದಿಗೆ ರಾಜ್ಯದ 31 ಜಿಲ್ಲೆ ಹಾಗೂ 5 ಪೊಲೀಸ್ ಆಯುಕ್ತಾಲಯಗಳಲ್ಲಿ ಅನುಷ್ಠಾನಗೊಳಿಸಲು ಒಪ್ಪಿಗೆ.
- ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮಾ ಗಾಂಧಿ, ಇಂದಿರಾ ಗಾಂಧಿ, ಜವಾಹರಲಾಲ್ ನೆಹರೂ ಮತ್ತು ರಾಜೀವ್ ಗಾಂಧಿ ಪುತ್ಥಳಿಗಳನ್ನು ಸ್ಥಾಪಿಸಲು ಒಪ್ಪಿಗೆ.
- ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ಇಲ್ಲಿ 'ಆಡಳಿತ ಭವನ'ವನ್ನು ಲೋಕೋಪಯೋಗಿ ಇಲಾಖೆಯ ಮೂಲಕ 70.70 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
- ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಬ್ಬನಶಶಿಯ ಮತ್ತು ಗಂಗಕೊಳ್ಳದ ಕಡಲ ತೀರದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಯ 11.03 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆ.
- ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು, ಬಾಳೆಪುಣಿ ಗ್ರಾಮದ ಸ.ನಂ. 87/4ರಲ್ಲಿ 5-00 ಎಕರೆ ಜಮೀನನ್ನು ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗ ಇವರಿಗೆ ಮಂಜೂರಿಗೆ ಒಪ್ಪಿಗೆ.
- ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು, ಸಂಪಾಜೆ ಹೋಬಳಿ, ಮದೆ ಗ್ರಾಮದ ಸ.ನಂ. 98/1 ರಲ್ಲಿನ 2 ಅಥವಾ 3 ಎಕರೆ ಜಮೀನನ್ನು ಅರೆಭಾಷಿಕ ಗೌಡ ಜನಾಂಗಕ್ಕೆ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕ್ರೀಡಾ ಕೇಂದ್ರ ಸ್ಥಾಪನೆ ಉದ್ದೇಶಕ್ಕೆ ಕೊಡಗು ಗೌಡ ಸಮಾಜ(ರಿ) ಇವರಿಗೆ ಮಂಜೂರಿಗೆ ಒಪ್ಪಿಗೆ.
- ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ನಬಾರ್ಡ್ ಸಹಯೋಗದಲ್ಲಿ 20 ಕೋಟಿಗಳ ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ.
ಇದನ್ನೂ ಓದಿ: 'ಬಿ' ಖಾತಾ ನಿವೇಶನ, ಕಟ್ಟಡಗಳಿಗೆ 'ಎ' ಖಾತಾ ಭಾಗ್ಯ: ಯಾರಿಗೆಲ್ಲ ಪ್ರಯೋಜನ, ಷರತ್ತುಗಳೇನು?

