ETV Bharat / state

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: 7 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದ ವಿವಿಧೆಡೆ ಏಳು ಮಂದಿ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.

lokayukta-raids-places-related-to-seven-government-officials
ಲೋಕಾಯುಕ್ತ (ETV Bharat)
author img

By ETV Bharat Karnataka Team

Published : July 8, 2026 at 11:19 AM IST

1 Min Read
Choose ETV Bharat

ಬೆಂಗಳೂರು: ಆದಾಯಕ್ಕಿಂತಲೂ ಅಧಿಕ ಗಳಿಕೆ ಆರೋಪದಡಿ ರಾಜ್ಯಾದ್ಯಂತ ಏಳು ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು, ಬೆಂಗಳೂರು ದಕ್ಷಿಣ, ಚಿತ್ರದುರ್ಗ, ರಾಯಚೂರು, ಕಲಬುರಗಿ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಟ್ಟು 10 ಕಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಪರಿಶೀಲನೆ ಮುಂದುವರೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ವಿವರ:

ಬಸನಗೌಡ ಪಾಟೀಲ್ - ಎಕ್ಸಿಕ್ಯುಟಿವ್ ಇಂಜಿನಿಯರ್, ಕೃಷ್ಣಾ ಭಾಗ್ಯ ಜಲನಿಗಮ ಲಿಮಿಟೆಡ್ ನಾರಾಯಣಪುರ ಬಲದಂಡೆ ಕಾಲುವೆ ವಿಭಾಗ ನಂ.4, ರಾಯಚೂರು

ಶಂಕರ್ ಎಂ. - ಸಹಾಯಕ‌ ಪ್ರಾಧ್ಯಾಪಕ, ಕೃಷಿ ಎಂಜಿನಿಯರಿಂಗ್ - ತೋಟಗಾರಿಕೆ ವಿಶ್ವವಿದ್ಯಾಲಯ, ಚಿತ್ರದುರ್ಗ

ದುಗ್ಗಪ್ಪ ಬಿ.ಹೆಚ್. - ವಲಯ ಅರಣ್ಯ ಅಧಿಕಾರಿ, ಜಲಾನಯನ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ

ನರೇಂದ್ರ ಕುಮಾರ್ - ಎಕ್ಸಿಕ್ಯುಟಿವ್ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಬೆಂಗಳೂರು

ಪ್ರವೀಣ್ ಬಿ.ಶ್ರೀಹರಿ - ಸೂಪರಿಂಡೆಂಟ್ ಇಂಜಿನಿಯರ್, ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆ, ಬೆಂಗಳೂರು

ಪುಷ್ಪ ಡಿ.ಆರ್. - ಉಪ ನಿರ್ದೇಶಕಿ (ಆಡಳಿತ), ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಬೆಂಗಳೂರು

ಮಧುಸೂಧನ್ ಎನ್. - ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ತುಮಕೂರು

ತಿಮ್ಮೇಗೌಡ - ಪಿಡಿಒ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ - ಬೆಂಗಳೂರು ದಕ್ಷಿಣ

ಕಿರಣ್ ಅಂಗಡಿ - ಸಹಾಯಕ ಅರಣ್ಯ ಪರಿವರ್ತಕ, ಸಂಶೋಧನಾ ವಿಭಾಗ, ಶಿವಮೊಗ್ಗ

ಅಮೃತ್ ರಾವ್ - ಸಹಾಯಕ ಮಾಜಿ ಇಂಜಿನಿಯರ್, ಜೆಸ್ಕಾಂ, ಕಲಬುರಗಿ

ಅಸಮತೋಲಿತ ಹಾಗೂ ಆದಾಯಕ್ಕಿಂತ ಅಧಿಕ ಆಸ್ತಿ ಸಂಗ್ರಹಣೆಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಲಾಗಿದೆ. ಬೆಳಿಗ್ಗೆಯಿಂದಲೂ ದಾಖಲೆ ಪತ್ರಗಳ ಪರಿಶೀಲನೆ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಇನ್‌ಪುಟ್ ಟ್ಯಾಕ್ಸ್ ವರ್ಗಾಯಿಸಲು ₹90 ಸಾವಿರ ಲಂಚ: ಸಹಾಯಕ ವಾಣಿಜ್ಯ ತೆರಿಗೆ ಆಯುಕ್ತ ಅರೆಸ್ಟ್​​